September 14, 2026

ಮಂಗಳೂರು, ಉಡುಪಿಯಲ್ಲಿ ಬಂದ್‌ಗೆ ಬೆಂಬಲವೇ ಇಲ್ಲ

ಮಂಗಳೂರು: ಕಾವೇರಿ ನದಿ ನೀರಿಗಾಗಿ ಇಂದು ರೈತಪರ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಈ ಬಾರಿಯೂ ಬಂದ್‌ಗೆ ಕನಿಷ್ಠ ಬೆಂಬಲವೂ ಸಿಕ್ಕಿಲ್ಲ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಜನಜೀವನ ಎಂದಿನಂತೆ ನಡೆಯುತ್ತಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ. ಶಾಲಾ ಕಾಲೇಜುಗಳು ಕೂಡ ನಡೆಯುತ್ತಿದ್ದು, ಜನರಿಗೆ ಬಂದ್‌ನ ಅರಿವೇ […]

ಹಾಸನ, ಕೋಲಾರದಲ್ಲಿ ತೀವ್ರಗೊಂಡ ಪ್ರತಿಭಟನೆ; ಸರ್ಕಾರಿ ಬಸ್‌ ಸಂಚಾರಕ್ಕೆ ಹೋರಾಟಗಾರರಿಂದ ತಡೆ!

ಹಾಸನ: ಕಾವೇರಿ ನದಿ ನೀರಿಗಾಗಿ ಇಂದು ರೈತಪರ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ. ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ ಹಾಸನದಲ್ಲಿ ಕೂಡ ಹೋರಾಟಗಾರರು ಬಂದ್‌ ನಡೆಸುವಂತೆ ಪಟ್ಟು ಹಿಡಿದಿದ್ದು ಈ ವೇಳೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದ ಘಟನೆ ನಡೆದಿದೆ. ಬಂದ್ ಇದ್ದರೂ ಜನಸಾಮಾನ್ಯರು ಲೆಕ್ಕಿಸದೆ ತಮ್ಮ ಎಂದಿನ ಕಾರ್ಯದಲ್ಲಿ ತೊಡಗಿಕೊಳ್ಳಲು ಮುಂದಾಗಿದ್ದರು. ಬಸ್ ಸಂಚಾರ […]

ಕನ್ನಡ ಹೋರಾಟಗಾರರು ಗೂಂಡಾಗಳಲ್ಲ

ಬೆಂಗಳೂರು: I.N.D.I.A ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ […]

ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ

ಬೆಂಗಳೂರು: ಕರ್ನಾಟಕ ಬಂದ್‌ಗೆ ಸರ್ಕಾರಿ ಸಾರಿಗೆ ಬೆಂಬಲ ನೀಡದೇ ಇದ್ದರೂ ಜನ ಬಾರದ ಕಾರಣ ಕಡಿಮೆ ಪ್ರಮಾಣದಲ್ಲಿ ಬಸ್ಸುಗಳು ರಸ್ತೆಗೆ ಇಳಿದಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ (Majestic Bus Stand) ಬಸ್ಸುಗಳಿದ್ದರೂ ಪ್ರಯಾಣಿಕರು ಬರುತ್ತಿಲ್ಲ. ಪ್ಲಾಟ್ ಫಾರ್ಮ್ ಕೂಡಾ ಬಿಕೋ ಎನ್ನುತ್ತಿದ್ದು, ಕಡಿಮೆ ಸಂಖ್ಯೆಯ ಪ್ರಯಾಣಿಕರು ಬಸ್ಸು ಹತ್ತಿದ್ದಾರೆ.  ಉತ್ತರ ಕರ್ನಾಟಕ ಭಾಗ, ಮಲೆನಾಡು, ಕರಾವಳಿ ಭಾಗಕ್ಕೆ ತೆರಳುವ ಬಸ್ಸುಗಳ ಪ್ರಯಾಣಿಕರ ಸಂಖ್ಯೆ ಭಾರೀ ಇಳಿಕೆಯಾಗಿದೆ. ಬಂದ್‌ ಹಿನ್ನೆಲೆಯಲ್ಲಿ 50% ಕೆಎಸ್‌ಆರ್‌ಟಿಸಿ ಬಸ್ಸುಗಳು ಮಾತ್ರ ರಸ್ತೆಗೆ ಇಳಿದಿದೆ. ಘಟಕ […]

ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ, 44 ವಿಮಾನಗಳ ಹಾರಾಟ ಸ್ಥಗಿತ

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಹೌದು… ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು […]

ಬಂದ್‌ ಇದ್ದರೂ ಬಸ್ಸುಗಳು ರಸ್ತೆಯಲ್ಲಿ ಸಂಚರಿಸುತ್ತೆ

ಬೆಂಗಳೂರು: ನಾಳೆ ಕರ್ನಾಟಕ ಬಂದ್‌ ಇದ್ದರೂ ಬಸ್‌ಗಳ ಸಂಚಾರ ಇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮಾತನಾಡಿದ ಅವರು, ವಿಮಾನ ನಿಲ್ದಾಣ ಸೇರಿದಂತೆ ಎಲ್ಲಾ ಎಲ್ಲಾ ಭಾಗಕ್ಕೂ ಕಡಿಮೆ ಪ್ರಮಾಣದಲ್ಲಿ ಬಸ್ ಸಂಚಾರ ಇರಲಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಸ್ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದರು. ಬಂದ್ ಮಾಡುವವರು ಶಾಂತಿಯುತವಾಗಿ ಬಂದ್ ಮಾಡಲಿ. ಇವತ್ತಿನ ಕಾವೇರಿ ಸಮಸ್ಯೆಗೆ (Cauvery Problem) ಬಿಜೆಪಿಯೇ ಕಾರಣ. ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹಾರ ಮಾಡಲು ಮುಂದಾಗಬೇಕು ಎಂದು ರಾಮಲಿಂಗಾರೆಡ್ಡಿ […]

ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ 

ಹೈದರಾಬಾದ್‌: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್‌ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್​ ತಂಡ ಬುಧವಾರ ತಡರಾತ್ರಿ ಹೈದರಾಬಾದ್​ಗೆ ಬಂದಿಳಿದಿದೆ. ಈ ವೇಳೆ ಪಾಕಿಸ್ತಾನ ತಂಡದ ಆಟಗಾರರಿಗೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.PauseUnmute ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಆಜಂ ಸೇರಿದಂತೆ ಕೆಲವು ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು, ಇದೀಗ ಟ್ವಿಟರ್​ನಲ್ಲಿ ಸಖತ್‌ ಟ್ರೆಂಡ್​ ಆಗಿದೆ. ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ಬಂದ ಪಾಕಿಸ್ತಾನ ತಂಡದ ಆಟಗಾರರಿಗೆ […]

ಒಂದೇ ವಾರದಲ್ಲಿ ಎರಡು ದಿನ ಬಂದ್, ರಾಜ್ಯಕ್ಕೆ 4,000 ಕೋಟಿ ರೂ. ನಷ್ಟ!

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿ ಬಿಡದಂತೆ ವಿವಿಧ ರೈತ ಸಂಘಟನೆಗಳು ಹಾಗೂ ಕನ್ನಡಪರ ಹೋರಾಟಗಾರರು ಮಂಗಳವಾರ (ಸೆ.26) ಬೆಂಗಳೂರು ಬಂದ್ ನಡೆಸಿದ್ದರು. ಇದೇ ವಿಚಾರವಾಗಿ ನಾಳೆ (ಸೆ.29) ಇಡೀ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ. ಈ ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳ ಜೊತೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಎಎಪಿ ಕೂಡ ಕೈಜೋಡಿಸಿವೆ. ಹೀಗಾಗಿ ನಾಳೆಯ ಬಂದ್ ಇನ್ನೊಮ್ಮೆ ವಿವಿಧ […]

ಬಿಬಿಎಂಪಿ ಚುನಾವಣೆ: ಮತದಾರರ ಕರಡು ಪಟ್ಟಿ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಆಧಾರದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಕ್ಟೋಬರ್ 27 ರಂದು ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಬಿಬಿಎಂಪಿಯ ಬಹು ನಿರೀಕ್ಷಿತ ಚುನಾವಣೆಯ ತಯಾರಿಯಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 2024 ರ ಜನವರಿ 5 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಬಿಬಿಎಂಪಿ ಪ್ರಕಾರ, ಕೇಂದ್ರ ಚುನಾವಣಾ ಆಯೋಗದ ಸೆಪ್ಟೆಂಬರ್ 25 ರ ನಿರ್ದೇಶನಗಳ ಆಧಾರದ ಮೇಲೆ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ, ಬಿಬಿಎಂಪಿ ವಾರ್ಡ್ […]

ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

ಬೆಂಗಳೂರು: ಕರ್ನಾಟಕ ಬಂದ್ ಕರೆ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಗುಂಪು ಸೇರುವಂತೆ ಇಲ್ಲ. ಬಂದ್‌ಗಳನ್ನು ಕರೆಯುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬಂದ್ ವೇಳೆ ಆಸ್ತಿ […]