July 28, 2026
#ಬೆಂಗಳೂರು

ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು: 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿಯನ್ನು ಕರ್ನಾಟಕ ಲೋಕಾಯುಕ್ತ  ಸಾರ್ವಜನಿಕಗೊಳಿಸಿದೆ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ. ಈ ಬಾರಿಯ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಬೇಕಿತ್ತು. ಆಸ್ತಿ ವಿವರ ಸಲ್ಲಿಸದ ಎಲ್ಲಾ ಜನಪ್ರತಿನಿಧಿಗಳಿಗೆ ಸೆಪ್ಟೆಂಬರ್ 1ರಂದು ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ರೂ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ.

ಜೂನ್ 30ರ ಅವಧಿ ಮುಗಿದ ಬಳಿಕ 10 ಶಾಸಕರು ಮತ್ತು ಒಬ್ಬರು ವಿಧಾನಪರಿಷತ್ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ.

ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸಿರಲಿಲ್ಲ. ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗಾ ರೆಡ್ಡಿ, ಕೆ.ಎಚ್ ಮುನಿಯಪ್ಪ ಸಹ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಗಡುವು ನೀಡಿದ್ದ ನ್ಯಾಯಮೂರ್ತಿಗಳು

ಎಲ್ಲಾ 224 ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಕೆ ಮಾಡುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿಎಸ್​ ಪಾಟೀಲ್ ಗಡುವು ನೀಡಿದ್ದರು. ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದುಕೊಂಡು ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಲಾಗಿತ್ತು.

ಕಳೆದ ಬಾರಿ ಆಸ್ತಿ ವಿವರ ಸಲ್ಲಿಕೆ ಮಾಡಲಾಗಿದೆ ಎಂದು ಮರು ಆಯ್ಕೆಯಾದ ಶಾಸಕರು ನಿರ್ಲಕ್ಷ್ಯ ಮಾಡುವಂತಿಲ್ಲ. ಆಸ್ತಿ ವಿವರ ಸಲ್ಲಿಸದ ಶಾಸಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.

Leave a comment

Your email address will not be published. Required fields are marked *