September 14, 2026

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಆರ್.ಡಿ ಪಾಟೀಲ್

ಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‍ಪಿನ್ ಆರ್.ಡಿ ಪಾಟೀಲ್ ನಗರದಲ್ಲೇ ಅಡಗಿಕೊಂಡು ಮೊಬೈಲ್‍ನ್ನು ಬೇರೊಬ್ಬರ ಬಳಿ ಕೊಟ್ಟು ಉತ್ತರ ಪ್ರದೇಶಕ್ಕೆ ಕಳಿಸಿದ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ಕಲಬುರಗಿಯಲ್ಲೇ ಇರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದಾರೆ. ಕೂಡಲೇ ಆತನನ್ನು ಬಂಧಿಸಲು ತೆರಳಿದ್ದಾರೆ. ಈ ವೇಳೆಗಾಗಲೇ ಆರೋಪಿ ತಪ್ಪಿಸಿಕೊಂಡಿದ್ದು ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದಾನೆ. ಮಹಾರಾಷ್ಟ್ರಕ್ಕೆ ಕರೆದುಕೊಂಡು ಬಿಟ್ಟ ಇಬ್ಬರು ಬಲಗೈ ಬಂಟರನ್ನು ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಈಗ ವಶಕ್ಕೆ ಪಡೆದಿದ್ದಾರೆ.  ಆರೋಪಿ ರವಿ ಊಕುಲಿ ಹಾಗೂ […]

ಬೆಂಗಳೂರು ಕುಡಿಯುವ ನೀರಿಗೆ ಕಾವೇರಿಯಿಂದ 24 ಟಿಎಂಸಿ ಬಳಕೆ: ಡಿಕೆಶಿ

ನವದೆಹಲಿ: ಬೆಂಗಳೂರಿನಲ್ಲಿ   ಕುಡಿಯುವ ನೀರಿಗಾಗಿ ಕಾವೇರಿ ಜಲಾನಯನ ಪ್ರದೇಶಗಳಿಂದ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶಿಸಿದ್ದು, ಈ ನೀರಿನ ಬಳಕೆಗೆ ಬೆಂಗಳೂರು ಜಲ ಮಂಡಳಿಗೆ ಅಧಿಕಾರ ನೀಡಿದೆ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿ ನೀರು ಬಳಕೆಗೆ ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ಈ ನೀರಿನ ಬಳಕೆಗೆ ಸರ್ಕಾರ ಈಗ ಆದೇಶಿಸಿದೆ. ಇನ್ಮುಂದೆ ಕಡ್ಡಾಯವಾಗಿ […]

ರಶ್ಮಿಕಾ ನಂತರ ಕತ್ರಿನಾಗೆ ಡೀಪ್ ಫೇಕ್ ಕಾಟ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್ ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್ ಫೇಕ್ ಕಾಟ ಮುಂದುವರೆದಿದೆ. ಬಾಲಿವುಡ್ (Bollywood) ನಟಿ ಕತ್ರಿನಾ ಕೈಫ್‍  (Katrina Kaif) ಫೋಟೋ ಕೂಡ ಡೀಪ್ ಫೇಕ್ ಮಾಡಲಾಗಿದೆ. ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು […]

ಜೆಡಿಎಸ್‌ನಲ್ಲಿ ಮುಂದುವರಿದ ಶಾಸಕ ಶರಣಗೌಡ ಕಂದಕೂರು ಅಸಮಾಧಾನ – ಸಭೆಗೆ ಹಾಜರಾಗದೇ ವರಿಷ್ಠರಿಗೆ ಸೆಡ್ಡು

ಯಾದಗಿರಿ: ಇಂದು (ಬುಧವಾರ) ಹಾಸನದಲ್ಲಿ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ ಗುರುಮಿಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಗೈರಾಗುವ ಮೂಲಕ ತಮ್ಮ ಹೈಕಮಾಂಡ್‌ಗೆ ಶಾಕ್ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿನ ಮೈತ್ರಿ ಕುರಿತು ಮಹತ್ವ ಪಡೆದುಕೊಂಡಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧಿಸಿದ್ದ ಶಾಸಕ ಶರಣಗೌಡ ಕಂದಕೂರು ಮೊದಲಿನಿಂದಲೂ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿದ್ದಾರೆ.  ಜೆಡಿಎಸ್ ಪಕ್ಷದೊಂದಿಗೆ ಅಂತರ ಕಾಯ್ದಕೊಳ್ಳುತ್ತಿರುವ ಶಾಸಕ ಶರಣಗೌಡ ಕಂದಕೂರು […]

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಭವಿಷ್ಯ ನುಡಿದ ಜೈನ ಮುನಿ

ಬೆಳಗಾವಿ: ಡಿಕೆ ಶಿವಕುಮಾರ್  ಮುಖ್ಯಮಂತ್ರಿಯಾಗುತ್ತಾರೆ ಎಂದು ಹಲಗಾದ ಜೈನ್ ಬಸದಿಯ ಪ.ಪೂ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆ ಬಳಿಕ ವಿನಯ್ ಕುಲಕರ್ಣಿ ಸಚಿವರಾಗುತ್ತಾರೆ ಎಂದು ಹೇಳಿದ್ದಾರೆ. ವಿನಯ್ ಕುಲರ್ಣಿ ಅವರು ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿರುವ ಜೈನ್ ಬಸದಿ ಭೇಟಿ ನೀಡಿದ್ದು, ಈ ವೇಳೆ ಜೈನ ಮುನಿ ಸಿದ್ದಸೇನ ಮಹಾರಾಜರು, ನೀವು ಸಚಿವರಾಗುತ್ತೀರಿ, ಧಾರವಾಡ ಜಿಲ್ಲಾ ಉಸ್ತುವಾರಿ ಆಗುತ್ತೀರಿ ಎಂದು ಹೇಳಿ ಆಶೀರ್ವಾದ ಮಾಡಿದ್ದಾರೆ. ಶಾಸಕ ವಿನಯ್ […]

ವಿವಾಹಿತೆಯಿಂದ ಹನಿಟ್ರ್ಯಾಪ್ – ಡೆತ್‍ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಮಡಿಕೇರಿ: ಮಹಿಳೆಯೊಬ್ಬಳಿಂದ ಹನಿಟ್ರ್ಯಾಪ್‍ಗೊಳಗಾಗಿ ನಿವೃತ್ತ ಯೋಧನೊಬ್ಬ ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ನಿವೃತ್ತ ಯೋಧನನ್ನು ಸಂದೇಶ್ (40) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಪಂಪಿನ ಕೆರೆ ಬಳಿ ಸಂದೇಶ್ ಮೊಬೈಲ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.  ಸಂದೇಶ್ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಬ್ಬಳ ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದಾನೆ. ಆಕೆಯ ಕಾಟ ಸಹಿಸಲಾಗದೆ […]

ಪ್ಯಾಂಟ್‌ ಜಿಪ್‌ನಲ್ಲಿ ಚಿನ್ನ ಕಳ್ಳಸಾಗಣೆ

ಬೆಂಗಳೂರು: ಪ್ಯಾಂಟ್‌ ಜಿಪ್‌ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಯಾಣಿಕನನ್ನು ಏರ್‌ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ಶಾರ್ಜಾದಿಂದ ಬಂದಿದ್ದ. ಪೇಸ್ಟ್‌ ರೂಪದಲ್ಲಿ ಚಿನ್ನ ಕಳ್ಳಸಾಗಣೆ (Gold Smuggling) ಮಾಡುತ್ತಿದ್ದ. ಈತನನ್ನು ಏರ್‌ಪೋರ್ಟ್‌ನಲ್ಲಿ ಏರ್‌ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪ್ಯಾಂಟ್‌ ಜಿಪ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ.  ಸುಮಾರು 18.57 ಲಕ್ಷ ರೂ. ಮೌಲ್ಯದ 284 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕನನ್ನ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. […]

ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ಉಪಾಹಾರ ಸಭೆಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ ಅವರು, ಬ್ರೇಕ್‌ಫಾಸ್ಟ್ ಸಭೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ, ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದೆವು ಎಂದು ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್, ಅನೇಕ ಸಚಿವರು ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ಆಪರೇಷನ್ ಹಸ್ತದ ಬಗ್ಗೆ ಚರ್ಚಿಸಿಲ್ಲ ಎಂದ ಮರುಕ್ಷಣವೇ ಅವರು, ಯಾರೆಲ್ಲಾ ಬರುತ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ […]

ಮೋದಿಗೆ ನಾಚಿಕೆ ಆಗಬೇಕು: ಹೆಚ್‌ಕೆ ಪಾಟೀಲ್ ಕಿಡಿ

ಬೀದರ್ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆ ಆಗಬೇಕು ಎಂದು ಪ್ರವಾಸೋದ್ಯಮ ಸಚಿವ ಹೆಚ್‌ಕೆ ಪಾಟೀಲ್‌ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಲೂಟಿಗೆ ಇಳಿದಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿಗೆ ಜವಾಬ್ದಾರಿ ಇರಬೇಕು. ಪ್ರಧಾನಿಯಾಗಿ ನೀವೇ ಹೀಗೆ ಮಾತನಾಡುತ್ತಿದ್ದೀರಿ. ನಾಚಿಗೆ ಆಗಲ್ವಾ? ಚುನಾವಣಾ ಬಾಂಡ್‌ ಅನ್ನು ಆರ್‌ಟಿ‌ಐ ಮಾಹಿತಿ ಹಕ್ಕಿನಲ್ಲೂ ಕೊಡದಂತೆ ಕಾನೂನು ಮಾಡಿದ್ದೀರಿ‌. ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದ […]

ಗೃಹಲಕ್ಷ್ಮಿ ಯೋಜನೆ ವಿರುದ್ಧ ಮಹಿಳೆಯರ ಆಕ್ರೋಶ; ವಿಳಂಬಕ್ಕೆ ಕಾರಣ ನೀಡಿದ ಅಧಿಕಾರಿಗಳು

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ  ಯೋಜನೆಗೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ ಹಲವು ಹಳ್ಳಿಗಳ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ‌ಹಾಕಿದ್ದರು. ಆದರೆ ಇವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ‌ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ನಮಗೆ ಒಂದು ಬಾರಿಯೂ ಹಣ ಬಂದಿಲ್ಲ. ಹಣದ ಸಂಬಂಧ ನಾವು ಅಲೆದಾಡುತ್ತಿದ್ದೇವೆ. ಯಾವಾಗ ಬಂದರೂ ಅದು ಸರಿಯಲ್ಲ ಇದು ಸರಿಯಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾದರೆ […]