September 14, 2026

ದೇಶದ ಬಡವರ ಆರಾಧ್ಯ ದೈವ ಆಗಿದ್ರು ಇಂದಿರಾಗಾಂಧಿ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್‍ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ (KPCC Office) ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಲಾಲ್ ಬಹಾದ್ದೂರ್ ಶಾಸ್ತ್ರಿ ಸಂಪುಟದಲ್ಲಿ ಮಂತ್ರಿ ಆಗಿದ್ರು. ಲಾಲ್ ಬಹಾದ್ದೂರ್ ಶಾಸ್ತ್ರಿ ನಂತರ ದೇಶದ ಪ್ರಧಾನಿ ಆದರು. ದೇಶದ ಬಡವರ ಆರಾಧ್ಯ ದೈವ ಆಗಿದ್ರು […]

ಮೆಡಿಕಲ್ ಸೀಟ್ ಕೊಡಿಸುವುದಾಗಿ 20 ಜನರಿಗೆ ಲಕ್ಷ ಲಕ್ಷ ವಂಚನೆ – ಆರೋಪಿ ಅಂದರ್

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ತೆಲಂಗಾಣ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದೆ. ನೀಟ್ ಪರೀಕ್ಷೆಯ ಫಲಿತಾಂಶದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಗಾಳ ಹಾಕುತ್ತಿದ್ದ. ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಒಳ್ಳೆಯ ಕಾಲೇಜ್‍ನಲ್ಲಿ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ […]

ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ IT ದಾಳಿ – ಆಭರಣ ವ್ಯಾಪಾರಿಗಳಿಗೆ ಬಿಗ್‌ ಶಾಕ್

ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ (ಜ್ಯುವೆಲರಿ ಶಾಪ್) ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ IT ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.  ಈ ಸಂದರ್ಭದಲ್ಲಿ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದಲ್ಲಿ ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ […]

ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ (ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. Advertisement: 1:13Close Player ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಸ್ಕಾರ್ಪಿಯೋ ಕಾರಿನಿಂದ ಕೊಲೆ ಮಾಡುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊಲೆಗೆ ಕಾರಣವೇನು..?: ಅಸ್ಗರ್ ಹಾಗೂ ಅಮ್ರಿನ್ […]

ರಾಜ್ಯದಲ್ಲಿರುವುದು ಏಕಪಕ್ಷ ಸಮ್ಮಿಶ್ರ ಸರ್ಕಾರ- ಬಿಜೆಪಿ ವ್ಯಂಗ್ಯ

ಬೆಂಗಳೂರು: ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೆ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.  ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ […]

ಯಾರು ಸಿಎಂ ಆದ್ರೂ ತಪ್ಪಿಲ್ಲ: ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಕಾಂಗ್ರೆಸ್‌ನಲ್ಲಿ 50 ಮಂದಿ ಸಿಎಂ ಅಭ್ಯರ್ಥಿಗಳಿದ್ದಾರೆ. ಯಾರೂ ಸಿಎಂ ಆದರೂ ತಪ್ಪಿಲ್ಲ ಎಂದು ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್‌ ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ತಪ್ಪಿಲ್ಲ ಎನ್ನುವ ಹೇಳಿಕೆ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಶಾಸಕರು, 50 ಜನ ಸಿಎಂ ಆಗುವಂತ ಅಭ್ಯರ್ಥಿಗಳಿದ್ದಾರೆ, ಯಾರೂ ಸಿಎಂ ಆದ್ರೂ ತಪ್ಪಿಲ್ಲ. ಎಲ್ಲರಿಗೂ ಸಿಎಂ ಆಗುವ ಆಸೆ ಆಕಾಂಕ್ಷೆ ಇದ್ದೆ ಇರುತ್ತೆ. ಯಾರ್ಯಾರು ಪ್ರಯತ್ನ ಮಾಡ್ತಿದ್ದಾರೆ ಒಳಗೊಳಗೆ ಮಾಡ್ತಿರಬೇಕು. ಆದ್ರೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರ ಬದಲಾವಣೆ […]

ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್

ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ದಾಳಿ ಚಿತ್ರದುರ್ಗದಲ್ಲಿಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. […]

ಇಂದು ವರ್ಷದ ಕೊನೆಯ ಚಂದ್ರಗ್ರಹಣ

ಬೆಂಗಳೂರು: ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ ಕಾಣುತ್ತ ಬಳಿಕ ಕ್ರಮೇಣ ಕೆಂಪಾಗುವುದು ಚಂದ್ರಗ್ರಹಣದ ಸಂದರ್ಭದಲ್ಲಿ ನಡೆಯುತ್ತದೆ. ಇಂದು ರಾತ್ರಿ 11.31ಕ್ಕೆ ಆರಂಭವಾಗಲಿರುವ ಈ ಭಾಗಶಃ ಚಂದ್ರಗ್ರಹಣ , ಬೆಳಗ್ಗಿನ ಜಾವ 3.36 ಹಾಗೆ ಕೊನೆಯಾಗಲಿದೆ. ರಾತ್ರಿ 11.31ರ ಹಾಗೆ ಗ್ರಹಣ ಆರಂಭವಾದರೂ ಅದರ ಸಂಪೂರ್ಣ ಛಾಯೆ ಮಧ್ಯರಾತ್ರಿ ಬಳಿಕವೇ ಅಂದರೆ ರಾತ್ರಿ 1.05ರ ಹಾಗೆ ಸಂಪೂರ್ಣವಾಗಿ ಆವರಿಸಿಕೊಳ್ಳಲಿದೆ. ಭಾನುವಾರ […]

23 ವರ್ಷಗಳ ಬಳಿಕ ಗೆದ್ದು ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡ ಆಫ್ರಿಕಾ 

ಚೆನ್ನೈ: ಜಿದ್ದಾಜಿದ್ದಿನಿಂದ ಕಣದಲ್ಲಿ ವಿಶ್ವ ಕಪ್​ನ 26ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಪಾಕಿಸ್ತಾನದ ವಿರುದ್ಧ 1 ವಿಕೆಟ್​ ರೋಚಕ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 23 ವರ್ಷಗಳ ಬಳಿಕ ICC ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿದೆ. ಅಲ್ಲದೇ ಅಂಕಪಟ್ಟಿಯಲ್ಲಿ ಭಾರತವನ್ನೂ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ. ಇಲ್ಲಿನ ಚೇಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ 46.4 ಓವರ್‌ಗಳಲ್ಲಿ 270 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ್ದ ದಕ್ಷಿಣ […]

ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ: ಸಿ.ಟಿ. ರವಿ ವಾಗ್ದಾಳಿ

ಚಿಕ್ಕಮಗಳೂರು: ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ. ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್‌ ಹುಲಿ ಉಗುರಿನ ನಾಟಕವಾಡುತ್ತಿದೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಸಿ.ಟಿ.ರವಿ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ಪತ್ತೆಯಾದ ಕೋಟ್ಯಂತರ ಹಣದ ಚರ್ಚೆಯ ದಾರಿ ತಪ್ಪಿಸುವ ನಾಟಕವನ್ನು ಕಾಂಗ್ರೆಸ್‌ ಆಡಿದೆ. ಜನರ ಆಕ್ರೋಶಕ್ಕೆ ವಿರಾಮ ಹಾಕಲು, ಕಮಿಷನ್ ಕಲೆಕ್ಟರ್, ಡೆಪ್ಯೂಟಿ ಕಮಿಷನ್ ಕಲೆಕ್ಟರ್ ಅವರ […]