July 29, 2026
#ಜಿಲ್ಲೆ

ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ


ಬೆಳಗಾವಿ: ಹನಿಟ್ರ್ಯಾಪ್ ಮಾಡುತ್ತಿರುವ ಆರೋಪ ಹೊರಿಸಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಗೋಕಾಕ್‌ನ ಘಟಪ್ರಭಾದಲ್ಲಿ ನಡೆದಿದೆ.

https://imasdk.googleapis.com/js/core/bridge3.595.0_en.html#goog_1971898911

ಮಹಿಳೆ ವಿರುದ್ಧ ಹನಿಟ್ರ‍್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪವನ್ನು ನಗರದ ಮಹಿಳೆಯರು ಹಾಗೂ ಸ್ಥಳೀಯರು ಮಾಡಿದ್ದಾರೆ. ಇದೇ ಕಾರಣಕ್ಕೆ ನಗರದ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಈ ರೀತಿಯಾಗಿ ವರ್ತಿಸಿದ್ದಾರೆ. ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿರುವ ವಿಚಾರವಾಗಿ ಈ ಹಿಂದೆ ಸಹ ಗಲಾಟೆಯಾಗಿತ್ತು ಎನ್ನಲಾಗಿದೆ. 

ಆಗಾಗ ಊರಿನವರು ಹಾಗೂ ಮಹಿಳೆಯ ನಡುವೆ ಗಲಾಟೆ ನಡೆಯುತ್ತಿತ್ತು. ಮಹಿಳೆ ಹನಿಟ್ರ್ಯಾಪ್ ಮಾಡುತ್ತಿರುವ ಬಗ್ಗೆ ಕೆಲವು ದಿನಗಳ ಹಿಂದೆ ಎಸ್‌ಪಿಗೂ ಮನವಿ ಮಾಡಲಾಗಿತ್ತು. ಆದರೂ ಮಹಿಳೆಯೊಂದಿಗೆ ಗಲಾಟೆ ಮುಂದುವರೆದಿದ್ದು ಸ್ಥಳೀಯರು ಈ ರೀತಿ ನಡೆದುಕೊಂಡಿದ್ದಾರೆ. ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a comment

Your email address will not be published. Required fields are marked *