September 13, 2026

ಅತಿಥಿ ಉಪನ್ಯಾಸಕರಿಗೆ ೫ ಸಾವಿರ ವೇತನ ಹೆಚ್ಚಳ

ಬೆಂಗಳೂರು:ಕಳೆದ ಒಂದು ತಿಂಗಳಿAದಲೂ ಮುಷ್ಕರ ನಡೆಸುತ್ತಿರುವ ರಾಜ್ಯ ಅತಿಥಿ ಉಪನ್ಯಾಸಕರಿಗೆ ೫ ಸಾವಿರ ವೇತನ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದೆ. ಶುಕ್ರವಾರ ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರ ವೇತನ ೫ ಸಾವಿರ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ […]

ರಾಮಮಂದಿರ ಉದ್ಘಾಟನೆಗೆ ದೇಶಾದ್ಯಂತ 50,000 ಕೋಟಿ ರೂ. ವಹಿವಾಟು ಸಾಧ್ಯತೆ

ಅಯೋಧ್ಯೆ (ರಾಮಮಂದಿರ): ರಾಮ ಜನ್ಮಭೂಮಿ ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ಜನವರಿ ತಿಂಗಳು ಶ್ರೀರಾಮ ಭಕ್ತರಿಗಷ್ಟೇ ಅಲ್ಲ, ವ್ಯಾಪಾರಸ್ಥರು ಹಾಗೂ ಉದ್ಯಮಿಗಳಿಗೂ ಹಬ್ಬದ ಸಂದರ್ಭ. ರಾಮಮಂದಿರ ಉದ್ಘಾಟನೆಯೊಂದಿಗೆ ಜನವರಿಯಲ್ಲಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯಲಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿಯಲ್ಲಿ 50,000 ಕೋಟಿ ರೂ. ವಹಿವಾಟು ನಡೆಯುವ ಸಾಧ್ಯತೆ ಇದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಅಂದಾಜಿಸಿದೆ. ರಾಮಮಂದಿರ ಮತ್ತು ಭಗವಾನ್‌ ರಾಮನಿಗೆ ಸಂಬಂಧಿಸಿದ ಉತ್ಪನ್ನಗಳ ಖರೀದಿ ಹೆಚ್ಚಾಗಲಿದೆ. ಅದಕ್ಕಾಗಿ ಉದ್ಯಮಿಗಳು ಸಹ ಸಜ್ಜಾಗಿದ್ದಾರೆ. […]

ಐವರ ಅಸ್ಥಿಪಂಜರ ಪತ್ತೆ ಕೇಸ್‌ಗೆ ಟ್ವಿಸ್ಟ್ಪಾಳು ಬಿದ್ದ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ನಲ್ಲೇನಿದೆ?

ಚಿತ್ರದುರ್ಗ:ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ೪ ವರ್ಷದ ಹಿಂದಿನ ಡೆತ್‌ನೋಟ್ ಇದೀಗ ಐವರ ಸಾವಿನ ಸುಳಿವನ್ನು ಕೊಟ್ಟಿದೆ.ಜೈಲು ಪಾಲಾಗಿದ್ದಕ್ಕೆ ಮನನೊಂದು ಐವರು ಸಾವಿಗೆ ಶರಣಾಗಿರುವುದು ಬಯಲಾಗಿದೆ. ಸಾವಿಗೂ ಮುನ್ನ ಈ ಐವರು ಡೆತ್‌ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ.ಡೆತ್‌ನೋಟ್‌ನಲ್ಲೇನಿದೆ?ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. ೨೦೧೩ರಲ್ಲಿ ಖಾಸಗಿ ಕಂಪನಿಯೊAದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು […]

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ

ಬೆಂಗಳೂರು:ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು.ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ ೬೦ […]

‘ಮ್ಯಾಕ್ಸ್’ ಚಿತ್ರೀಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್

ಕೆಸಿಸಿ ಪಂದ್ಯಾವಳಿಯಲ್ಲಿ ಬ್ಯುಸಿಯಾಗಿದ್ದ ಕಿಚ್ಚ ಸುದೀಪ್, ಈಗ ಮತ್ತೆ ಚಿತ್ರೀಕರಣದತ್ತ ಮರಳಿದ್ದಾರೆ. ಹಲವಾರು ದಿನಗಳಿಂದ ಕ್ರಿಕೆಟ್ ಪಂದ್ಯದ ಕೆಲಸದಲ್ಲಿ ತೊಡಗಿಕೊಂಡಿದ್ದವರು, ಫಿನಾಲೆ ಪಂದ್ಯ ಮುಗಿಯುತ್ತಿದ್ದಂತೆಯೇ ಕ್ರಿಕೆಟ್ ಮೂಡ್ ನಿಂದ ಆಚೆ ಬಂದು ಮ್ಯಾಕ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಚೆನ್ನೈನಲ್ಲಿ ಚಿತ್ರೀಕರಣ ನಡೆಯುತ್ತಿದೆ.ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್, ಕ್ರಿಕೆಟ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊAಡAತೆ ನಡೆದರೆ, ಜನವರಿ ಎರಡನೇ ವಾರದ ಹೊತ್ತಿಗೆ ಮ್ಯಾಕ್ಸ್ ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ […]

ಮತ್ತೆ ನಿರೀಕ್ಷೆ ಮೂಡಿಸಿದ ದೂದ್ ಪೇಡಾ ದಿಗಂತ್

ಪೋಸ್ಟರ್‌ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಮೊದಲ ಝಲಕ್ ರಿಲೀಸ್ ಆಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ಟೀಸರ್ ರಿಲೀಸ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಕುತೂಹಲಕಾರಿ ಅಂಶಗಳಿAದ ಕೂಡಿರುವ ಟೀಸರ್ ನಲ್ಲಿ ಎಡಗೈಯೇ ಬಳಸುವವನ ತೊಂದರೆಗಳನ್ನು ಕಟ್ಟಿಕೊಡಲಾಗಿದೆ. ಟೀಸರ್ ನಲ್ಲಿ ಬರುವ ಒಂದಷ್ಟು ಟ್ವಿಸ್ಟ್ ಅಂಡ್ ಟರ್ನ್ ಅಂಶಗಳು ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದೆ.ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಸಿನಿಮಾ ಮಾಡಲಾಗಿದೆ. ದೂದ್ ಪೇಡ […]

ಹೊಸ ವರ್ಷಕ್ಕೆ ‘ಬಾಟಲ್ ತಾರೋ’ ಅಂತಿದ್ದಾರೆ ನೀನಾಸಂ ಸತೀಶ್

ಹೊಸ ವರ್ಷವನ್ನು ಹೊಸ ರೀತಿಯಲ್ಲಿ ಸ್ವಾಗತಿಸುತ್ತಿದ್ದಾರೆ ಕನ್ನಡದ ಹೆಸರಾಂತ ನಟ ನೀನಾಸಂ ಸತೀಶ್. ನಾಳೆ ಅವರ ಮ್ಯಾಟ್ನಿ ಸಿನಿಮಾದ ಹೊಸ ಹಾಡು ರಿಲೀಸ್ ಆಗುತ್ತಿದ್ದು, ಸಂಜೆ ೫ಕ್ಕೆ ‘ಬಾರೋ ಬಾರೋ ಬರುವಾಗ ಬಾಟಲ್ ತಾರೋ’ ಎರಡನೇ ಹಾಡನ್ನು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಇದೇ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಿತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್, ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. […]

ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ

ಬೆಂಗಳೂರು:ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು […]

ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ

ಬೆಂಗಳೂರುಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ಇಂದು ಕನ್ನಡ ಹೋರಾಟಗಾರರ ಖಂಡನಾ ಸಭೆ ಮಾಡಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಎರಡು ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು, ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಬಂದ್ ಮಾಡುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್ ಆಗಿ ಎಲ್ಲರನ್ನೂ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ರೆ ಬೆಂಗಳೂರು ನಗರ ಬಂದ್ ಕರೆಗೆ ಮತ್ತೊಂದು ಸುತ್ತಿನ ಸಭೆ […]

ಕೇಂದ್ರ ಸರ್ಕಾರವೇ ರೈತರಿಂದ ನೇರವಾಗಿ ಕೊಬ್ಬರಿ ಖರೀದಿಸಲಿ

ಬೆಂಗಳೂರು:ಕೇಂದ್ರ ಸರ್ಕಾರದಿಂದ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.ಈ ಕುರಿತು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೇಂದ್ರ ಸರ್ಕಾರವೇ ಕೊಬ್ಬರಿ ಖರೀದಿ ಮಾಡುವಂತೆ ಮನವಿ ಮಾಡಿದ್ದಾರೆ.ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿಗಳಾದ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್ ಕೊಬ್ಬರಿಗೆ […]