September 14, 2026
#ಜಿಲ್ಲೆ

ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ


ಹುಬ್ಬಳ್ಳಿ: ಮೋದಿ ಅವರ ಉದಾತ್ತ ಚಿಂತನೆಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ ಇವತ್ತು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

https://imasdk.googleapis.com/js/core/bridge3.591.2_en.html#goog_1397891767

ನಾರಿ ಶಕ್ತಿ ವಂದನ್ ಅಧಿನಿಯಮ ಅಂಗೀಕಾರದ ಬಳಿಕ ತಮ್ಮ ದೆಹಲಿ ಕಚೇರಿಯಿಂದ ಹೇಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿರುವ ಅವರು, ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಹಿಳಾ ಮೀಸಲಾತಿ ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. 1980-90ರ ದಶಕದಿಂದ ಮಹಿಳಾ ಮೀಸಲಾತಿ ಕೂಗಿತ್ತು. ಹಲವು ಸರ್ಕಾರಗಳು ಬಂದು ಹೋದವು. ಅಟಲ್ ಬಿಹಾರಿ ವಾಜಪೇಯಿ ಬಹಳ ಪ್ರಯತ್ನ ಪಟ್ಟರು. ಸಂಪೂರ್ಣ ಬಹುಮತ ಇರದ ಕಾರಣ ಅವರ ಪ್ರಯತ್ನ ಆಗಲಿಲ್ಲ. ಮುಂದೆ ಬಂದ ಯುಪಿಎ ಸರ್ಕಾರ ಇದನ್ನು ವೋಟ್ ಬ್ಯಾಂಕ್ ರೀತಿ ನೋಡಿ, ಪ್ರಮಾಣಿಕ ಪ್ರಯತ್ನ ಮಾಡಲಿಲ್ಲ.

ಆದರೆ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾ ಶಕ್ತಿ ಕಾರಣದಿಂದ ಶಾಸನಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರ ಆಗಿದೆ. ಅತ್ಯಲ್ಪ ಎಂದರೆ 2 ವೋಟ್ ವಿರೋಧಿಂದ ಅಂಗೀಕಾರ ಆಗಿದೆ. ದೇಶದ ಎಲ್ಲ ಮಹಿಳೆಯರ ಪರವಾಗಿ ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Leave a comment

Your email address will not be published. Required fields are marked *