October 28, 2026
#ಜಿಲ್ಲೆ

ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು 


ಬೆಳಗಾವಿ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದಲ್ಲಿ MES ಪುಂಡರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನಾಚರಣೆ ಮಾಡಿದ 18 ಮಂದಿ ಎಂಇಎಸ್ ಪುಂಡರ ವಿರುದ್ಧ ಕೇಸ್ ದಾಖಲಾಗಿದೆ.

ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ (Market Police Station) ಎಂಇಎಸ್ ಕಿಡಿಗೇಡಿಗಳ ವಿರುದ್ಧ FIR ದಾಖಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸಿ ನಾಡದ್ರೋಹ ಘೋಷಣೆ ಕೂಗಿದ್ದ 18 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. 

ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು‌. ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಅಂತ ನಾಡದ್ರೋಹಿ ಘೋಷಣೆ ಕೂಗಿ ಮೊಂಡತನ ಪ್ರದರ್ಶನ ಮಾಡಿದ್ದರು. 

ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ, ರಂಜಿತ್ ಚವ್ಹಾಣ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ, ಯಳ್ಳೂರಕರ್ ಪ್ರಕಾಶ ಮರಗಾಲಿ, ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಕೇಸ್ ದಾಖಲಾಗಿದೆ. 

Leave a comment

Your email address will not be published. Required fields are marked *