ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಮಗ ಯತೀಂದ್ರ ಸಿದ್ದರಾಮಯ್ಯ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆ ಜೊತೆ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಬರೆದಿರುವ ಹೆಚ್‌ಡಿ ಕುಮಾರಸ್ವಾಮಿ, ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ […]







































































































































































































































































































































































































































































































































































































































































































































































































































































































































































































































































































































