4,000 ‘ಕೂಸಿನ ಮನೆ’ ಸ್ಥಾಪನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಗ್ರಾಮೀಣ ಜನರಿಗೆ ಮತ್ತೊಂದು ವಿಶಿಷ್ಟವಾದ ಯೋಜನೆ ರೂಪಿಸಲು ಮುಂದಾಗಿದ್ದು ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಎಕ್ಸ್ನಲ್ಲಿ ಮೂಲಕ ತಿಳಿಸಿದೆ.
ಗ್ರಾಮೀಣ ಜನರ ಬದುಕನ್ನು ಹಸನಾಗಿಸಲು ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 4,000 ಗ್ರಾಮ ಪಂಚಾಯತಿಗಳಲ್ಲಿ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಗ್ರಾಮೀಣ ಜನರಿಗಾಗಿ ಇದೊಂದು ವಿಶಿಷ್ಟವಾದ ಯೋಜನೆಯಾಗಿದೆ ಎನ್ನಲಾಗಿದೆ.
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ, ನರೇಗಾ ಕೂಲಿ ಕಾರ್ಮಿಕರ ಮಕ್ಕಳ ಪೋಷಣೆಗಾಗಿ, 3 ವರ್ಷದೊಳಗಿನ ಮಕ್ಕಳ ಪಾಲನೆ, ಪೋಷಣೆ ಹಾಗೂ ಸುರಕ್ಷತೆವೇ ಇದರ ಮುಖ್ಯ ಉದ್ದೇಶವಾಗಿದೆ. ಜೊತೆಗೆ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡಲು ಈ ಮಹತ್ವದ ಯೋಜನೆಯನ್ನು ಸರ್ಕಾರ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದೆ.













































































































































































































































































































































































































































































































































































































































































































































































































































































































































































































































































































































