ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ
ಬೆಂಗಳೂರು: ಕರ್ನಾಟಕ ಬಂದ್‌ಗೆ ಸರ್ಕಾರಿ ಸಾರಿಗೆ ಬೆಂಬಲ ನೀಡದೇ ಇದ್ದರೂ ಜನ ಬಾರದ ಕಾರಣ ಕಡಿಮೆ ಪ್ರಮಾಣದಲ್ಲಿ ಬಸ್ಸುಗಳು ರಸ್ತೆಗೆ ಇಳಿದಿದೆ.
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ (Majestic Bus Stand) ಬಸ್ಸುಗಳಿದ್ದರೂ ಪ್ರಯಾಣಿಕರು ಬರುತ್ತಿಲ್ಲ. ಪ್ಲಾಟ್ ಫಾರ್ಮ್ ಕೂಡಾ ಬಿಕೋ ಎನ್ನುತ್ತಿದ್ದು, ಕಡಿಮೆ ಸಂಖ್ಯೆಯ ಪ್ರಯಾಣಿಕರು ಬಸ್ಸು ಹತ್ತಿದ್ದಾರೆ.
ಉತ್ತರ ಕರ್ನಾಟಕ ಭಾಗ, ಮಲೆನಾಡು, ಕರಾವಳಿ ಭಾಗಕ್ಕೆ ತೆರಳುವ ಬಸ್ಸುಗಳ ಪ್ರಯಾಣಿಕರ ಸಂಖ್ಯೆ ಭಾರೀ ಇಳಿಕೆಯಾಗಿದೆ. ಬಂದ್ ಹಿನ್ನೆಲೆಯಲ್ಲಿ 50% ಕೆಎಸ್‌ಆರ್‌ಟಿಸಿ ಬಸ್ಸುಗಳು ಮಾತ್ರ ರಸ್ತೆಗೆ ಇಳಿದಿದೆ.
ಘಟಕ ನಿರ್ವಾಹಕರು ಅಗತ್ಯ ಇರುವ ಜಿಲ್ಲೆಗಳಿಗೆ ಪ್ರಯಾಣಿಕರ ವ್ಯವಸ್ಥೆ ನೋಡಿಕೊಂಡು ಬಸ್ ಸಂಚಾರ ಮಾಡಲು ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.













































































































































































































































































































































































































































































































































































































































































































































































































































































































































































































































































































































