September 13, 2026
#ಜಿಲ್ಲೆ

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ


ಶಿವಮೊಗ್ಗ: ನಗರದಲ್ಲಿ ಏಕಕಾಲಕ್ಕೆ 3 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಸೇರಿದ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ.

https://imasdk.googleapis.com/js/core/bridge3.594.0_en.html#goog_853145612

ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಜಾನೆಯೇ 2 ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳು ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಹೊರಗಡೆ ಕಾದು ಕುಳಿತಿದ್ದಾರೆ. 

ಮಂಜುನಾಥ್ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಟ್ಟಮಕ್ಕಿಯಲ್ಲಿರುವ ನಿವಾಸ, ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸ ಹಾಗೂ ಕರಿಕುಚ್ಚಿ ಗ್ರಾಮದ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. 

Leave a comment

Your email address will not be published. Required fields are marked *