July 29, 2026
#ಜಿಲ್ಲೆ

ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

ಮಂಡ್ಯ: ನಾನು ಮಂಡ್ಯದ ಸೊಸೆ, ಯಾವತ್ತೂ ಮಂಡ್ಯವನ್ನು ಬಿಡುವುದಿಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ ಹಾಗೂ ಸಿದ್ಧಾಂತವನ್ನು ಬಿಡುವುದಿಲ್ಲ. ಇದನ್ನೂ ರಕ್ತದಲ್ಲಿ ಬರೆದು ಕೊಡಬೇಕಾ? ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

https://imasdk.googleapis.com/js/core/bridge3.600.0_en.html#goog_1589276733

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗುವುದಿಲ್ಲ. ಜೆಡಿಎಸ್ (JDS) ಬಿಜೆಪಿ ಮೈತ್ರಿ ಆಗಿದೆ. ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈ ಬಗ್ಗೆ ಈಗ ಎದ್ದಿರುವ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಬಗ್ಗೆ ನಾನು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. 

ಕ್ಷೇತ್ರ ಹಂಚಿಕೆ ಬಗ್ಗೆ ನೂರಾರು ಮಾತುಕತೆ ನಡೆದಿರಬಹುದು. ಆದರೆ ಯಾವುದೇ ಕ್ಷೇತ್ರ ಹಂಚಿಕೆ ಇನ್ನೂ ಖಚಿತವಾಗಿಲ್ಲ. ಮಂಡ್ಯ ಜನ ನನ್ನ ಜೊತೆ ಯಾವಾಗಲೂ ಇದ್ದಾರೆ. ನನಗೆ ಆ ಆತ್ಮವಿಶ್ವಾಸವಿದೆ, ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ನಾನು ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ ಎಂದಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಆಫರ್ ಅನ್ನು ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ. ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಬೇರೆ ಕ್ಷೇತ್ರದ ಆಫರ್ ಅನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಈ ವಿಷಯವನ್ನು ನೂರಾರು ಬಾರಿ ಹೇಳಿದ್ದೇನೆ. ಇದನ್ನು ನನ್ನ ರಕ್ತದಲ್ಲಿ ಬರೆದು ಕೊಡಬೇಕಾ? ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ರಾಜಕಾರಣ ಯಾವಾಗಲೂ ಒಂದು ಸವಾಲು. ಈ ಸವಾಲಿಗೆ ಹೆದರುವ ಸ್ವಭಾವ ನನ್ನದಲ್ಲ ಎಂದು ಅವರು ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 

Leave a comment

Your email address will not be published. Required fields are marked *