ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ IT ದಾಳಿ – ಆಭರಣ ವ್ಯಾಪಾರಿಗಳಿಗೆ ಬಿಗ್ ಶಾಕ್
ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ (ಜ್ಯುವೆಲರಿ ಶಾಪ್) ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಮಂಗಳೂರಿನ ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ IT ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದಲ್ಲಿ ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿರುವುದು ಕಂಡುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಆಭರಣ ಮಳಿಗೆಗಳಿವೆ. ಉಡುಪಿಯ (Udupi0 ಹಲವಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿರುವುದು ತಿಳಿದುಬಂದಿದೆ.
ಇದೇ ವೇಳೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಹೆಬ್ರಿ ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.








































































































































































































































































































































































































































































































































































































































































































































































































































































































































































































































































































































