July 29, 2026
#ಜಿಲ್ಲೆ

ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ

ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಆಗದಿರುವ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

https://imasdk.googleapis.com/js/core/bridge3.595.0_en.html#goog_1401130198

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಇನ್ನಷ್ಟು ಅನುದಾನ ನೀಡಿ ಎಂದು ಭಿಕ್ಷೆ ಬೇಡಲು ಬೆಂಗಳೂರಿಗೆ ಹೋಗಿದ್ದೆ. ಈಗಾಗಲೇ ಉತ್ಸವಕ್ಕೆ ಸರ್ಕಾರ 2 ಕೋಟಿ ರೂ. ಅನುದಾನ ನೀಡಿದೆ. ಇನ್ನಷ್ಟು ಅನುದಾನ ಕೊಡಲಿ ಎಂದು ಭಿಕ್ಷೆ ಬೇಡಲು ಹೋಗಿದ್ದೆ. ಕಳೆದ ವರ್ಷದಿಂದ ರಾಜ್ಯಮಟ್ಟದ ಉತ್ಸವವಾಗಿ ಕಿತ್ತೂರು ಉತ್ಸವ ಆಚರಿಸಲಾಗಿತ್ತು ಎಂದಿದ್ದಾರೆ. 

ಹಿಂದಿನ ಬಿಜೆಪಿ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಣೆ ಮಾಡಿದ್ದರು. 2021ರಲ್ಲೇ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದರು. ಜೊತೆಗೆ ಕಿತ್ತೂರು ಉತ್ಸವಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ಈಗಿನ ಸರ್ಕಾರ ಕೇವಲ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *