July 30, 2026

ಮನೆಗೆ ಬರಲು ನಿರಾಕರಿಸಿದ ಪತ್ನಿ – ಮನನೊಂದು ಪತಿ ಆತ್ಮಹತ್ಯೆ

ಚಾಮರಾಜನಗರ: ಎಷ್ಟೇ ಕರೆದರೂ ತನ್ನ ಮನೆಗೆ ಬರಲು ಪತ್ನಿ ನಿರಾಕರಿಸಿದ್ದಕ್ಕೆ ಪತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿಯಲ್ಲಿ ನಡೆದಿದೆ. ವಸಂತಕುಮಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ 3 ವರ್ಷದ ಹಿಂದೆ ವಸಂತಕುಮಾರ್ ಬೆಂಗಳೂರಿನ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಕೆಲ ದಿನಗಳಿಂದ ಪತ್ನಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ.  ಪತ್ನಿ ಮನೆಗೆ ಬಾರದ ಕಾರಣ ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ರಾಡ್‌ನಿಂದ ಹೊಡೆದು ವೃದ್ಧ ದಂಪತಿಯ ಕೊಲೆ

ಬೆಂಗಳೂರು: ರಾಡ್‌ನಿಂದ ಹೊಡೆದು ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ. ರಾಮಕೃಷ್ಣಪ್ಪ (70) ಹಾಗೂ ಮುನಿರಾಮಕ್ಕ (65) ಕೊಲೆಯಾದ ದಂಪತಿ. ಇನ್ನು ಆಸ್ತಿ ವಿಚಾರವಾಗಿ ಮಗ ತಂದೆ ತಾಯಿಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದಗಲಿನಿಂದಲೂ ನರಸಿಂಹ ತಂದೆ ತಾಯಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದು, ಒಬ್ಬನೇ ಮಗನಾದರೂ ತಂದೆ ತಾಯಿಯನ್ನು […]

ನನ್ನ, ಸಿದ್ದರಾಮಯ್ಯ ನಡುವೆ ಅಸಮಾಧಾನವಿಲ್ಲ

ಬೆಳಗಾವಿ: ನನ್ನ ಹಾಗೂ ಸಿಎಂ ಸಿದ್ದರಾಮಯ್ಯನವರ ನಡುವೆ ಯಾವುದೇ ಅಸಮಾಧಾನ ಇಲ್ಲ. ಅವರಿಗೆ ಅದೃಷ್ಟ ಇದೆ ಸಿಎಂ ಆಗಿದ್ದಾರೆ. ನಮ್ಮಿಬ್ಬರ ನಡುವೆ ಯಾವುದೇ ಗುದ್ದಾಟ ಇಲ್ಲ. ನನ್ನನ್ನು ಯಾರೂ ಮೂಲೆಗುಂಪು ಮಾಡಲು ಆಗುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಬೆಳಗಾವಿಯಲ್ಲಿ  ಮಾತನಾಡಿದ ಅವರು, ನನ್ನನ್ನು ಯಾರು ತುಳಿಯುದಕ್ಕೆ ಆಗುವುದಿಲ್ಲ. ತುಳಿಯುವ ಪ್ರಯತ್ನ ಮಾಡಿದರೆ ಅದು ಅವರಿಗೆ ರಿವರ್ಸ್ ಆಗಿ ತಿರುಗುತ್ತದೆ. ನಮ್ಮ ಸಮುದಾಯದಲ್ಲಿ ನನ್ನ ಪರವಾಗಿ ಪರ್ಯಾಯ ನಾಯಕರನ್ನು ಬೆಳೆಸುವ ಪ್ರಕ್ರಿಯೆ ನಿರಂತರವಾಗಿದೆ. ನಾನು ಯಾವುದಕ್ಕೂ […]

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್‌ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ತೀರ್ಪು ಪ್ರಕಟವಾಗಿದೆ. ವಿಶೇಷ […]

ಪ್ರಿತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಘನಘೋರ ಕೃತ್ಯವೊಂದು ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಿಳೆಯೊಬ್ಬಳನ್ನು ನಗ್ನವಾಗಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಪ್ರೀತಿಸಿದ ಯುವತಿ ಜೊತೆ ಮಹಿಳೆಯ ಮಗ ಮನೆಬಿಟ್ಟು ಹೋಗಿದ್ದಕ್ಕೆ ಆತನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಪ್ರೇಮಿಗಳು ಮನೆಬಿಟ್ಟು ಹೋದ ವಿಚಾರ ತಿಳಿಯುತ್ತಿದ್ದಂತೆ, ರಾತ್ರೋ ರಾತ್ರಿ ಯುವತಿಯ ಕುಟುಂಬಸ್ಥರು ಯುವಕನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಬಾಗಿಲು ಮುರಿದು ಒಳಗೆ ಮಲಗಿದ್ದ ಮಹಿಳೆಯ ಮೆರವಣಿಗೆ […]

ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1

ನವದೆಹಲಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿಯಲ್ಲಿ ಮಹಾನಗರಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನವನ್ನು ಪಡೆದಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಪೈಕಿ ನವದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಅಹಮದಾಬಾದ್ ಮೂರನೇ ಸ್ಥಾನವನ್ನು ಪಡೆದಿದೆ. 2022ರಲ್ಲಿ ಬೆಂಗಳೂರಿನಲ್ಲಿ ಒಟ್ಟು 8 ಆ್ಯಸಿಡ್ ದಾಳಿ ನಡೆದಿತ್ತು. ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ ವರದಿಯಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ.  ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ವರದಿ ಅನ್ವಯ ದೇಶದ 19 ಮಹಾನಗರಗಳ ಪೈಕಿ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ 8 ಆ್ಯಸಿಡ್ […]

ಕಾಂಗ್ರೆಸ್‌ ಅಕ್ರಮ ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು: ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ‌ ಮೇಲಿನ ಹಲ್ಲೆಗೆ ಸಾಮಾಜಿಕ ಜಾಲತಾಣದಲ್ಲಿ (Social Media) ವಿಜಯೇಂದ್ರ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಪೋಸ್ಟ್‌ನಲ್ಲಿ ಏನಿದೆ?ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ. ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ […]

ಟಿಕೆಟ್ ಪಡೆದ ಸ್ಟಾಪ್‌ಗೂ ಮುನ್ನ ಇಳಿಯಲು ಮುಂದಾದ ಯುವತಿ – ಯುವತಿ, ಕಂಡಕ್ಟರ್ ನಡುವೆ ಗಲಾಟೆ

ಬೆಂಗಳೂರು: ಟಿಕೆಟ್ ಪಡೆದ ನಿಲ್ದಾಣ ಬರುವ ಮೊದಲೇ ಯುವತಿ ಬಸ್ ಇಳಿಯಲು ಮುಂದಾಗಿದ್ದು, ಯುವತಿ ಹಾಗೂ ಕಂಡಕ್ಟರ್ ನಡುವೆ ಗಲಾಟೆ ನಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಮಹಿಳಾ ಪ್ರಯಾಣಿಕರು ಹಾಗೂ ಕಂಡಕ್ಟರ್ ನಡುವಿನ ಜಟಾಪಟಿ ದಿನೇ ದಿನೇ ಹೆಚ್ಚುತ್ತಿದೆ. ಪ್ರಯಾಣಿಕರು ನಿಗದಿತ ಸ್ಥಳಕ್ಕೆ ಟಿಕೆಟ್ ಪಡೆದು ಸ್ಟಾಪ್ ಬರುವ ಮುನ್ನವೇ ಬಸ್ಸಿನಿಂದ ಇಳಿಯುತ್ತಿರುವ ಘಟನೆಗಳು ಹೆಚ್ಚಿದ್ದು, ಮಹಿಳಾ ಪ್ರಯಾಣಿಕರ ಈ ನಡೆಗೆ ನಿರ್ವಾಹಕರು ಸುಸ್ತಾಗಿದ್ದಾರೆ. ಅಲ್ಲದೇ ಮಹಿಳೆಯರ ನಡೆಯಿಂದ ನಿರ್ವಾಹಕರು ಈಗ […]

ಮೇ ಕಳೆದ ಬಳಿಕ ಸರ್ಕಾರ ಪತನ ಖಚಿತ: ಹೆಚ್‍ಡಿಕೆ ಸ್ಫೋಟಕ ಭವಿಷ್ಯ

ಮಂಡ್ಯ: ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಇರುವುದಿಲ್ಲ, ಮೇ ಬಳಿಕ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಕೆ.ಆರ್.ಪೇಟೆಯ ಬೆಳತೂರು ಗ್ರಾಮದ ದೇವಸ್ಥಾನ ಜೀರ್ಣೋದ್ಧಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಜನರ ಧ್ವನಿಯಾಗಿ ಇರುತ್ತೇನೆ. ಈ ಸರ್ಕಾರ ಯಾವುದೇ ಕಾರಣಕ್ಕೂ ಐದು ವರ್ಷಗಳ ಕಾಲ ಇರುವುದಿಲ್ಲ. ಮೇ ತಿಂಗಳ ಬಳಿಕ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.  ಕೆ.ಆರ್.ಪೇಟೆಯ ಶಾಸಕ ಗೆದ್ದಮೇಲೆ ಕೆಲಸ ಮಾಡಲಿಲ್ಲ ಎಂದುಕೊಳ್ಳಬೇಡಿ. ನೀವು ಅವರನ್ನು […]

ಕ್ಷಣದಲ್ಲಿ ನೆಲಕಚ್ಚಿತು ಮುಗಿಲೆತ್ತದರ ಮೊಬೈಲ್‌ ಟವರ್‌ – 11 ಮಂದಿ ಗ್ರೇಟ್‌ ಎಸ್ಕೇಪ್‌

ಬೆಂಗಳೂರು: ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಮುಗಿಲೆತ್ತರದ ಮೊಬೈಲ್ ಟವರ್‌ ನೆಲ ಕಚ್ಚಿದ್ದು, 11 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಲಗ್ಗೆರೆಯಲ್ಲಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ ಜೆಸಿಬಿಯಲ್ಲಿ ಸೈಟ್ ಕ್ಲೀನ್ ಮಾಡಲಾಗುತ್ತಿತ್ತು. ಈ ವೇಳೆ ಜೆಸಿಬಿ ಮುಂಭಾಗ ಟವರ್‌ಗೆ ತಗುಲಿದ್ದ ಮನೆ ಸಮೇತ ಧ್ವಂಸವಾಗಿದೆ.  ಮೊಬೈಲ್ ಟವರ್‌ಗೆ ಹೊಂದಿಕೊಂಡಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ 11 ಜನ ವಾಸ ಮಾಡುತ್ತಿದ್ದರು. ಟವರ್‌ ಬೀಳುವುದಕ್ಕೂ ಮುಂಚೆ ಮನೆಯೊಳಗಿದ್ದ ಎಲ್ಲರನ್ನೂ ಹೊರಗೆ ಕರೆತರಲಾಗಿತ್ತು. ಆದ್ದರಿಂದ 11 […]