July 30, 2026

ಚುನಾವಣೆ ಬಂದಾಗ ಬಿಜೆಪಿಗರಿಂದ ಗಲಾಟೆ ಸೃಷ್ಟಿ: ಎಸ್.ಆರ್ ಶ್ರೀನಿವಾಸ್

ತುಮಕೂರು: ಚುನಾವಣೆ ಬಂದಾಗ ಬಿಜೆಪಿಗರು ಯಾವುದಾರೂ ಒಂದು ಗಲಾಟೆಯನ್ನ ಸೃಷ್ಟಿ ಮಾಡ್ತಾರೆ. ಅಂದು ಪುಲ್ವಾಮಾ ದಾಳಿ ಮಾಡಿಸಿದ್ದು ಬಿಜೆಪಿಗರೇ ಎಂದು ಗುಬ್ಬಿ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುಲ್ವಾಮಾ ದಾಳಿ ಮಾಡಿಸಿದ್ದು, ಬಿಜೆಪಿಗರೇ, ಚುನಾವಣೆ ಬಂದಾಗ ಯಾವುದಾರೂ ಒಂದು ಗಲಾಟೆ ಸೃಷ್ಟಿ ಮಾಡಿಸುತ್ತಾರೆ. ಸ್ಮೋಕ್‌ ಬಾಂಬ್‌ ಪ್ರಕರಣ ವಿಚಾರದಲ್ಲಿಯೂ ಪಾಸ್‌ ಕೊಟ್ಟಿದ್ದು ಪ್ರತಾಪ್‌ ಸಿಂಹ. ಅದೇ ಪಾಸನ್ನ ಪೀರ್‌ ಸಾಬ್‌ನೋ ಅಥವಾ ಕಾಂಗ್ರೆಸ್‌ನವರೋ ಕೊಟ್ಟಿದ್ದರೇ ಅದರ ಲಾಭವನ್ನ ಬಿಜೆಪಿಯವರೇ ಪಡೆಯುತ್ತಿದ್ದರು. […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಅತಿದೊಡ್ಡ ಉತ್ಸವ ಎಂದರೆ ಅದು ಚಂಪಾಷಷ್ಠಿ ಮಹೋತ್ಸವ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆದಿದ್ದು, ಸುಬ್ರಹ್ಮಣ್ಯ ದೇವರ ಬ್ರಹ್ಮ ರಥೋತ್ಸವ ಸಂಪನ್ನಗೊಂಡಿದೆ. ಧನು ಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸುಬ್ರಹ್ಮಣ್ಯ ದೇವರ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳುವ ಸಲುವಾಗಿ ಭಕ್ತ ಸಾಗರ ಆಗಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ದೊಡ್ಡ ಉತ್ಸವ ಇದಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 10 […]

ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

ನವದೆಹಲಿ: ಒಂದು ವೇಳೆ ಕೇಂದ್ರದಲ್ಲಿ ಬೇರೆ ಪಕ್ಷ ಅಧಿಕಾರದಲ್ಲಿ ಇರುತ್ತಿದ್ದರೆ ಮೋಕ್ ಬಾಂಬ್ ಪ್ರಕರಣ ಸಂಬಂಧ ಬಿಜೆಪಿಯವರು ಇಡೀ ದೆಹಲಿಯನ್ನು ಬಂದ್ ಮಾಡಿಸುತ್ತಿದ್ದರು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರುತ್ತಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. ಆದರೆ ಘಟನೆ ಸಂಬಂಧ ಬಿಜೆಪಿ ಸಂಸದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು. […]

ವಿಷ ಸೇವಿಸಿರುವ ಶಂಕೆ – ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಆಸ್ಪತ್ರೆಗೆ ದಾಖಲು

ಇಸ್ಲಾಮಾಬಾದ್: ತಲೆಮರೆಸಿಕೊಂಡಿದ್ದ ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳು ತಿಳಿಸಿವೆ. ಸದ್ಯ ಪ್ರಾಥಮಿಕ ಮೂಲಗಳ ಮಾಹಿತಿಯಿಂದ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು ದಿನಗಳಿಂದಲೂ ಇಬ್ರಾಹಿಂ ಆಸ್ಪತ್ರೆಯಲ್ಲಿರುವುದಾಗಿ ತಿಳಿದುಬಂದಿದೆ.  ದಾವೂದ್‌ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಮಾತ್ರವೇ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಇಬ್ರಾಹಿಂ […]

ಕಿರುತೆರೆ ನಟ ರವಿಕಿರಣ್‍ಗೆ ಲಕ್ಷ ಲಕ್ಷ ದೋಖಾ

ಖ್ಯಾತ ಕಿರುತೆರೆ ನಟ, ನಿರ್ದೇಶಕ, ನಿರ್ಮಾಪಕ ರವಿಕಿರಣ್‍ಗೆ ಸ್ವಾಮೀಜಿಯೊಬ್ಬರು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ವರದಿಯಾಗಿದೆ. ಕುಮಾರಸ್ವಾಮಿ ಲೇಔಟ್‍ನಲ್ಲಿ ವಾಸವಾಗಿರುವ ರವಿಕಿರಣ್‍ಗೆ ಕಳೆದ ಎರಡು ವರ್ಷಗಳ ಹಿಂದೆ ನವೀನ್, ಭಾಗ್ಯಶ್ರೀ ಅನ್ನೋರು ಪರಿಚಯವಾಗಿದ್ರು. ನಾನು ಅನಾಥಾಶ್ರಮವೊಂದನ್ನು ನಡೆಸುತ್ತಿದ್ದೇನೆ, ನಿಮ್ಮ ಕಡೆಯಿಂದ ಏನಾದ್ರು ಸಹಾಯ ಮಾಡಿ ಅಂತಾ ಹೇಳಿದ್ದ. ಅನಾಥಶ್ರಮ ಅಂತಾ ಕೇಳಿದ ರವಿಕಿರಣ್ ಮೊದಲಿಗೆ ಎರಡುವರೇ ಸಾವಿರ ಗೂಗಲ್ ಪೇ ಮೂಲಕ ಹಣ ನೀಡಿದ್ರು. ಅಂದಿನಿಂದ ನಟ ರವಿಕಿರಣ್‍ಗೆ ಹತ್ತಿರವಾದ ನವೀನ್ ಭಾಗ್ಯಶ್ರೀ ಗುರುಜೀ, ದುಬೈನಲ್ಲಿ […]

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌!

ಬೆಂಗಳೂರು: ರಾಜ್ಯದಲ್ಲಿ ಪದೇ ಪದೇ ಹನಿಟ್ರ್ಯಾಪ್‌ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ದುಡ್ಡು ಲಪಟಾಯಿಸಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬೆಂಗಳೂರು ಸಿಸಿಬಿ ದೂರು ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಎಂದು ಗುರುತಿಸಲಾಗಿದೆ. ಬಂಧಿತರ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದು, ತನ್ನ ಪತ್ನಿಯನ್ನೇ ಹನಿಟ್ರ್ಯಾಪ್‌ ಮಾಡಲು ಖಲೀಮ್ ತೊಡಗಿಸಿಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ. ಈ ಗ್ಯಾಂಗ್ ಅತೀವುಲ್ಲಾ ಎಂಬ […]

ನಗರದೊಳಗೆ ಎಂಟ್ರಿ ಕೊಟ್ಟ ಜಿಂಕೆ ಅಪಘಾತಕ್ಕೆ ಬಲಿ

ಬೆಂಗಳೂರು: ನಗರದೊಳಗೆ ಎಂಟ್ರಿ ಕೊಟ್ಟ ಜಿಂಕೆ ಅಪಘಾತವಾಗಿ ಸಾವನ್ನಪ್ಪಿದ ಘಟನೆ ಕೋರಮಂಗಲದ 100 ಫೀಟ್ ರಸ್ತೆಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ನಗರದೊಳಗೆ ಬಂದಿದ್ದ ಜಿಂಕೆ ಅಪಘಾತವಾಗಿ (Accident) ಮೃತಪಟ್ಟಿದೆ. ಅಪರಿಚಿತ ವಾಹನಕ್ಕೆ ಸಿಲುಕಿ ಗಂಡು ಜಿಂಕೆ ಸಾವನ್ನಪ್ಪಿದ್ದು, ಆರ್ಮಿ ಫೋರ್ಸ್ ರಸ್ತೆ ಬಳಿ ಘಟನೆ ನಡೆದಿದೆ.  ವಿಷಯ ತಿಳಿದ ತಕ್ಷಣ ಅಪಘಾತ ನಡೆದ ಜಾಗಕ್ಕೆ ಗ್ರೀನ್ ಆರ್ಮಿ ಫೋರ್ಸ್ ಧಾವಿಸಿ ಜಿಂಕೆಗೆ ಚಿಕಿತ್ಸೆ ನೀಡುವ ಪ್ರಯತ್ನ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಜಿಂಕೆ […]

ಅಧಿಕಾರ ಶಾಶ್ವತ ಅಲ್ಲ.. ಗೂಂಡಾಗಿರಿ ಮಾಡುವುದು ಸರಿಯಲ್ಲ

ಶಿವಮೊಗ್ಗ: ಅಧಿಕಾರ ಶಾಶ್ವತ ಅಲ್ಲ. ಈ ರೀತಿ ಗೂಂಡಾಗಿರಿ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಗುಡುಗಿದ್ದಾರೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ನವರು , ಶಾಸಕರ ಕಡೆಯವರು ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಮೊದಲು ಕಾರು ಜಖಂ ಮಾಡಿದ್ದರು. ಹಲ್ಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಭದ್ರಾವತಿಗೆ ಕಳಂಕ ತರುವಂತಹ ಕೆಲಸವನ್ನು ‌ಕಿಡಿಗೇಡಿಗಳು ಮಾಡುತ್ತಿದ್ದಾರೆ. ಮಟ್ಕಾ, ಜೂಜು ಇಸ್ಪೀಟು ದಂಧೆ […]

ರಾಜ್ಯದಲ್ಲಿ ಇದ್ದಾರೆ ಬರೋಬ್ಬರಿ 1,436 ನಕಲಿ ವೈದ್ಯರು

ಬೆಂಗಳೂರು: ಭ್ರೂಣ ಹತ್ಯೆ ಮಧ್ಯೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದೆ. ಸದನದಲ್ಲಿ ಕೂಡ ನಕಲಿ ವೈದ್ಯರ ವಿಚಾರವಾಗಿ ಆರೋಗ್ಯ ಇಲಾಖೆಯನ್ನು ಪ್ರಶ್ನಿಸುತ್ತಾ ಇದ್ದಾರೆ. ಸ್ಕ್ಯಾನಿಂಗ್ ಸೆಂಟರ್‌ಗಳ ಜೊತೆ ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಬಲೆ ಬೀಸಿದೆ. ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಭ್ರೂಣ ಹತ್ಯೆ ಮತ್ತು ನಕಲಿ ವೈದ್ಯರ ವಿಷಯ ಚರ್ಚೆ ಆಗುತ್ತಿದೆ. ಭ್ರೂಣ ಹತ್ಯೆ ಮತ್ತು ನಕಲಿ ವೈದ್ಯರಿಗೆ ಕಡಿವಾಣ ಹಾಕಲ್ಲ ಎಂದು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿದ್ದಾರೆ. ಹೀಗಾಗಿ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಸ್ಕ್ಯಾನಿಂಗ್ […]

ಪ್ರತಾಪ್ ಸಿಂಹರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು

ಮೈಸೂರು: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆಸಿದ ವ್ಯಕ್ತಿಗಳಿಗೂ ಪ್ರತಾಪ್ ಸಿಂಹರಿಗೂ ಪರಿಚಯವಿರುತ್ತೆ. ಕೂಡಲೇ ಅವರನ್ನು ತನಿಖೆಗೆ ಒಳಪಡಿಸಬೇಕು. ಅಲ್ಲಿಯವರೆಗೂ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಬೇಕು ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪಾರ್ಲಿಮೆಂಟ್ ಮೇಲೆ ದುಷ್ಕರ್ಮಿಗಳ ಅಟ್ಯಾಕ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಸಂಸತ್ ಮೇಲೆ ನಡೆದಿರುವ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಸಂಸತ್‌ನಲ್ಲಿ ಭದ್ರತಾ ಲೋಪ ಆಗಿದೆ. ಈ ಘಟನೆ ಹಿಂದೆ ಬೇರೆಯ ಹುನ್ನಾರ ಇದೆ. ಸಂಸತ್ ಮೇಲೆ ದಾಳಿ […]