July 29, 2026
#ಬೆಂಗಳೂರು

ಬಸ್ ಡಿಕ್ಕಿ- ಮಹಿಳೆ ದುರ್ಮರಣ

ಬೆಂಗಳೂರು:
ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಮಹಿಳೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ನಗರದ ಕಬ್ಬನ್ ಪೇಟೆ ನಿವಾಸಿಯಾಗಿರುವ ಪುಷ್ಪಾ ಅವರು ಮನೆಯಿಂದ ಬೇಕರಿಗೆ ತೆರಳುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಮನೆಗೆ ತೆರಳಲು ನಗರದ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ದಾಟುವಾಗ ಪುಷ್ಪಾ ಅವರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರ ಗಾಯಗೊಮಡು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಪುಷ್ಪಾ ಮೃತಪಟ್ಟಿದ್ದಾರೆ. ಬಸ್ ಚಾಲಕ ನಾಗರಾಜ್‍ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *