July 30, 2026

ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು

ಬೆಂಗಳೂರು: ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ವಿರುದ್ಧ ಯುವತಿಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂದು ಯುವತಿ ನೀಡಿದ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ದೂರಿನಲ್ಲಿ ಏನಿದೆ..?: ನಾನು ಮತ್ತು ಕೆ.ಸಿ ಕಾರಿಯಪ್ಪ ಇನ್‍ಸ್ಟಾದಲ್ಲಿ ಪರಿಚಯವಾಗಿದ್ದು, ಒಂದೇ ಕಮ್ಯೂನಿಟಿ ಹಾಗೂ ಒಂದೇ ಊರಿನವರಾಗಿದ್ದೇವೆ. ಆರಂಭದಲ್ಲಿ ನನಗೆ ಲವರ್ ಇರುವ ಬಗ್ಗೆ ಹೇಳಿದ್ದೆ. ಹೀಗಾಗಿ ಫ್ರೆಂಡ್ ಆಗಿ ಇರುವ ಬಗ್ಗೆ ಮಾತನಾಡಿದೆವು. ಅದಾದ ಬಳಿಕ ನಮ್ಮ ಮನೆಯವರಿಗೆ ಪರಿಚಯ ಮಾಡಲಾಗಿತ್ತು. ನನಗೆ ಮೊದಲ ಲವ್ವರ್ ಗಿಂತ […]

ಸಚಿವ ಶಿವಾನಂದ್ ಪಾಟೀಲ್ ಕೂಡಲೇ ರೈತರ ಕ್ಷಮೆ ಕೇಳಬೇಕು: ಹೆಚ್‍ಡಿಕೆ

ಬೆಂಗಳೂರು: ರೈತರ ಬಗ್ಗೆ ಸಚಿವ ಶಿವಾನಂದ್ ಪಾಟೀಲ್ ಉಡಾಫೆ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೂಡಲೇ ಸಚಿವರು ಕ್ಷಮೆ ಕೇಳಿ, ಹೇಳಿಕೆ ವಾಪಸ್ ಪಡೆಯಬೇಕು ಅಂತ ಆಗ್ರಹಿಸಿದ್ದಾರೆ. ಸಚಿವ ಶಿವಾನಂದ್ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂತಹ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಅಂತ ಕಿಡಿಕಾರಿದರು. ನಾನು ಕೃಷಿಸಾಲ […]

ಹಿಜಬ್ ನಿಷೇಧ ಆದೇಶ ವಾಪಸ್ ವಿಚಾರದಲ್ಲಿ ಕೊನೆಗೂ ಮೌನ ಮುರಿದ ಡಿಕೆಶಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಬ್ ನಿಷೇಧ ಆದೇಶ ವಾಪಸ್ ಪಡೆಯುವ ಕುರಿತು ಮಾತನಾಡಿದ್ದು, ಭಾರೀ ಚರ್ಚೆಗೀಡಾಗಿತ್ತು. ಆದರೆ ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಇಂದು ಈ ಬಗ್ಗೆ ಅವರು ಕೂಡ ಮೌನ ಮುರಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ (Hijab) ನಿಷೇಧ ಆದೇಶ ವಾಪಸ್ ಮಾಡುವ ವಿಚಾರದ ಕುರಿತು ಇನ್ನೂ ಚರ್ಚೆಯೇ ಆಗಿಲ್ಲ. ಈ ಬಗ್ಗೆ ನಾವು ಯೋಚನೆಯನ್ನೇ ಮಾಡಿಲ್ಲ. ನೀವೇ ಅದನ್ನ ದೊಡ್ಡದು […]

ರೈತರನ್ನು ಅವಮಾನಿಸುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥಹ ಸಚಿವರಿಗೆ ಸಿಎಂ ಕರೆದು ಬುದ್ಧಿವಾದ ಹೇಳಲಿ. ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಕುರಿತು ಶಿವಾನಂದ್ ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಅವರ ಹೇಳಿಕೆ ಖಂಡನಾರ್ಹ. ಅವರು ರೈತರನ್ನು ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅನ್ನ […]

ಸಾವಿರದ ಗಡಿ ದಾಟಿದ ‘ಬೊಂಬಾಟ್’ ಶೋನಲ್ಲಿ ಮಾಲಾಶ್ರೀ

ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪಾತ್ರಕ್ಕೆ ಮಸಾಲೆ ಹಾಕಿ ನಗುವನ್ನು ಹಂಚಿದ  ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಬೊಂಬಾಟ್ ಭೋಜನ” ಕಾರ್ಯಕ್ರಮದಲ್ಲಿ ಪಾತ್ರೆಗೆ ಮಸಾಲೆ ಹಾಕಿ ಭೋಜನ ಪ್ರಿಯರಿಗೆ ರಸದೌತಣವನ್ನು ಬಡಿಸುತ್ತ ಅಮೋಘ 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ. ಬೊಂಬಾಟ್ ಭೋಜನದ ಮೂರನೇ ಆವೃತ್ತಿ ಇದಾಗಿದ್ದು, ಈ ಆವೃತ್ತಿಯು ಸಾಕಷ್ಟು ವೈಶಿಷ್ಟ್ಯತೆಗಳಿಂದ ತುಂಬಿದೆ. ನಮ್ಮೂರ ಊಟ, ಮನೆ ಊಟ, ಸವಿ ಊಟ, ಕೈ ರುಚಿ, ಅಂಗೈಯಲ್ಲಿ ಆರೋಗ್ಯ, […]

‘ದೇಸಾಯಿ’ ಚಿತ್ರಕ್ಕೆ ಡಬ್ಬಿಂಗ್ ಕೆಲಸ ಶುರು

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ ‘ದೇಸಾಯಿ’ ಚಿತ್ರಕ್ಕೆ ಮಾತಿನ ಜೋಡಣೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಲವ್ 360 ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) […]

ಪುತ್ರಿ ನಿವೇದಿತಾ ನಿರ್ಮಾಣದ ಚಿತ್ರದಲ್ಲಿ ಶಿವಣ್ಣ ಅತಿಥಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅತಿಥಿ ಪಾತ್ರ ಅದಾಗಿದ್ದರೂ, ಅದೊಂದು ಮಹತ್ವದ ಕ್ಯಾರೆಕ್ಟರ್ ಎಂದು ಹೇಳಲಾಗುತ್ತಿದೆ. ಈ ಹಿಂದೆ ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಾಗೂ ದ್ವಿತೀಯ ಹಂತ ಚಿತ್ರೀಕರಣ […]

ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ಧತೆ- ಜಿಲ್ಲಾಡಳಿತದಿಂದ ನಿಷೇಧಾಜ್ಞೆ

ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ದತ್ತಪೀಠದಲ್ಲಿ ಉತ್ಸವದ ಹಿನ್ನೆಲೆ ನಾಗೇನಹಳ್ಳಿಯ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಪೀಠದ ದತ್ತಾತ್ರೇಯ ಸ್ವಾಮಿಯ ಉತ್ಸವ ಈ ಬಾರಿ ಹೊಸ ರೂಪ ಪಡೆದುಕೊಂಡಿದೆ. ವಿ.ಎಚ್.ಪಿ, ಹಾಗೂ ಬಜರಂಗದಳ ದತ್ತಪೀಠದಲ್ಲಿ ದತ್ತಜಯಂತಿ ಮಾಡುತ್ತಿದ್ದರೆ, ಶ್ರೀರಾಮಸೇನೆ ದರ್ಗಾದಲ್ಲಿ ದತ್ತಜಯಂತಿಗೆ ಮುಂದಾಗಿದೆ. ಇದೇ ಕಾರಣಕ್ಕೆ ಜಿಲ್ಲಾಡಳಿತ ದರ್ಗಾ ಸುತ್ತಮುತ್ತ ನಿಷೇಧಾಜ್ಞೆ ಹೇರಿದೆ. ಪೊಲೀಸ್ ಇಲಾಖೆಯು ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಜಿಲ್ಲೆಗೆ ಬರಲು ನಿರ್ಬಂಧ ವಿಧಿಸಿದೆ. ಈ ಮಧ್ಯೆ ಸಾವಿರಾರು […]

ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಇಲ್ಲಿನ (Hassan) ಗೊರೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ (19) ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯುವತಿ ತೆರಳಿದ್ದಳು. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.  ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು […]

ಹಿಜಬ್ Vs ಕೇಸರಿ ಶಾಲು ಫೈಟ್- ಸಿಎಂ ಘೋಷಣೆ ಬೆನ್ನಲ್ಲೇ ಧರ್ಮ ದಂಗಲ್ ಆತಂಕ

ಬೆಂಗಳೂರು: ರಾಜ್ಯದಲ್ಲಿ ಹಿಜಬ್ ನಿಷೇಧ ಆದೇಶ ವಾಪಸ್ ವರ್ಸಸ್ ಕೇಸರಿ ಶಾಲಿನ ಫೈಟ್ ಶುರುವಾದಂತಿದೆ. ಹಿಜಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸಿಎಂ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ಧರ್ಮ ದಂಗಲ್ ಶುರುವಾಗುವ ಆತಂಕ ಎದುರಾಗಿದೆ. ಈ ಬೆಳವಣಿಗೆಯಿಂದ ಸದ್ಯಕ್ಕೆ ವಿವಾದವನ್ನ ತಣ್ಣಗಾಗಿಸಲು ಸಿದ್ದರಾಮಯ್ಯ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಲಭಿಸಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸದ್ಯಕ್ಕೆ ಯಾವುದೇ ಅಧಿಕೃತ ಆದೇಶ ಬೇಡ ಎಂದು ಸಚಿವರುಗಳು ಮನವಿ ಮಾಡಿದ್ದಾರೆ. ಹಿಜಬ್ ನಿಷೇಧದ ಆದೇಶ ಹೊರಡಿಸಿದರೆ […]