September 14, 2026

ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್ ವುಡ್ 

ಹಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇವತ್ತು ಹಲವು ಕಡೆ ಚಿತ್ರರಂಗದವರ ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದರು. ವಿರೋಧದ ಹೋರಾಟ ಹೆಚ್ಚಾಗುತ್ತಿದ್ದಂತೆಯೇ ಒಬ್ಬೊಬ್ಬ ನಟರು ಸೋಷಿಯಲ್ ಮೀಡಿಯಾ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಹಿರಿಯ ನಟಿ, ಮಂಡ್ಯ ಕ್ಷೇತ್ರದ ಸಂಸದೆಯೂ ಆಗಿರುವ ಸುಮಲತಾ ಅಂಬರೀಶ್ ಅವರು […]

ಶಿವಕುಮಾರ್ ಒಬ್ಬ ನೀರಿನ ಕಳ್ಳ, ಆಯೋಗ್ಯ

ಶಿವಮೊಗ್ಗ: ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಒಬ್ಬ ನೀರಿನ ಕಳ್ಳ, ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗದೇ ಭೀಕರ ಬರಗಾಲ ಎದುರಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಹ ಎದುರಾಗಲಿದೆ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್‍ನವರು ಈ ಬಾರಿ ಲೋಕಸಭೆ […]

ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ

ನವದೆಹಲಿ: ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ ಎಂದರು. ಮಂಗಳವಾರ ತಡ ರಾತ್ರಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು […]

ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ

ತುಮಕೂರು, ಸೆಪ್ಟೆಂಬರ್​ 20: ಜಿಲ್ಲೆಯಲ್ಲಿ ಅಪಘಾತ ಪ್ರಕರಣ ನಿತ್ಯ ಆಗುತ್ತಿರುವುದನ್ನು ನೋಡುತ್ತಿದ್ದೇವೆ. ಗಾಯಾಳುಗಳನ್ನು 70 ಕಿ.ಮೀ. ದೂರದ ಬೆಂಗಳೂರಿಗೆ ಕಳಿಸಬೇಕಿತ್ತು. ಹೀಗಾಗಿ ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್ ಆರಂಭಿಸಬೇಕೆಂಬ​ ಬೇಡಿಕೆ ಇತ್ತು. ಬಹಳ ದಿನಗಳಿಂದ ಇದ್ದ ಬೇಡಿಕೆ ಈಗ ಈಡೇರಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ ಬಳಿಕ ಮಾತನಾಡಿದ ಅವರು, 2018-19ನೇ ಸಾಲಿನಲ್ಲಿ ಟ್ರಾಮಾ ಸೆಂಟರ್​​​ಗೆ ಮಂಜೂರಾತಿಯಾಗಿತ್ತು. 56 ಕೋಟಿ ವೆಚ್ಚದ ಆಧುನಿಕ ಟ್ರಾಮಾ ಸೆಂಟರ್​ಗೆ ಅಡಿಗಲ್ಲು ಹಾಕಿತ್ತು. ಮೂರು ತಿಂಗಳ ಹಿಂದೆ […]

ನ್ಯಾಯಕ್ಕಾಗಿ ಧ್ವನಿ ಎತ್ತಿದ ದರ್ಶನ್

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸ್ಯಾಂಡಲ್​ವುಡ್​ ನಟ-ನಟಿಯರು ಮಾತುಬಿಚ್ಚುತ್ತಿಲ್ಲ ಎಂಬ ಸಂಗತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದೇ ತಡ, ಇದೀಗ ನಟ ದರ್ಶನ ಟ್ವೀಟ್​ ಮಾಡಿದ್ದಾರೆ. ಟ್ವೀಟ್​ನಲ್ಲಿ ಕಾವೇರಿ ನೀರು ಹಂಚಿಕೆ ಬಗ್ಗೆ ಬರೆದುಕೊಂಡಿದ್ದಾರೆ. ಟ್ವೀಟ್​ನಲ್ಲಿ ದರ್ಶನ್​ ತೂಗುದೀಪ, ‘‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ […]

4,000 ‘ಕೂಸಿನ ಮನೆ’ ಸ್ಥಾಪನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಗ್ರಾಮೀಣ ಜನರಿಗೆ ಮತ್ತೊಂದು ವಿಶಿಷ್ಟವಾದ ಯೋಜನೆ ರೂಪಿಸಲು ಮುಂದಾಗಿದ್ದು ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್​ ಎಕ್ಸ್​ನಲ್ಲಿ ಮೂಲಕ ತಿಳಿಸಿದೆ. ಗ್ರಾಮೀಣ ಜನರ ಬದುಕನ್ನು ಹಸನಾಗಿಸಲು ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 4,000 ಗ್ರಾಮ ಪಂಚಾಯತಿಗಳಲ್ಲಿ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಗ್ರಾಮೀಣ ಜನರಿಗಾಗಿ ಇದೊಂದು ವಿಶಿಷ್ಟವಾದ ಯೋಜನೆಯಾಗಿದೆ ಎನ್ನಲಾಗಿದೆ. ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ, […]

ಯಾವುದೇ ರಾಜಕೀಯ ಸವಾಲಿಗೆ ಸಿದ್ಧ

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಹಕಾರ ಸಚಿವ ಕೆಎನ್ ರಾಜಣ್ಣ  ಮೂರು ಡಿಸಿಎಂಗಳ ಬೇಡಿಕೆಗೆ ತಾನು ಬದ್ಧ ಅಂತ ಹೇಳಿ ಅದಕ್ಕಾಗಿ ಯಾವುದೇ ರಾಜಕೀಯ ಸವಾಲು ಎದುರಿಸಲು ಸಿದ್ಧ ಎಂದು ಹೇಳಿದರು. ತಮ್ಮ ಬೇಡಿಕೆಗೆ ತೀವ್ರ ಸ್ವರೂಪದ ವಿರೋಧ ಮತ್ತು ನಾಯಕರಲ್ಲಿ ಇರುಸು ಮುರುಸು ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು; ಕಾಂಗ್ರೆಸ್ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದ್ದು ವೈಚಾರಿಕ ಭಿನ್ನತೆಗೆ ಅವಕಾಶವಿದೆಯೇ ಹೊರತು ಭಿನ್ನಮತಕ್ಕಿಲ್ಲ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಆಯ್ಕೆ ಸಂದರ್ಭದಲ್ಲಿ ಹೈ ಕಮಾಂಡ್ ಕೇವಲ ಒಂದು […]

ಬೆಳ್ಳಂಬೆಳ್ಳಗ್ಗೆ ಕುಡಿದು ಕರ್ತವ್ಯಕ್ಕೆ ಹಾಜರಾದ ಸರ್ಕಾರಿ ವೈದ್ಯ

ತುಮಕೂರು, ಸೆಪ್ಟೆಂಬರ್​ 20: ಸರ್ಕಾರಿ ಆಸ್ಪತ್ರೆ  ವೈದ್ಯರೊಬ್ಬರು ಪ್ರತಿದಿನ ಕುಡಿದು ಕರ್ತವ್ಯಕ್ಕೆ ಹಾಜರಾಗುತ್ತಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕೋಟಗುಡ್ಡ ಗ್ರಾಮದಲ್ಲಿ ನಡೆದಿದೆ. ಕೋಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ರಾಮಾಂಜಿನಪ್ಪ ಕುಡಿದು ಕರ್ತವ್ಯಕ್ಕೆ ಬರುತ್ತಿದ್ದ ವೈದ್ಯ. ಪ್ರತಿನಿತ್ಯ ಕುಡಿದು ಬಂದೇ ಡಾ. ರಾಮಾಂಜಿನಪ್ಪ ಡ್ಯೂಟಿಗೆ ಹಾಜರಾಗುತ್ತಿದ್ದರು. ಈ ಬಗ್ಗೆ ಹಲವಾರು ಮೇಲಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಬೆಳಿಗ್ಗೆ ಕೂಡ ಆಸ್ಪತ್ರೆ ಆವರಣದಲ್ಲೇ ಇರುವ ವಸತಿ ನಿಲಯದಲ್ಲಿ ಡಾ. ರಾಮಾಂಜಿನಪ್ಪ ಕುಡಿಯುತ್ತ ಕುಳಿತಿರುವಾಗ ಗ್ರಾಮಸ್ಥರು ರೆಡ್ […]

‘ಕಾಂತಾರ 2’ ಬಜೆಟ್ 100 ಕೋಟಿ ರೂಪಾಯಿ

ರಿಷಬ್‍ ಶೆಟ್ಟಿ ನಟಿಸಿ, ನಿರ್ದೇಶನ ಮಾಡಲಿರುವ ‘ಕಾಂತಾರ 2’ ಸಿನಿಮಾದ ಬಜೆಟ್ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಕಾಂತಾರ ಸಿನಿಮಾದ ಬಜೆಟ್ ಗಿಂತ ಎರಡ್ಮೂರು ಪಟ್ಟು ಹೆಚ್ಚಿನ ಬಜೆಟ್ ಬೇಡುವಂತಹ ಚಿತ್ರ ಇದಾಗಲಿದೆ ಎಂದು ಹೇಳಲಾಗಿತ್ತು. ಆದರೆ, ನಿಜವಾದ ಬಜೆಟ್ ಅನ್ನು ರಾಜ್ ಬಿ ಶೆಟ್ಟಿ  ಬಾಯ್ಬಿಟ್ಟಿದ್ದಾರೆ. ಸದ್ಯ ರಾಜ್ ಬಿ ಶೆಟ್ಟಿ ಅವರ ಟೋಬಿ ಸಿನಿಮಾ ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಕೇರಳದಲ್ಲಿ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಮಾಧ್ಯಮವೊಂದರ […]

ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ

ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಖಾಸಗಿ ಹೋಟೇಲ್‌ನಲ್ಲಿ ನಡೆದ ಸರ್ವ ಪಕ್ಷ ಸಂಸದರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮಾಡಲಾಗುವುದು ಎಂದು ಭರವಸೆ‌ ನೀಡಿದರು. ಮಳೆಯ ಕೊರತೆ ಅವಧಿಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು […]