July 30, 2026

 ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ

ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್‍ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು […]

ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಆರೋಪ- ಐವರ ವಿರುದ್ಧ ದೂರು

ಮೈಸೂರು: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇದೀಗ ಐವರ ವಿರುದ್ಧ ದೂರು ಕೂಡ ನೀಡಲಾಗಿದೆ. ನಡೆದಿದ್ದೇನು..?: ಅಂಧಕಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಮಹಿಷಾಸುರನನ್ನು ರಾಜನೆಂದು ಪೂಜಿಸುತ್ತೇವೆ. ಈ ಆಚರಣೆ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಭಕ್ತರು, ತಲಾತಲಾಂತರಗಳಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ ಎಂದು ವಿವರಿಸಿದ್ದಾರೆ. ಆದರೆ ಮೆರವಣಿಗೆ ಬಂದ ಸಂದರ್ಭದಲ್ಲಿ ಕೆಲ ಕಿಗೇಡಿಗಳು ನೀರನ್ನು ಉತ್ಸವ ಮೂರ್ತಿ ಮೇಲೆ ಎರಚಿದ್ದಾರೆ ಎಂದು ಆರೋಪಿಸಲಾಗಿದೆ. […]

ಜೆಎನ್.1 ಎಂಟ್ರಿಗೂ ಮುನ್ನ ಸದ್ದಿಲ್ಲದೆ ಬಂದು ಹೋಗಿವೆ 6 ಉಪತಳಿ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ‌ ಸದ್ಯ ಓಮಿಕ್ರಾನ್ ಉಪತಳಿ ಜೆಎನ್.1 (JN.1) ಸದ್ದು ಜೋರಾಗಿದೆ. ಈ ನಡುವೆ ಮತ್ತೊಂದು ಅಚ್ಚರಿ ವಿಚಾರ ಹೊರಬಿದ್ದಿದ್ದು, ಹೊಸ ಉಪತಳಿ ಸೋಂಕು ಪತ್ತೆಗೂ ಮುನ್ನ ಓಮಿಕ್ರಾನ್‌ನ 6 ಉಪತಳಿಗಳು ಸದ್ದಿಲ್ಲದೆ ಬಂದು ಹೋಗಿವೆ. ಹೌದು, ದೇಶದಲ್ಲಿ ಸದ್ಯ ಕೊರೊನಾ ರೂಪಾಂತರಿ ತಳಿ ಜೆಎನ್.1 ತಲ್ಲಣಗೊಳಿಸುತ್ತಿದೆ. ಆದರೆ ಕಳೆದೊಂದು ವರ್ಷದಲ್ಲಿ ಎರಡು ತಿಂಗಳಿಗೆ ಒಂದರಂತೆ ಕೊರೊನಾ ರೂಪಾಂತರಿ ಓಮಿಕ್ರಾನ್‌ನ 6 ಉಪತಳಿಗಳು ಬಂದು ಹೋಗಿರುವುದು ಜನರಿಗೆ ಗೊತ್ತೇ ಇಲ್ಲ. ಇದೀಗ ಅದೇ ಸಾಲಿಗೆ ಜೆಎನ್.1 […]

ರಿಂಗ್ ರೋಡ್ ಅಂಡರ್ ಪಾಸ್ ಸರ್ವಿಸ್ ರೋಡ್​ನಲ್ಲಿ ಸಂಚಾರ ಮಾಡುವ ಮುನ್ನ ಎಚ್ಚರ!

ಬೆಂಗಳೂರು: ಮೈಸೂರು ರೋಡ್ ನಿಂದ ತುಮಕೂರು ಹೈವೇಗೆ ಸಂಪರ್ಕ ಕಲ್ಪಿಸುವ ಟ್ರಾಫಿಕ್ ಲೆಸ್ ರಿಂಗ್ ರೋಡ್ ನಲ್ಲಿ ಬರುವ ಅಂಡರ್ ಪಾಸ್ ಮತ್ತು ಸರ್ವಿಸ್ ರೋಡ್​ಗಳ ಮೂಲಕ ಪ್ರತಿದಿನ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ‌ಆದರೆ ಇಲ್ಲಿ ಅಮಾಯಕರ ಪ್ರಾಣ ತೆಗೆಯಲು ಸಿಮೆಂಟ್ ಸ್ಲ್ಯಾಬ್​ಗಳು ಕಾದು ಕುಳಿತಿವೆ. ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳು ಏನಾದರೂ ಅನಾಹುತ ಸಂಭವಿಸುವವರೆಗೆ ಎಚ್ಚೆತ್ತುಕೊಳ್ಳೊದಿಲ್ಲ ಎಂಬ ಮಾತಿದೆ. ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಂಡ ಮೇಲೆ ಒಂದೆರಡು ಲಕ್ಷ ರುಪಾಯಿ ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತವೆ. […]

ಕರ್ನಾಟಕದಲ್ಲಿ ಜೆಎನ್​.1 ಸೋಂಕು ದೃಢ, ನಾಳೆಯಿಂದ ನಿತ್ಯ 5 ಸಾವಿರ ಟೆಸ್ಟಿಂಗ್

ಬೆಂಗಳೂರು: ಕೋವಿಡ್ ರೂಪಾಂತರಿ ಜೆಎನ್.1 ಉಪತಳಿ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಸಂಬಂಧ ಇಂದು ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಉಪತಳಿ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು […]

ನಾಳೆ, ನಾಡಿದ್ದು ವಿಜಯೇಂದ್ರ‌ ಸರಣಿ ಸಭೆ – ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಗೆ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಜನಪರ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಮೊದಲ ಹಂತವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ಮತ್ತು ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ […]

‘ಕಾಟೇರ’ ಮೂಲಕ ಸಿನಿಮಾ ವಿತರಣಾ ಕ್ಷೇತ್ರಕ್ಕೆ ಮರಳಿದ ಗುರು ದೇಶಪಾಂಡೆ

ಕರ್ನಾಟಕದ ತುಂಬೆಲ್ಲ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ಕಾಟೇರ’ ಕ್ರೇಜ್ ಮೇರೆ ಮೀರಿಕೊಂಡಿದೆ. ಪರಭಾಷಾ ಚಿತ್ರಗಳಿಗೆ ಸೆಡ್ಡು ಹೊಡೆದು ಥೇಟರುಗಳಿಗೆ ಆಗಮಿಸುವ ಸನ್ನಾಹದಲ್ಲಿರೋ ಈ ಚಿತ್ರದ ದಿಕ್ಕಿನಿಂದ ಕ್ಷಣಕ್ಕೊಂದರಂತೆ ಹೊಸಾ ಸುದ್ದಿಗಳು ಹೊರಬೀಳುತ್ತಿವೆ. ಇದೇ ಹೊತ್ತಿನಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಕಾಟೇರ ವಿತರಣಾ ಹಕ್ಕನ್ನು ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಪಡೆದುಕೊಂಡಿದ್ದಾರೆ. ಈ ಸುದ್ದಿ ಕೇಳಿದಾಕ್ಷಣ ಹಲವರಿಗೆ ಅಚ್ಚರಿಯಾದೀತೇನೋ… ಗುರು ದೇಶಪಾಂಡೆ ನಿರ್ದೇಶಕರಾಗಿ ಪ್ರಸಿದ್ಧಿ ಪಡೆದುಕೊಂಡಿರುವವರು. ಇತ್ತೀಚಿನ ದಿನಗಳಲ್ಲಿ ನಿರ್ಮಾಪಕರಾಗಿಯೂ ಸದ್ದು ಮಾಡುತ್ತಿರುವವರು. ಇಂಥಾ ಗುರು […]

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ರಿಲೀಸ್ ಡೇಟ್ ಫಿಕ್ಸ್

ರಕ್ಷಿತ್ ಶೆಟ್ಟಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬ್ಯಾಚುಲರ್ ಪಾರ್ಟಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜನವರಿ 26ರಂದು ರಾಜ್ಯಾದ್ಯಂತ ಸಿನಿಮಾ ಮಾಡುವುದಾಗಿ ನಿರ್ಮಾಣ ಸಂಸ್ಥೆ ಘೋಷಣೆ ಮಾಡಿದೆ. ರಕ್ಷಿತ್ ಅಂಡ್ ಟೀಮ್  ಕಿರಿಕ್ ಪಾರ್ಟಿ ನಂತರ ಯೂತ್ ಕಾಮಿಡಿ ಸ್ಟೋರಿ ಹೊಂದಿರುವ ಸಿನಿಮಾವನ್ನು ಕೊಡಲು ಸಜ್ಜಾಗಿದ್ದಾರೆ. ಹೌದು. ‘ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್, ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ‘ಬ್ಯಾಚುಲರ್ ಪಾರ್ಟಿ’ಗೆ […]

ಮಹೇಶ್ ಬಾಬು ಜೊತೆ ಸಖತ್ತಾಗಿ ಕುಣಿಯಲಿದ್ದಾರೆ ಕನ್ನಡತಿ ಶ್ರೀಲೀಲಾ

ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಮುಖ್ಯಭೂಮಿಕೆಯ ಗುಂಟೂರು ಖಾರಂ ಸಿನಿಮಾದ ಟಪ್ಪಾಂಗುಚ್ಚಿ ಹಾಡಿಗೆ ಕನ್ನಡತಿ ಶ್ರೀಲೀಲಾ ಹೆಜ್ಜೆ ಹಾಕಲಿದ್ದಾರೆ. ಅದೊಂದು ಡಾನ್ಸ್ ನಂಬರ್ ಸಾಂಗ್ ಆಗಿದ್ದು, ಶ್ರೀಲೀಲಾ ಮೈಚಳಿ ಬಿಟ್ಟು ಕುಣಿಯಲಿದ್ದಾರೆ. ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ಇವರು ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಸಾಂಗ್ ವೊಂದಕ್ಕೆ ಹೆಜ್ಜೆ ಹಾಕಬೇಕಾಗಿದೆ. ಗುಂಟೂರು ಖಾರಂ ಸಿನಿಮಾಗೆ ನಾಯಕಿ ಯಾರು ಎನ್ನುವ ಚರ್ಚೆ ಹಲವು ದಿನಗಳಿಂದ ನಡೆಯುತ್ತಲೇ ಇತ್ತು. ಪೂಜಾ ಹೆಗಡೆ ಬಿಟ್ಟು ಹೋದ ಸ್ಥಾನವನ್ನು ತುಂಬುವವರು ಯಾರು? ಎನ್ನುವ […]

ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಲು ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. Advertisement: 5:31Close Player ಗೃಹ ಸಚಿವ ಜಿ.ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ.  ಪಾಲಿಸಬೇಕಾದ ಅಂಶಗಳೇನು?ಹೊಸ ವರ್ಷಾಚರಣೆ ಸಮಯದಲ್ಲಿ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಅಂತಹ ಸ್ಥಳಗಳಲ್ಲಿ ಲಭ್ಯವಿರುವ ಎಲ್ಲಾ ಅಂಬುಲೆನ್ಸ್‌ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮ ವಹಿಸಬೇಕು. ಹೆಚ್ಚಿನ […]