July 27, 2026
#ಬೆಂಗಳೂರು

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದ್ದು, ಇದೀಗ ವಾರ್ಡ್ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಕ್ಷೇಪಣೆ ಬಳಿಕ 225 ವಾರ್ಡಗಳನ್ನು ಅಧಿಕೃತಗೊಳಿಸಿ ಇಂದು (ಸೆಪ್ಟೆಂಬರ್ 25) ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ  243 ವಾರ್ಡ್​ಗಳನ್ನು ಕಾಂಗ್ರೆಸ್ ಸರ್ಕಾರ ಇದೀಗ 225ಕ್ಕೆ ಇಳಿಸಿದೆ. ಇದರೊಂದಿಗೆ  224 ವಾರ್ಡ್​ಗಳಿಗೆ ಚುನಾವಣೆ ನಡೆಯಲಿದೆ.

ವಾರ್ಡ್​ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಆಗಸ್ಟ್ 4ರಂದು ಅಧಿಸೂಚನೆ ಹೊರಡಿಸಿತ್ತು. ಇದಾದ ಬಳಿಕ ಆಯೋಗ ವಾರ್ಡ್​ಗಳ ಪುನರ್​ ರಚಿಸಿ, ಗಡಿ ಗುರುತಿಸಿ ಕರಡು ವರದಿಯನ್ನು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿತ್ತು. ಬಳಿಕ ವಾರ್ಡ್​ ವಿಂಗಡಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆಕ್ಷೇಪಗಳಿದ್ದರೆ 15 ದಿನದೊಳಗೆ ಲಿಖಿತ ರೂಪದಲ್ಲಿ ನಗರಾಭಿವೃದ್ಧಿ ಇಲಾಖೆಯ ಮುಖ್ಯಕಾರ್ಯದರ್ಶಿಗೆ ಸಲ್ಲಿಸಲು ಕೋರಲಾಗಿತ್ತು.

243 ವಾರ್ಡ್​ಗಳಿಂದ 225 ವಾರ್ಡ್​ಗಳಿಗೆ ವಾಪ್ತಿ ಕಡಿತಗೊಳಿಸಿದ್ದು, ವಿಧಾನಸಭೆ ಕ್ಷೇತ್ರ ಲೆಕ್ಕಾದಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರದಲ್ಲಿ ವಾರ್ಡ್​ಗಳ ಸಂಖ್ಯೆ ಕಡಿಮೆಯಾಗಿವೆ. ದಾಸರಹಳ್ಳಿ, ಯಲಹಂಕ,ಜಯನಗರ, ವಿಧಾನಸಭೆ ಕ್ಷೇತ್ರ ಹೊರತುಪಡಿಸಿದರೆ ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ವಾರ್ಡ್​ಗಳ ಸಂಖ್ಯೆ ಕಡಿತಗೊಳಿಸಲಾಗಿದೆ.

2021ರ ಜನವರಿ 29ರಂದು ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿಯ ವಾರ್ಡ್ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಿ ಅಧಿಸೂಚನೆ ಹೊರಡಿಸಿತ್ತು. ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದುಕೊಂಡಿತ್ತು.

Leave a comment

Your email address will not be published. Required fields are marked *