September 12, 2026
#ಬೆಂಗಳೂರು

ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ


ಬೆಂಗಳೂರು: ಬೆಂಗಳೂರು ಬಂದ್‌ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

https://imasdk.googleapis.com/js/core/bridge3.591.2_en.html#goog_1507400143

ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ. 

ಈ ಸಂದರ್ಭ ಮಾತನಾಡಿದ ಶಾಂತಕುಮಾರ್, ಪೊಲೀಸರು ಗೂಂಡಾಗಿರಿ ಮೂಲಕ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನ ಜನತೆ ಇದನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಬೀದಿಗಿಳಿಯಬೇಕು. ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸಬೇಕು. ಕರ್ನಾಟಕದ ರೈತರು ನಮಗೆ ಬೆಂಬಲ ನೀಡಿ ರಸ್ತೆಗಿಳಿಯಬೇಕು ಎಂದು ಮನವಿ ಮಾಡಿಕೊಂಡರು.

Leave a comment

Your email address will not be published. Required fields are marked *