ಡಿಟೆಕ್ಟಿವ್ ಗಜವದನ ಚಿತ್ರಕ್ಕೆ ಮುಹೂರ್ತ
ಈ ಹಿಂದೆ ‘ಮಂಡ್ಯದ ಹುಡುಗರು’, ‘ಗರ್ನಲ್’ ಚಿತ್ರಗಳನ್ನು ನಿರ್ದೇಶಿಸಿದ್ದ ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿ ಹಾಗೂ ನಿರ್ಮಾಣವನ್ನು ಮಾಡುತ್ತಿರುವ ‘ಡಿಟೆಕ್ಟಿವ್ ಗಜವದನ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಇಟ್ಟಮಡುವಿನ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಸಕ್ರಿಯರಾಗಿರುವ ಬಸು ಕುಮಾರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಇದು ನನ್ನ ನಿರ್ದೇಶನದ ಮೂರನೇ ಚಿತ್ರ ಎಂದು ಮಾತನಾಡಿದ […]












































































































































































































































































































































































































































































































































































































































































































































































































































































































































































































































































































































