May 30, 2026
#ಜಿಲ್ಲೆ

ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ


ಮೈಸೂರು: ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದರ ವರ್ಗಾವಣೆ ಎಲ್ಲಿಗೆ ಆಗಿದೆ? ಆ ಕ್ಷೇತ್ರದ ವ್ಯಾಪ್ತಿ ಯಾವುದು? ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ

https://imasdk.googleapis.com/js/core/bridge3.605.0_en.html#goog_1899366563

ವಿಡಿಯೋ ವೈರಲ್ ಬಗ್ಗೆ ಮೈಸೂರಿನಲ್ಲಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೇ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಅನಗತ್ಯವಾಗಿ ಎಲ್ಲಾ ವಿಚಾರದಲ್ಲಿ ನನ್ನ ಹೆಸರನ್ನ ಡ್ರ‍್ಯಾಗ್ ಮಾಡಬೇಡಿ ಎಂದರು. 

ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿಎಸ್‌ಆರ್ ಫಂಡ್ ವಿಚಾರದ ಬಗ್ಗೆ. ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆಗೆ ಯಾಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಪ್ರಶ್ನಿಸಿದರು. 

ಇವರ ಅವಧಿಯಲ್ಲಿ ಲಿಸ್ಟ್ ಎಂದರೆ ವರ್ಗಾವಣೆ ಎಂದರೇ ಅದು ದಂಧೆಯಾಗಿತ್ತಾ? ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯೆಲ್ಲಾ ದಂಧೆಯೇ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ? ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ? ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೇ ಇವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ವಾ ಎಂದು ಹರಿಹಾಯ್ದರು. 

ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ (Transfer) ಹೆಸರು ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ನೀಚ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿ ಆರೋಪ ಮಾಡುವುದು ನೀಚ ರಾಜಕಾರಣ. ತಂದೆಯವರ ವಿಚಾರದಲ್ಲಿ ಕುಮಾರಸ್ವಾಮಿ ಏನೂ ಆರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ಕುಟುಂಬದವರನ್ನು ಬಳಸಿಕೊಂಡು ಅವರನ್ನು ಅಣಿಯುವ ಪ್ರಯತ್ನವನ್ನು ಇವರು ಮೊದಲಿನಿಂದಲೂ ಮಾಡುತ್ತಿದ್ದಾರೆ. ಯಾವುದರಲ್ಲಾದರೂ ಸಿಎಂ ಕುಟುಂಬವನ್ನು ಸಿಲುಕಿಸುವ ಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು. 

Leave a comment

Your email address will not be published. Required fields are marked *