May 30, 2026
#ಬೆಂಗಳೂರು

ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿಕೆಶಿ

ಬೆಂಗಳೂರು: ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಪ್ರಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

https://imasdk.googleapis.com/js/core/bridge3.608.2_en.html#goog_1081408374

ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧಕ್ಕೆ ಡಿಕೆಶಿ ಪ್ರತಿಕ್ರಿಯಿಸಿದರು.

ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.  

ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.

Leave a comment

Your email address will not be published. Required fields are marked *