July 29, 2026
#ಜಿಲ್ಲೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ- ನಾಲ್ವರು ಕಾರ್ಮಿಕರು ಗಂಭೀರ


ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

https://imasdk.googleapis.com/js/core/bridge3.594.0_en.html#goog_924253874

ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂದವರು ಎಂಬುದಾಗಿ ತಿಳಿದುಬಂದಿದೆ.

ಘಟನೆ ವಿವರ: ಮಾರ್ಬಲ್ ಅನ್ ಲೋಡ್‍ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. 

ಘಟನೆ ನಡೆದ ಕೂಡಲೇ ಸ್ಥಳೀಯರು ಜಮಾಯಿಸಿ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *