October 28, 2026
#Uncategorized

ನ್ಯಾಯಕ್ಕಾಗಿ ಧ್ವನಿ ಎತ್ತಿದ ದರ್ಶನ್

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸ್ಯಾಂಡಲ್​ವುಡ್​ ನಟ-ನಟಿಯರು ಮಾತುಬಿಚ್ಚುತ್ತಿಲ್ಲ ಎಂಬ ಸಂಗತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದೇ ತಡ, ಇದೀಗ ನಟ ದರ್ಶನ ಟ್ವೀಟ್​ ಮಾಡಿದ್ದಾರೆ. ಟ್ವೀಟ್​ನಲ್ಲಿ ಕಾವೇರಿ ನೀರು ಹಂಚಿಕೆ ಬಗ್ಗೆ ಬರೆದುಕೊಂಡಿದ್ದಾರೆ.

ಟ್ವೀಟ್​ನಲ್ಲಿ ದರ್ಶನ್​ ತೂಗುದೀಪ, ‘‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’’ ಎಂದು ಬರೆದುಕೊಂಡಿದ್ದಾರೆ.

ಈ ವರ್ಷ ರಾಜ್ಯದಲ್ಲಿ ಮಳೆಯ ಅಭಾವದಿಂದ ಜನರು ಕಂಗಲಾಗಿದ್ದಾರೆ. ನೀರಿಲ್ಲದೆ ಬೆಳೆ ಬೆಳೆಯಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಕಾವೇರಿ ನಿಗಮ ಮಂಡಳಿಯಂತೆ ತಮಿಳುನಾಡಿಗೆ ಈಗಾಗಲೇ ನೀರು ಹರಿಸಲಾಗಿದೆ. ಆದರೆ ತಮಿಳುನಾಡು ಮಾತ್ರ ಮತ್ತಷ್ಟು ನೀರು ಬೇಕು ಎಂದು ಪಟ್ಟು ಹಿಡಿದಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ಸೇರಿದಂತೆ ಅನೇಕ ನಾಯಕರು ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಚರ್ಚಿಸಿದ್ದಾರೆ.

Leave a comment

Your email address will not be published. Required fields are marked *