July 30, 2026

ರಶ್ಮಿಕಾ ಡೀಪ್‌ಫೇಕ್ ವಿಡಿಯೋ: ಶಂಕಿತರ ವಿಚಾರಣೆ

ರಶ್ಮಿಕಾ ಮಂದಣ್ಣ ಎರಡೆರಡು ಬಾರಿ ಡೀಪ್‌ಫೇಕ್ ಹಾವಳಿಗೆ ತುತ್ತಾಗಿದ್ದಾರೆ. ಡೀಪ್‌ಫೇಕ್  ಮಾಡಿರೋ ದುರುಳರನ್ನು ಹುಡುಕುವುದಕ್ಕಾಗಿ ಪೊಲೀಸ್ ಇಲಾಖೆ ಗಂಭೀರವಾಗಿ ಕಾರ್ಯಚರಣೆ ನಡೆಸಿತ್ತು. ಇದೀಗ ನಾಲ್ವರ ಶಂಕಿತರನ್ನು ಪೊಲೀಸರು ಠಾಣೆಗೆ ಕರೆಯಿಸಿಕೊಂಡಿದ್ದು, ಅವರನ್ನು ತೀವ್ರ ವಿಚಾರಣೆಗೆ ಗುರಿ ಪಡಿಸಲಾಗಿದೆ. ತಾವು ವಿಡಿಯೋ ಡೀಪ್‌ಫೇಕ್ ಮಾಡಿಲ್ಲ. ಕೇವಲ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೆವು ಎಂದು ಹೇಳಿದ ಹಿನ್ನೆಲೆಯಲ್ಲಿ ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗುತ್ತಿದೆ ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ […]

ಇನ್ಮುಂದೆ KSRTC, BMTC ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ: ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.  ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. […]

ಭ್ರೂಣ ಹತ್ಯೆ ಪ್ರಕರಣ – ನಾಗಮಂಗಲದ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

ಮಂಡ್ಯ: ಜಿಲ್ಲೆಯ ಆಲೆಮನೆಯಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಜಿಲ್ಲೆಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಲೋಪವಿರುವ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲಾಗುತ್ತಿದೆ. Advertisement: 3:20Close Player ಮಂಗಳವಾರ ಸಂಜೆ ನಾಗಮಂಗಲದ 2 ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸಿಬ್ಬಂದಿಗಳ ಕಳ್ಳಾಟ ಬೆಳಕಿಗೆ ಬಂದಿದೆ. ಇಲ್ಲಿನ ಸಿಸ್ಟಮ್‌ನಲ್ಲಿದ್ದ ಡೇಟಾ ಡಿಲೀಟ್ ಮಾಡಿ […]

5 ದಿನಗಳ ಹಿಂದೆ ಬೆಂಗ್ಳೂರಿನಲ್ಲಿ ಕೊರೊನಾದಿಂದ ವ್ಯಕ್ತಿ ಸಾವು

ಬೆಂಗಳೂರು: ಐದು ದಿನಗಳ ಹಿಂದೆಯಷ್ಟೇ ಕೊರೊನಾ ವೈರಸ್‍ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಅನ್ಯ ಕಾಯಿಲೆಗಳು ಕೂಡ ಇದ್ದವು. ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಕೊರೊನಾ ಪಾಸಿಟಿವ್ ಕೂಡ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 5 ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಮೃತ ವ್ಯಕ್ತಿಯ ಕುಟುಂಬದಲ್ಲಿ […]

ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದ ಅವರು, ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.  ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ […]

NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

ಬಳ್ಳಾರಿ: ಕಳೆದ 2 ದಿನಗಳ ಹಿಂದೆ ಗಣಿನಾಡು ಬಳ್ಳಾರಿಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಯ ಕತೆ ಕೇಳಿದರೆ ಒಂದು ಕ್ಷಣ ಬೆಚ್ಚಿಬೀಳೋದು ಗ್ಯಾರಂಟಿ. ಬಂಧನಕ್ಕೆ ಒಳಗಾದ ಸಮೀರ್ ಕಾಲೇಜು ವಿದ್ಯಾರ್ಥಿಯಾಗಿದ್ದು, ವ್ಯಾಸಂಗ ಮಾಡೋವಾಗಲೇ ಆತನಿಗೆ ಐಎಸ್‌ಐಎಸ್ ಸಂಪರ್ಕ ಇತ್ತು ಎನ್ನುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಎನ್‌ಐಎ ದಾಳಿಯಲ್ಲಿ ಬಳ್ಳಾರಿ ಮೂಲದ ಇಬ್ಬರನ್ನು ಬಂಧಿಸಿದ್ದು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಾಲೇಜಿನಲ್ಲಿ ವ್ಯಾಸಂಗ ಮಾಡೋವಾಗಲೇ ಆ ಯುವಕನಿಗಿರೋ ಸಂಪರ್ಕ ಮಾತ್ರ ಬೆಚ್ಚಿ ಬೀಳುವಂತಿದೆ. ಕೌಲ್ […]

ಅಶಿಸ್ತಿನ ವರ್ತನೆ, 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌

ನವದೆಹಲಿ: ಡಿ. 13ರಂದು ಸಂಸತ್‌ ಭವನದಲ್ಲಿ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಉತ್ತರಕ್ಕೆ ಒತ್ತಾಯಿಸಿ, ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ವಿಪಕ್ಷಗಳ 49 ಸದಸ್ಯರನ್ನ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಇಂದು) ಅಮಾನತುಗೊಳಿಸಿದ್ದಾರೆ. ಈ ಮೂಲಕ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತುಗೊಂಡ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಸೋಮವಾರ ಕಲಾಪ ಮುಗಿಯುವವರೆಗೆ ರಾಜ್ಯಸಭೆ ಮತ್ತು ಲೋಕಸಭೆಯಿಂದ ಒಟ್ಟು 92 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಮಂಗಳವಾರ ಅಮಾನತು ಆದವರಲ್ಲಿ ನ್ಯಾಷನಲ್ ಕಾನ್ಸರೆನ್ಸ್ […]

ಕೇರಳದಲ್ಲಿ ಕೊರೊನಾ ಹೆಚ್ಚಳ – ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ?1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ತೆರಳಬೇಡಿ. 2. […]

ಮದ್ದೂರಿನ ವ್ಯಕ್ತಿಯೋರ್ವನಿಗೆ ಕೊರೊನಾ 

ಮಂಡ್ಯ: ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಕೇರಳದಲ್ಲಿ (Kerala) ಕೊರೊನಾ ರೂಪಾಂತರಿ JN.1 ಕೇಸ್ ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಮಂಗಳವಾರವೇ (ಇಂದು) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ […]

ದೈಹಿಕ ಶಿಕ್ಷಕನ ಅಮಾನವೀಯ ವರ್ತನೆ

ಬೀದರ್: ನಗರದಲ್ಲಿ ಶಿಕ್ಷಕನಿಂದ ಅಮಾನವೀಯ ಕೃತ್ಯ ನಡೆದಿರುವುದು ಬಯಲಿಗೆ ಬಂದಿದೆ. ದೈಹಿಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿಗಳ ಪ್ಯಾಂಟ್ ಬಿಚ್ಚಿಸಿ, ಅವರನ್ನು ಗ್ರೌಂಡ್‌ನಲ್ಲಿ ಓಡಿಸಿ ಅಮಾನವೀಯವಾಗಿ ನಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನಗರೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದೆ. ರಮೇಶ್ ಅಮಾನವೀಯ ಕೃತ್ಯ ಎಸಗಿದ ದೈಹಿಕ ಶಿಕ್ಷಕ. ವಿದ್ಯಾರ್ಥಿಗಳು ಹೇಳಿದ್ದನ್ನು ಕೇಳದೇ ಇದ್ದರೆ ಅವರ ಪ್ಯಾಂಟ್ ಬಿಚ್ಚಿಸಿ ಚಡ್ಡಿ ಮೇಲೆ ಓಡಿಸುತ್ತಿದ್ದ. ಅರೆಬೆತ್ತಲೆಗೊಳಿಸಿ ಗ್ರೌಂಡ್‌ನಲ್ಲಿ ಓಡಿಸಿದ್ದಲ್ಲದೇ ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದ ಹಾಗೂ […]