September 14, 2026

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡು ಪಕ್ಷದ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ಬಿಜೆಪಿ-ಜೆಡಿಎಸ್ ನಾಯಕರು ದೋಸ್ತಿಗೆ ಅಸಮಾಧಾನ ವ್ಯಕ್ತಪಡಿಸಿ ನನ್ನ ಬಳಿ ಮಾತನಾಡಿದ್ದಾರೆ. ನಾನು ಸಿಎಂ, ಮಂತ್ರಿಗಳು, ಪ್ರಮುಖ ನಾಯಕರು ಈ ಬಗ್ಗೆ ಕುಳಿತು ಮಾತಾಡಬೇಕಿದೆ. ಚರ್ಚೆ ಮಾಡಿ ಅಸಮಾಧಾನ ಇರೋರ ಜೊತೆ ನಾನು ಮಾತನಾಡುತ್ತೇನೆ ಎಂದರು. ಬಹಳಷ್ಟು ನಾಯಕರು ಕಾಂಗ್ರೆಸ್‌ಗೆ ಬರುತ್ತೇವೆ ಎಂದು […]

ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

ಪಾಟ್ನಾ: ತಂದೆ-ಮಗ ದಲಿತ ಮಹಿಳೆಯ ಬಳಿ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ, ಮೂತ್ರ ಕುಡಿಸಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಘಟನೆಯಿಂದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರ ಪ್ರಕಾರ, ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಮಗ ಅಂಶು ಮತ್ತು ಇತರ ನಾಲ್ವರು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ […]

ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್

ಮೈಸೂರು: ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ.  ಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ […]

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ ನಾಡು ಇಂದು ಸಾಕ್ಷಿಯಾಗಲಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ. ಮುಖ್ಯಮಂತ್ರಿಗಳ ಸೂಚನೆ ಏನು?ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ […]

ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಚೈತ್ರಾ ಮತ್ತು ಗ್ಯಾಂಗ್‌ ಅನ್ನು ಸಿಸಿಬಿ ಇಂದು (ಶನಿವಾರ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು.  ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಚೈತ್ರಾ ಸೇರಿದಂತೆ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನನಾಯ್ಕ್, ಧನರಾಜ್, ಶ್ರೀಕಾಂತ್ ಆರೋಪಿಗಳನ್ನು […]

ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡರ್  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ  ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಶನಿವಾರ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ. ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ಕೋರಿದ್ದರು. ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದ್ದು, […]

ವಿಜಯ್ ನಟನೆಯ ‘ಲಿಯೋ’ ಚಿತ್ರಕ್ಕೆ ಕೇರಳದಲ್ಲಿ ಬೈಕಾಟ್

ತಮಿಳಿನ ಖ್ಯಾತ ನಟ ದಳಪತಿ ವಿಜಯ್ ನಟನೆಯ, ಬಹುನಿರೀಕ್ಷಿತ ‘ಲಿಯೋ’ ಸಿನಿಮಾವನ್ನು ಬೈಕಾಟ್ ಮಾಡಬೇಕು ಎನ್ನುವ ಕೂಗು ಕೇರಳದಲ್ಲಿ ಕೇಳಿ ಬರುತ್ತಿದೆ. ಲಿಯೋ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಬೇರೆ ಮಾಡಲಾಗುತ್ತಿದೆ. ಹೀಗಾಗಿ ಸಹಜವಾಗಿಯೇ ನಿರ್ಮಾಪಕರಿಗೆ ಆತಂಕ ಎದುರಾಗಿದೆ. ತಮಿಳು ನಟ ವಿಜಯ್ ಮತ್ತು ಮಲಯಾಳಂ ನಟ ಮೋಹನ್ ಲಾಲ್ ಅಭಿಮಾನಿಗಳು ಯಾವಾಗಲೂ ಕಿತ್ತಾಡುತ್ತಿರುತ್ತಾರೆ. ಈ ಜೋಡಿ ನಟನೆಯ ‘ಜಿಲ್ಲಾ’ ಸಿನಿಮಾದ ಸಂದರ್ಭದಲ್ಲಿ ವಿಜಯ್ ಅಭಿಮಾನಿಯೊಬ್ಬ ಮೋಹನ್ ಲಾಲ್ ಅವರಿಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದ್ದ, […]

ರಾಜ್ಯದ ಮೊದಲ ಹೆಲ್ತ್ ಎಟಿಎಂ ಕಲಬುರಗಿಯಲ್ಲಿ ಆರಂಭ

ಕಲಬುರಗಿ: ಎಟಿಎಂ ಮಷಿನ್‌ಗಳ ಮೂಲಕ ಜನರು ಸುಲಭವಾಗಿ ಹಣ ಪಡೆಯಬಹುದು. ಆದರೆ ಇದೀಗ ರಾಜ್ಯದಲ್ಲಿ ಮೊದಲ ಬಾರಿಗೆ ಕಲಬುರಗಿಯಲ್ಲಿ ಆರೋಗ್ಯ ಇಲಾಖೆ ಹೆಲ್ತ್ ಎಟಿಎಂ ಆರಂಭಿಸಿದೆ. ಆದರೆ ಹೆಲ್ತ್ ಎಟಿಎಂ ಹಣ ನೀಡೋದಿಲ್ಲ. ಬದಲಾಗಿ ಹತ್ತೇ ನಿಮಿಷದಲ್ಲಿ ವ್ಯಕ್ತಿಯ ಆರೋಗ್ಯದ ರಿಪೋರ್ಟ್ ಕಾರ್ಡ್ ನೀಡುತ್ತದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೂತನ ತಂತ್ರಜ್ಞಾನದ ಹೆಲ್ತ್ ಎಟಿಎಂಗಳನ್ನು ಕಲಬುರಗಿಯಲ್ಲಿ ಆರಂಭಿಸಲಾಗಿದೆ. ಡೈಗ್ನೋಸ್ಟಿಕ್ ಕೇಂದ್ರಗಳಿಗೆ ಹೋಗಿ, ಅಲ್ಲಿ ದಿನಗಟ್ಟಲೆ ಕಾಯಬೇಕಾದ ಸ್ಥಿತಿಗೆ ಮುಕ್ತಿ ಹಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಸೆಪ್ಟೆಂಬರ್ 17 ರಂದು […]

ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಸರ್ ಪ್ರೈಸ್ ಕೊಟ್ಟಿದೆ ಅನಿಮಲ್ ಸಿನಿಮಾ ಟೀಮ್. ಇಂದು ಬಾಲಿವುಡ್ ನ ‘ಅನಿಮಲ್’ ಸಿನಿಮಾದ ರಶ್ಮಿಕಾ ಅವರ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಈ ಸಿನಿಮಾದಲ್ಲಿ ಅವರು ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗೀತಾಂಜಲಿ ಎಂಬ ಪಾತ್ರದ ಮೂಲಕ ಅಭಿಮಾನಿಗಳನ್ನು ರಶ್ಮಿಕಾ ರಂಜಿಸಲಿದ್ದಾರೆ. ‘ಅನಿಮಲ್’ ಚಿತ್ರ ತಂಡದಿಂದ ಮತ್ತೊಂದು ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಇದೀಗ ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಅನಿಮಲ್ ಚಿತ್ರದಲ್ಲಿನ ರಣ್‌ಬೀರ್ ಖಡಕ್ ಲುಕ್ ರಿವೀಲ್ […]

ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ

ಮಂಗಳೂರು: ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು. ಮೂರು ಡಿಸಿಎಂ ಪಕ್ಷದ […]