September 13, 2026
#Uncategorized #ಬೆಂಗಳೂರು

ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಶಿಫಾರಸ್ಸು

ಬೆಂಗಳೂರು,ಅ.05: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಜೊತೆಗೆ ‘ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದು ಸಚಿವ ಹೆಚ್‌.ಕೆ ಪಾಟೀಲ್ ಹೇಳಿದರು.

https://a08320d062e7597a70345efe0644c4c4.safeframe.googlesyndication.com/safeframe/1-0-40/html/container.html

ಮೂರು ಶಿಫಾರಸ್ಸಿಗೆ ಅಸ್ತು

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು ‘ ಮೊದಲನೆದಾಗಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರದಂತೆ ನೋಡಿಕೊಂಡು ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ. ಎರಡನೇದಾಗಿ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನ ಒಬಿಸಿಗೆ ಮೀಸಲಿರಿಸುವ ಜೊತೆಗೆ ಮೂರನೇಯದಾಗಿ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಶಾಖೆಗಳನ್ನು ಆಡಳಿತ ಸುಧಾರಣಾ ಇಲಾಖಾ ಹತೋಟಿಗೆ ನೀಡಲು ನ್ಯಾ. ಡಾ.ಕೆ.ಭಕ್ತವತ್ಸಲ ಸಮಿತಿ ನೀಡಿದ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಿದೆ.

https://a08320d062e7597a70345efe0644c4c4.safeframe.googlesyndication.com/safeframe/1-0-40/html/container.html

ಇದರ ಜೊತೆಗೆ ಇಂದು ಅನೀಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ  ಸಂಪುಟದಲ್ಲಿ ದೊರೆತಿದೆ.  5 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರಲ್ಲದ ಮಹಿಳೆಯರು ಸೇರಿದಂತೆ  15 ವರ್ಷ ಮೇಲ್ಪಟ್ಟ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆಯಬಹುದು. ಮತ್ತು ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನ್ಶಿಯೇಟಿವ್‌ ಪ್ರೋಗ್ರಾಂಗೆ 25 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇದನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು.

Leave a comment

Your email address will not be published. Required fields are marked *