July 30, 2026

ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

ನವದೆಹಲಿ: ಸಂಸತ್‌ನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು […]

45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

ನವದೆಹಲಿ: ಲೋಕಸಭೆಯ ಒಳಗೆ ಸ್ಮೋಕ್‌ ಬಾಂಬ್‌ ಸಿಡಿಸಿದ ಮನೋರಂಜನ್‌ ಮತ್ತು ಸಾಗರ್‌ ಶರ್ಮಾ 45 ನಿಮಿಷಗಳ ಕಾಲ ಪಾಸ್‌ ಪಡೆದು 2 ಗಂಟೆಗಳ ಕಾಲ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದು ಹೇಗೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಹೌದು. ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:15 ರವರೆಗೆ ಕಲಾಪ ವೀಕ್ಷಣೆಗೆ ಸಮಯ ನೀಡಲಾಗಿತ್ತು. 45 ನಿಮಿಷಗಳವರೆಗೆ ಪಾಸ್‌ ಪಡೆದ ಇವರು ಸುಮಾರು 2 ಗಂಟೆಗಳ ಕಾಲ ಕಲಾಪ ವೀಕ್ಷಣೆ ಮಾಡಿದ್ದರು.  ಸಂಸತ್‌ನಲ್ಲಿ ಕಲಾಪ ನಡೆಯಲಿ, ನಡೆಯದೇ ಇರಲಿ 45 ನಿಮಿಷಗಳ ಅವಧಿ […]

ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

ಮೈಸೂರ: ಲೋಕಸಭೆಯ ಕಲಾಪದ ನಡೆಯುವಾಗಲೇ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಮೈಸೂರು  ಮೂಲದವನಾಗಿದ್ದರೂ ಹಲವು ವರ್ಷಗಳಿಂದ ಮೈಸೂರಿನಲ್ಲಿ ತನ್ನ ಸ್ನೇಹಿತರ ಸಂಪರ್ಕವನ್ನೇ ಕಳೆದುಕೊಂಡಿದ್ದ ಎಂಬುದು ಬೆಳಕಿಗೆ ಬಂದಿದೆ. ಮನೋರಂಜನ್ ಮೈಸೂರಿನ ಎಲ್ಲಾ ಸ್ನೇಹಿತರ ಸಂಪರ್ಕ ಕಳೆದುಕೊಂಡಿದ್ದ. ಬೆಂಗಳೂರಿನಲ್ಲೇ (Bengaluru) ತನ್ನ ಸ್ನೇಹಿತರ ನೆಟ್‌ವರ್ಕ್ ಇಟ್ಟುಕೊಂಡಿದ್ದ. ಮೈಸೂರಿನಲ್ಲಿ ಕಳೆದ 5-6 ವರ್ಷಗಳಿಂದ ಯಾವುದೇ ಸ್ನೇಹಿತರ ಸಂಪರ್ಕದಲ್ಲಿ ಇರಲಿಲ್ಲ. ಈ ಹಿನ್ನೆಲೆ ಪೊಲೀಸರು ಬೆಂಗಳೂರಿನಲ್ಲಿ ಅವನ ವಾಸಸ್ಥಳದ ಪರಿಶೀಲನೆಗೆ ತೆರಳಿದ್ದಾರೆ. ಜೊತೆಗೆ ಮನೋರಂಜನ್‌ನ ಬೆಂಗಳೂರಿನಲ್ಲಿರುವ ಸ್ನೇಹಿತರ ಹುಡುಕಾಟ ನಡೆಸಲಾಗುತ್ತಿದೆ.  ಇಷ್ಟು ಮಾತ್ರವಲ್ಲದೇ […]

ಭಯೋತ್ಪಾದಕರ ಕೇಂದ್ರ ಆಗ್ತಿದೆ ರಾಜ್ಯ: ಈಶ್ವರಪ್ಪ ಕಿಡಿ

ಶಿವಮೊಗ್ಗ: ರಾಜ್ಯ ಭಯೋತ್ಪಾದಕರು, ಕೊಲೆಗಡುಕರ ಹಾಗೂ ಗೂಂಡಾಗಳ ಕೇಂದ್ರ ಆಗುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಶಾಂತಿ ಪ್ರಿಯರಾದ ಕರ್ನಾಟಕ ರಾಜ್ಯದಲ್ಲಿ, ರಾಜಭವನಕ್ಕೂ ಬಾಂಬ್ ಬೆದರಿಕೆ ಹಾಕುವ ಧೈರ್ಯ ದೇಶದ್ರೋಹಿಗಳಿಗೆ ಬಂದಿದೆ. ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದ್ದು, ಸಿಎಂ, ಡಿಸಿಎಂ, ಗೃಹ […]

ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿಕೆಶಿ

ಬೆಂಗಳೂರು: ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಪ್ರಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧಕ್ಕೆ ಡಿಕೆಶಿ ಪ್ರತಿಕ್ರಿಯಿಸಿದರು. ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ […]

1 ಕೆ.ಜಿ ತುಪ್ಪವನ್ನು 5,000 ರೂ.ಗೆ ಮಾರುತ್ತಿದ್ದೇನೆ: ಯತ್ನಾಳ್

ಬೆಳಗಾವಿ: ನಾನು ದೇಶೀಯ ಆಕಳಿನ ತುಪ್ಪವನ್ನು ಕೆಜಿಗೆ 5,000 ರೂ.ನಂತೆ ಮಾರುತ್ತಿದ್ದೇನೆ. ನನ್ನ ಬಳಿ ಗಿರ್ ತಳಿಯ 250 ಹಸುಗಳಿವೆ. ಅದರ ತುಪ್ಪವನ್ನು ಕೆಜಿಗೆ 2,500 ರೂ. ನಂತೆ ಮಾರುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಜೋಳ ಬೆಳೆದರೆ ಗೋ ಸಂಪತ್ತು ಉಳಿಯುತ್ತದೆ. ತೊಗರಿಯಿಂದ ಗೋ ಸಂಪತ್ತು ಉಳಿಯುವುದಿಲ್ಲ. ನನ್ನದೇ ಒಂದು ಗೋಶಾಲೆ ಇದೆ. ತುಪ್ಪ ಮಾರುವುದರೊಂದಿಗೆ ವಿಭೂತಿ, ಕರ್ಪೂರ ಹಾಗೂ ಕುಂಕುಮವನ್ನು […]

ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ಆ ಕೊಠಡಿಗೆ ಹೋಗಲ್ಲ

ಬೆಂಗಳೂರು: ಪ್ರತಿಪಕ್ಷ ನಾಯಕ್ ಆರ್ ಅಶೋಕ್ ಮತ್ತು ಶಾಸಕ ಎಸ್‌ಆರ್ ವಿಶ್ವನಾಥ್ ಮಧ್ಯೆ ಅಸಮಾಧಾನ ಮುಂದುವರೆದಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೊಠಡಿಗೆ ಹೋಗಲು ವಿಶ್ವನಾಥ್ ಮತ್ತೆ ನಿರಾಕರಿಸಿದ್ದಾರೆ. ಸದನದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಆರ್ ಅಶೋಕ್ ಕಚೇರಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಶಾಸಕ ಮುನಿರತ್ನ ವಿಶ್ವನಾಥ್ ಅವರನ್ನು ಅಶೋಕ್ ಕೊಠಡಿಗೆ ಕರೆದೊಯ್ಯಲು ಕೈ ಹಿಡಿದುಕೊಂಡರು. ಈ ವೇಳೆ ವಿಶ್ವನಾಥ್ ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ನಾನು ಆ ಕೊಠಡಿಗೆ ಬರೋದಿಲ್ಲ. ಬೇಕಾದರೆ ನಾಮಫಲಕ ತೆಗೆಯಲಿ […]

ಬೆಂಗಳೂರು ಇತಿಹಾಸದಲ್ಲೇ ಮೊದಲ ಬಾರಿ ಕೆರೆ ಸೀಜ್

ಬೆಂಗಳೂರು: ನಗರದ ಇತಿಹಾಸದಲ್ಲೇ ಮೊದಲ ಬಾರಿಗೆ ಕೆರೆಯೊಂದನ್ನು ಸೀಜ್ ಮಾಡಲಾಗಿದೆ. ಕೆರೆಯ ಒಳಗೆ ಪ್ರವೇಶಿಸುವ ಮಾರ್ಗಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ. ಖಾಸಗಿ ಕಂಪನಿಯೊಂದರಿಂದ ಜಿಗಣಿಯ ಹೆನ್ನಾಗರ ಕೆರೆ ಒತ್ತುವರಿ ಕಾರ್ಯ ನಡೆಯುತ್ತಿತ್ತು. ಕೆರೆ ಒಳಗಡೆ ಮಣ್ಣು ಹಾಕಿ ಮುಚ್ಚಲು ಯತ್ನಿಸಲಾಗುತ್ತಿತ್ತು. ಹೆನ್ನಾಗರ ಕೆರೆ ಒತ್ತುವರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಆನೇಕಲ್ ತಹಶೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರು ನೀಡಿದ ಬಳಿಕ ಕೆರೆ ಒತ್ತುವರಿ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ. […]

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ರಾತ್ರಿ 11:30ರ ವೇಳೆಗೆ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಿದ್ದಾರೆ. ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಬೆದರಿಕೆ ಜಾಡು ಹಿಡಿದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಕರೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.  ಈ ಕಿಡಿಗೇಡಿಗಳು ಎನ್‌ಐಎ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿದ್ದು, ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಎನ್‌ಐಎ ಅಧಿಕಾರಿಗಳಿಗೆ […]

ಮುಂದಿನ ವರ್ಷದಿಂದ್ಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ 

ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 […]