ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು
ನವದೆಹಲಿ: ಸಂಸತ್‌ನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು […]












































































































































































































































































































































































































































































































































































































































































































































































































































































































































































































































































































































