October 29, 2026
#ಜಿಲ್ಲೆ

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ

ಮಂಗಳೂರು/ ಮಂಡ್ಯ:
ಮಂಡ್ಯದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬAಧಿಸಿದAತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಪ್ರಕರಣ ಸಂಬAಧ ಭಟ್ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಈ ವಿಚಾರವಾಗಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವುಮೆನ್ ಇಂಡಿಯಾ ಮೂಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ, ಇದು ನಮ್ಮ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತರುವಂಥ ಹೇಳಿಕೆ. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಹೇಳಿಕೆಯನ್ನು ನೀಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿರುವ ವಿಷ ಜಂತುಗಳು ಈ ರೀತಿಯ ಹೇಳಿಕೆ ನೀಡುವುದು ಹೊಸದಲ್ಲ. ಅವರ ಮೇಲೆ ಎಫ್.ಐ.ಆರ್ ಆದ್ರು ಇನ್ನು ಸಹ ಬಂಧನ ಆಗಿಲ್ಲ. ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸಹ ನಿಷ್ಕ್ರಿಯತೆ ತೋರಿಸುತ್ತಿದೆ. ಪ್ರತಿಭಟನೆಗೂ ಯಾವುದೇ ಅವಕಾಶ ನೀಡುತ್ತಿಲ್ಲ. ಅನುಮತಿ ಕೇಳಲು ಹೋದ್ರೆ ನೋಟಿಸ್ ಜಾರಿ ಮಾಡಿದ್ದಾರೆ. ಮಹಿಳೆಯರ ಮೇಲೆ ೧೦೭ ಸೆಕ್ಷನ್ ಹಾಕಿ ಪ್ರಕರಣ ದಾಖಲಿಸಿದ್ದಾರೆ. ರೌಡಿಗಳನ್ನು ನಿಯಂತ್ರಿಸುವ ಕೇಸ್ ಅನ್ನು ನಮ್ಮ ಮೇಲೆ ಹಾಕಿದ್ದಾರೆ. ಹೆಚ್ಚಿನ ಸಂಖ್ಯೆಯ ಮುಸ್ಲಿಂ ಓಟು ಪಡೆದು ಬಂದ ಕಾಂಗ್ರೆಸ್ ಸರ್ಕಾರ ಮೌನವಾಗಿದೆ. ಸರ್ಕಾರ ಮಹಿಳೆಯರಿಗೆ ಬಿಟ್ಟಿ ಭಾಗ್ಯ ನೀಡಿ ಮಂಗ ಮಾಡಿದೆ. ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ತಕ್ಷಣ ಕಲ್ಲಡ್ಕ ಭಟ್ಟರನ್ನು ಬಂಧಿಸಬೇಕು ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಮಧ್ಯೆ, ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷಗಳ ಸಂಘಟನೆಗಳ ಜಂಟಿ ವೇದಿಕೆ ಸುದ್ದಿಗೋಷ್ಠಿ ನಡೆಸಿ ಭಟ್ಟರ ಬಂಧನಕ್ಕೆ ಆಗ್ರಹಿಸಿದೆ. ಮಾಜಿ ಸಚಿವ ರಮಾನಾಥ್ ರೈ ಮಾತನಾಡಿ, ಪ್ರಭಾಕರ ಭಟ್ ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ ಮತ್ತು ತುಚ್ಛವಾಗಿ ಮಾತನಾಡಿದ್ದಾರೆ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾದ್ಯವೇ ಇಲ್ಲ. ಮುಸ್ಲಿಂ ಮಾತ್ರ ಅಲ್ಲ, ಸಮಗ್ರ ಮಹಿಳೆಯರಿಗೆ ಮಾಡಿದ ಅವಮಾನ. ಜಿಲ್ಲೆಯಲ್ಲಿ ಅನೇಕ ಬಾರಿ ಇವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅವರಿಗೆ ಏನು ಮಾಡಬೇಕು ಎಂದು ತೋಚುತ್ತಿಲ್ಲ, ಹೀಗಾಗಿ ಕೋಮು ಪ್ರಚೋದನೆ ಮಾಡಿ ಗಲಾಟೆ ಸೃಷ್ಟಿಸೋ ಯತ್ನ ಮಾಡುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್‌ರನ್ನ ವಿಳಂಬ ಮಾಡದೇ ಬಂಧಿಸಬೇಕು ಎಂದು ಒತ್ತಾಯಿಸಿದರು.

Leave a comment

Your email address will not be published. Required fields are marked *