ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ
ಉಡುಪಿ: ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿವೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ. ಯಾವ ಕಾರಣಕ್ಕೆ ಇಂಥ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 12,500 ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಅಂಗಡಿಯ ವರ್ಗಾವಣೆಗೆ 18 ಲಕ್ಷ ರೂಪಾಯಿ ಸರಕಾರಕ್ಕೆ ಪಾವತಿಸುವ ನಿಯಮವಿದೆ. ಹೆಚ್ಚುವರಿ 25 ಲಕ್ಷ ರೂಪಾಯಿಗೆ ಅಧಿಕಾರಿಗಳು ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹೊಸ ಸನ್ನದಿಗೆ 10 ಲಕ್ಷದ ಬದಲು 75 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಿಂದ 42,000 ಕೋಟಿ ರೂಪಾಯಿ ಆದಾಯ ಬರುತ್ತದೆ. ಅಬಕಾರಿ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರದ ಕೋಪವಾಗಿ ವ್ಯಾಪಾರಿಗಳನ್ನು ಕಾಡುತ್ತಿದ್ದಾರೆ. ಲಂಚ ಕೊಡದೆ ಯಾವ ಕೆಲಸವು ಆಗುದಿಲ್ಲ. ಅಧಿಕಾರಿಗಳು ಮಾಹಿತಿ ಹಕ್ಕಿನ ಏಜೆಂಟ್ಗಳಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ದಯವಿಟ್ಟು ಈ ಪತ್ರದ ಹಿನ್ನೆಲೆಯಲ್ಲಿ ತನಿಖೆ ಆಗಬೇಕು. ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಸಚಿವರ ತನಿಖೆ ಆಗಬೇಕು. ಮುಖ್ಯಮಂತ್ರಿಗಳ ಕೃಪಾಕಟಾಕ್ಷದ ಅಡಿಯಲ್ಲೇ ಇದೆಲ್ಲವೂ ನಡೆಯುತ್ತಿದೆಯೇ? ಮುಖ್ಯಮಂತ್ರಿಯಾಗಿ ತಾವು ತೆಗೆದುಕೊಂಡ ಕ್ರಮವನ್ನು ಜನತೆ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.














































































































































































































































































































































































































































































































































































































































































































































































































































































































































































































































































































































