September 12, 2026
#ಜಿಲ್ಲೆ

ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಬೇಡಿ -ಪ್ರತಾಪ್ ಸಿಂಹ

ಮೈಸೂರು: ಸಂಸತ್​ ಘಟನೆ ಬಳಿಕ ನನ್ನ ಮೇಲೆ ಕಾಂಗ್ರೆಸ್​ನಿಂದ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಆರೋಪ ಮಾಡಿದ್ದಾರೆ. ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ನನ್ನ ಟಾರ್ಗೆಟ್ ಮಾಡಲಾಗುತ್ತಿದೆ. ನನ್ನನ್ನು ಭಯೋತ್ಪಾದಕ ಅಂತಾ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ನನ್ನ ಸಹೋದರ ಮರಗಳ್ಳ ಅಂತ ಕಾಂಗ್ರೆಸ್ಸಿಗರು ಪೋಸ್ಟ್ ಮಾಡಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

https://a29c7737cc25b81618d4fcad08783173.safeframe.googlesyndication.com/safeframe/1-0-40/html/container.html

ಸಂಸದ ಪ್ರತಾಪ್ ಸಿಂಹ ಸಹೋದರನ ಮೇಲೆ ನೂರಾರು ಮರ ಕಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಸಂಸತ್ ಘಟನೆ ನಂತರ ಕಾಂಗ್ರೆಸ್ ನನ್ನ ಮೇಲೆ ವೈಯಕ್ತಿಕ ದಾಳಿ ಜಾಸ್ತಿ ಮಾಡಿದೆ. ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನ ವರೆಗೂ ಎಲ್ಲರೂ ನನ್ನ ಟಾರ್ಗೆಟ್ ಮಾಡಿದ್ದಾರೆ. ನನ್ನ ಭಯೋತ್ಪಾದಕ ಅಂತಾ ಬಿಂಬಿಸುವ ಪ್ರಯತ್ನ ಕಾಂಗ್ರೆಸಿಗರು ಮಾಡಿದರು. ಮುಸ್ಲಿಂರೆಲ್ಲಾ ಭಯೋತ್ಪಾದಕರು ಅನ್ನೋ ರೀತಿ ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ಸಂಸತ್ ವಿಚಾರದಲ್ಲಿ ನಾನು ಸ್ಪಷ್ಟನೆ ಕೊಟ್ಟ ಬೆನ್ನಲೆ ಪ್ರತಾಪ್ ಸಿಂಹ ಸಹೋದರ ಮರಗಳ್ಳ ಅಂತಾ ಕಾಂಗ್ರೆಸ್ ನವರು ಪೋಸ್ಟ್ ಮಾಡಿದ್ದರು. ಡಿ.‌ 16 ರಂದು ಎಫ್​ಐಆರ್ ಆಗಿದೆ ಅದನ್ನು ಮೊನ್ಮೆ ನನ್ನ ತಮ್ಮನ ಹೆಸರಿನಲ್ಲಿ ತಿರುಚಿದ್ದು ಯಾಕೆ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ಪ್ರತಾಪ್ ಸಿಂಹನನ್ನು ಈ ಕ್ಷೇತ್ರದಲ್ಲಿ ಸೋಲಿಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಅವರಿಗೆ ಗೊತ್ತು. FIRನಲ್ಲಿ ತಮ್ಮನ ಹೆಸರಿಲ್ಲ, ಆದ್ರೂ ಅವನ ಹೆಸರು ಏಕೆ ತರುತ್ತಿದ್ದಾರೆ. ನನ್ನ ತಮ್ಮಂದಿರು, ತಂಗಿ ಯಾರು ಅಂತನೂ ಮೈಸೂರು ಜನ ನೋಡಿಲ್ಲ. ಚುನಾವಣೆ ವೇಳೆ ನನ್ನ ತಮ್ಮಂದಿರು 1 ತಿಂಗಳು ಬಂದು ಹೋಗ್ತಾರೆ ಅಷ್ಟೇ. ಮೈಸೂರು ಕಡೆ ಅವರು ಮತ್ತೆ ಯಾವತ್ತೂ ತಲೆ ಹಾಕಲ್ಲ. ಯಾವ ಸಂಸದರು, ಶಾಸಕರ ಸಹೋದರರು ಕೃಷಿ ಮಾಡಿ ಕೊಂಡು ಜೀವನ ಮಾಡುತ್ತಿದ್ದಾರೆ ಹೇಳಿ?

ನನ್ನ ಸಹೋದರರು ಕೃಷಿ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಮಿನಜ, ಮಿನಿಟ್, ಕಾಂಟ್ರಾಕ್ಟ್, ವರ್ಗಾವಣೆ ಯಾವುದರಲ್ಲೂ ನನ್ನ ಸಹೋದರರು ಇಲ್ಲ. ಪ್ರತಾಪ್ ಸಿಂಹಗೆ ಅವಹೇಳನ ಮಾಡಬೇಕು ಅಂತಾ ಹೀಗೆ ಮಾಡುತ್ತಿದ್ದಾರೆ. ನಿಮ್ಮದೆ ಪೊಲೀಸ್ ಇಲಾಖೆ, ನಿಮ್ಮದೆ ಸರಕಾರ ಇದೆ ತನಿಖೆ ಮಾಡಿ. ಕಾಂಗ್ರೆಸ್​ಗೆ ನನ್ನ ಮೇಲೆ ಯಾಕೆ ದ್ವೇಷ? ನಿಮಗೆ, ಬಡವರ ಮಕ್ಕಳು ರಾಜಕಾರಣ ಮಾಡಬಾರದಾ? 9 ವರ್ಷದಲ್ಲಿ ನಾನು ಏನು ಕೆಲಸ ಮಾಡಿದ್ದೇನೆ ಸಿದ್ದರಾಮಯ್ಯ ಅವರು 40 ವರ್ಷದಲ್ಲಿ ಏನು ಮಾಡಿದ್ದಾರೆ ಹೇಳಲಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

Leave a comment

Your email address will not be published. Required fields are marked *