May 30, 2026
#ಬೆಂಗಳೂರು

ಮೋದಿ, ಅಮಿತ್ ಶಾರಿಂದ ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ: ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ನಡ್ಡಾರವರು ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

https://imasdk.googleapis.com/js/core/bridge3.603.0_en.html#goog_600952002

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಈ ಬಗ್ಗೆ ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ. 

ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಾವು ಪ್ರವಾಸ ಮಾಡಿದ ಮೇಲೆ ಜನರ ಪ್ರತಿಕ್ರಿಯೆ ನೋಡಿದ ಮೇಲೆ ಕಾಂಗ್ರೆಸ್‍ನವರಿಗೆ ತಿಳಿಯಲಿದೆ. ನಮಗೆಲ್ಲ ಮೋದಿಯಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದಿದ್ದಾರೆ.

ಈ ವೇಳೆ ಯತ್ನಾಳ್ ಹಾಗೂ ಸೋಮಣ್ಣರಿಗೆ ಕರೆ ಮಾಡಿ ಯಡಿಯೂರಪ್ಪ ಅವರು ಮಾತಾಡಿದ್ದಾರೆ. ಪಕ್ಷ ಸಂಘಟನೆ ಮುಖ್ಯ ಎಲ್ಲರೂ ಒಟ್ಟಾಗಿರೋಣ ಎಂದು ಈ ವೇಳೆ ಮನವಿ ಮಾಡಿದ್ದಾರೆ.

Leave a comment

Your email address will not be published. Required fields are marked *