September 12, 2026
#ಬೆಂಗಳೂರು

ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್


ಬೆಂಗಳೂರು: ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ ಬಿಜೆಪಿ ಸಂಸದರು ಸ್ವಾಗತ ಕೋರಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿ ಪ್ರಧಾನಿ ಮೋದಿಯವರಿಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ. ನಾಳೆ ಚಲ್ಲಘಟ್ಟ-ಕೆಂಗೇರಿ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ. 

ಈ ಕುರಿತು ಸಂಸದರಾದ ಡಿವಿ ಸದಾನಂದ ಗೌಡ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಜನತೆ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.

Leave a comment

Your email address will not be published. Required fields are marked *