September 13, 2026

ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಗೃಹ ಇಲಾಖೆ ಸೂಚನೆ ಮೇರೆಗೆ ತನಿಖೆ ಸಿಐಡಿಗೆ ಹಸ್ತಾಂತರ‌‌

ಯಾದಗಿರಿ: ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣದ ತನಿಖೆಯನ್ನು ಶನಿವಾರ ಸಿಐಡಿ (CID) ಗೆ ಹಸ್ತಾಂತರ ಮಾಡಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ. ಕಿಂಗ್​ಪಿನ್​ ಆರ್​.ಡಿ ಪಾಟೀಲ್ ಬಂಧನ KEA ಪರೀಕ್ಷೆ ಅಕ್ರಮ ಆರೋಪಿ ಕಿಂಗ್​ಪಿನ್​ ಆರ್​.ಡಿ ಪಾಟೀಲ್​ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಲಾಡ್ಜ್ ನಲ್ಲಿದ್ದ ರುದ್ರಗೌಡನನ್ನು ಪತ್ತೆ […]

ದೀಪಾವಳಿ ಹೊತ್ತಲ್ಲಿ ಖಾಸಗಿ ಬಸ್ ಮಾಲೀಕರಿಗೆ ಶಾಕ್ – ಆರ್‌ಟಿಒ ಅಧಿಕಾರಿಗಳಿಂದ ದಾಳಿ

ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಇಂದಿನಿಂದ ಸಾಲು ಸಾಲು ರಜೆಗಳನ್ನು ನೀಡಲಾಗಿದೆ. ಜನ ಊರುಗಳಿಗೆ ತೆರಳಲು ಉತ್ಸುಕರಾಗಿದ್ದು, ಚೆನ್ನಾಗಿ ದುಡ್ಡು ಮಾಡಬಹುದು ಎಂದು ನಿರೀಕ್ಷೆಯಲ್ಲಿದ್ದ ಖಾಸಗಿ ಬಸ್ ಮಾಲೀಕರಿಗೆ ಚಿಕ್ಕಬಳ್ಳಾಪುರದಲ್ಲಿ ಶಾಕ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಕಡೆ ಆರ್‌ಟಿಒ ಅಧಿಕಾರಿಗಳ ವಿಶೇಷ ತಂಡ ಖಾಸಗಿ ಬಸ್‌ಗಳ ಮೇಲೆ ದಾಳಿ ಆರಂಭ ಮಾಡಿದ್ದು, ಆರ್‌ಟಿಒ ಅಧಿಕಾರಿಗಳ ದಾಳಿಗೆ ಹೆದರಿರುವ ಖಾಸಗಿ ಬಸ್‌ಗಳ ಮಾಲೀಕರು ಬಸ್‌ಗಳ ಸಂಚಾರವನ್ನು ನಿಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಖಾಸಗಿ ಬಸ್ ನಿಲ್ದಾಣದಲ್ಲೂ ಆರ್‌ಟಿಒ […]

ಬೂತ್ ಗೆದ್ದರೆ, ದೇಶ ಗೆಲ್ತೇವೆ: ಬಿವೈ ವಿಜಯೇಂದ್ರ

ಬೆಂಗಳೂರು: ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ […]

ಮೋದಿ, ಅಮಿತ್ ಶಾರಿಂದ ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ: ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ನಡ್ಡಾರವರು ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಈ ಬಗ್ಗೆ ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ.  ರಾಜ್ಯಾದ್ಯಂತ […]

ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ: ಅಸಮಾಧಾನ ಹೊರಹಾಕಿದ ಸಿಟಿ ರವಿ

ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಮಾಜಿ ಸಚಿವ ಸಿಟಿ ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಮಧ್ಯಪ್ರದೇಶದಿಂದ ಆಗಮಿಸಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬದಲಾಗದೇ ಇರೋದು ಕಾರ್ಯಕರ್ತ ಅನ್ನೋದು. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ, ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ, ಯಶಸ್ವಿಯಾಗಲಿ ಎಂದು ತಿಳಿಸಿದರು.  ನೂತನ ಅಧ್ಯಕ್ಷನ ಆಯ್ಕೆ […]

ಸಾಮಾನ್ಯ ಕಾರ್ಯಕರ್ತನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮರುದಿನವೇ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಹಿರಿಯ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿ ಸಂಭ್ರಮಾಚರಣೆ ಮಾಡಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ವಿಜಯೇಂದ್ರ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿದರು. ಅಲ್ಲದೇ ಕಾರ್ಯಕರ್ತರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಮೊದಲ ಆದ್ಯತೆ ಕಾರ್ಯಕರ್ತರು ಎಂಬ ಸಂದೇಶ ರವಾನೆ ಮಾಡಿದ್ದಾರೆ. ಶಶಿಧರ್‌ ಮನೆಗೆ ಭೇಟಿ ಕೊಟ್ಟ ವಿಜಯೇಂದ್ರ ಅವರು ಕಾರ್ಯಕರ್ತನಿಗೆ ಸಿಹಿ ತಿನ್ನಿಸಿದರು. ನಂತರ ಪಕ್ಷದ ಶಾಲು ಹಾಕಿ ಕಾರ್ಯಕರ್ತನನ್ನು […]

ಗ್ಯಾರಂಟಿ ಎಂಬ ಬಿಸ್ಕೆಟ್ ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿವೈ ರಾಘವೇಂದ್ರ

ಕಾರವಾರ: ಸಾರ್ವಜನಿಕರಿಗೆ ಗ್ಯಾರಂಟಿ ಎಂಬ ಬಿಸ್ಕೆಟ್ ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಜನರಿಗೆ ಅನ್ನಿಸಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ತಪ್ಪು ಮಾಡಿದ್ದೇವೆ. ಅನೇಕ ವರ್ಷಗಳ ನಂತರ ರಾಜ್ಯಕ್ಕೆ ಬಹಳ ಕೆಟ್ಟ ಪರಿಸ್ಥಿತಿ ಬಂದಿದೆ. ಮದ್ಯದ ಬೆಲೆ ಏರಿಸಿ ಆ ಹಣದಲ್ಲೇ ಗೃಹ ಲಕ್ಷ್ಮಿ ಮೂಲಕ ಮಹಿಳೆಯರಿಗೆ ಎರಡು ಸಾವಿರ ನೀಡುತ್ತಿದ್ದಾರೆ ಎಂದರು. ಸಮರ್ಥ ಅಧಿಕಾರ ನಡೆಸುವಲ್ಲಿ ರಾಜ್ಯ […]

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ – ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌, ಪಿಎಸ್‌ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ […]

ಮಾತ್ರೆ, ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ – ಐವರ ಬಂಧನ

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ (Gold) ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ (Airport) ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು (Bengaluru) ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ.  ಆರೋಪಿಗಳು ಮಾತ್ರೆಗಳಲ್ಲಿ, ಒಳ ಉಡುಪು ಹಾಗೂ ಮಹಿಳೆಯರ ಪರ್ಸ್‍ಗಳಲ್ಲಿ […]

ದಯವಿಟ್ಟು ರಾಜ್ಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಹೈಕಮಾಂಡ್‌ ನಡೆಗೆ ಸದಾನಂದಗೌಡ ಬೇಸರ

ಬೆಂಗಳೂರು: ರಾಜ್ಯ ನಾಯಕರ ವಿಚಾರವಾಗಿ ಬಿಜೆಪಿ ಹೈಕಮಾಂಡ್‌ ಅನುಸರಿಸುತ್ತಿರುವ ಧೋರಣೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕರ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಕೇಂದ್ರದ ನಾಯಕರಿಗೆ ಮನವಿ ಮಾಡ್ತೀನಿ. ಕರ್ನಾಟಕದ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ. ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡಿರಬಹುದು. ಆದರೆ ಲೋಕಸಭಾ ಚುನಾವಣೆಗೆ ಡಬಲ್ ಕೊಡ್ತೀವಿ. ದಯವಿಟ್ಟು ವಿಶ್ವಾಸ ತೆಗೆದುಕೊಳ್ಳಿ. ರಾಜ್ಯಕ್ಕೆ ಬರದೆ, ರಾಜ್ಯದ ವಿಪಕ್ಷ ನಾಯಕರ ಆಯ್ಕೆ ಮಾಡದೆ ಬಿಡೋದು ಸರಿಯಲ್ಲ ಎಂದು ಹೈಕಮಾಂಡ್‌ ವಿರುದ್ಧ […]