July 30, 2026

ಮೈಸೂರಿಗೆ ಕಳುಹಿಸಿಕೊಡಿ ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಗೋಳಾಡಿದ ಮಾವುತ

ಹಾಸನ: ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಮಾವುತರೊಬ್ಬರು ಕಣ್ಣೀರು ಹಾಕಿದ್ದು, ನೆರೆದವರ ಕಣ್ಣಂಚಲ್ಲಿಯೂ ನೀರು ತರಿಸುವಂತಿತ್ತು. ಅರ್ಜುನನ ಅಂತಿಮ ದರ್ಶನ ಪಡೆದು ಮಾವುತ ವಿನು ಕಣ್ಣೀರಿಟ್ಟರು. ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನನ್ನು ನನ್ನ […]

ಕೌನ್ ಬನೇಗಾ ಕರೋಡ್‌ಪತಿ: ಕೋಟಿ ಗೆದ್ದ 14 ವರ್ಷದ ಪೋರ

ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಶೋ ಇದೀಗ 15ನೇ ಆವೃತ್ತಿ ಪ್ರಸಾರವಾಗಿದೆ. ಇದೇ ಮೊದಲ ಬಾರಿಗೆ ಈ ಶೋನಲ್ಲಿ 14 ವರ್ಷದ ಹುಡುಗನ ಕೋಟಿ ರೂಪಾಯಿ ಸಿಕ್ಕಿದೆ. 16 ನೇ ಪ್ರಶ್ನೆಗೆ ಸರಿಯಾಗಿ ಉತ್ತರಿಸುವ ಮೂಲಕ ಒಂದು ಕೋಟಿ ರೂಪಾಯಿ ಪಡೆದಿದ್ದಾನೆ ಹರಿಯಾಣದ ಮಹೇಂದ್ರ ಗಡ್ ಮಾಯಾಂಕ್. ಮಾಯಾಂಕ್  ಸದ್ಯ 8ನೇ ತರಗತಿ ಓದುತ್ತಿದ್ದಾನೆ. ಈ ಸೀಸನ್ ನಲ್ಲಿ ಒಂದು ಕೋಟಿ ರೂಪಾಯಿ ಪಡೆಯುವ ಮೂಲಕ ದಾಖಲೆ ಬರೆದಿದ್ದಾನೆ. ಒಂದು ಕೋಟಿ […]

ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ- ಹೆಚ್‍ಡಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯ ಸುಮಾರು 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಹೆಚ್‍ಡಿಕೆ, ಸಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ ಇದಾಗದೆ ಎಂದು ಹೇಳಿದ್ದಾರೆ. ಎಕ್ಸ್ ನಲ್ಲಿ ಹೆಚ್‍ಡಿಕೆ ಬರೆದಿದ್ದೇನು..?: ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ […]

ಶಿಕ್ಷಕಿಯ ಅಪಹರಣ ಪ್ರಕರಣ ಸುಖಾಂತ್ಯ – ಕಾರನ್ನು ಬೆನ್ನಟ್ಟಿ ರಕ್ಷಿಸಿದ ಪೊಲೀಸರು

ಹಾಸನ: ಮದುವೆಗೆ ಒಪ್ಪದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ಆರೋಪಿಯನ್ನು ಅಪಹರಣ ನಡೆದ ಏಳೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ಶಿಕ್ಷಕಿಯನ್ನು ರಕ್ಷಿಸಿ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದೆ. ಆರೋಪಿ ಬಿಟ್ಟಗೌಡನಹಳ್ಳಿ ಬಳಿ ಶಾಲೆಗೆ ಹೊರಟು ನಿಂತಿದ್ದ ಶಿಕ್ಷಕಿಯನ್ನು ಅಹರಣ ಮಾಡಿದ್ದ. ಅತ್ತೆ ಮಗಳೇ ಆದ ಶಿಕ್ಷಕಿಯನ್ನು ಕಾರಿನಲ್ಲೇ ಮದುವೆಯಾಗಲು ಯತ್ನಿಸಿದ್ದಾನೆ. ಆಕೆ ಒಪ್ಪದಿದ್ದಾಗ ಅಪಹರಿಸಿಕೊಂಡು ಹೋಗಿದ್ದ. ಪೊಲೀಸರು ಸಹ ಕಾರನ್ನು ಬೆನ್ನಟ್ಟಿದ್ದರು. ಆರೋಪಿ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.  ಪೊಲೀಸರು […]

ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್‌ ಹಮಾರ ಎಂದ ಭಾರತೀಯರು

ಅಬುಧಾಬಿ: ದುಬೈನಲ್ಲಿ ನಡೆಯಲಿರುವ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ತೆರಳಿದ್ದು, ದುಬೈನಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ. ಮೋದಿ ಅವರು ದುಬೈ ತಲುಪುತ್ತಲೇ ಯುಎಇನಿಂದ ಸಾಂಪ್ರದಾಯಿಕವಾಗಿ ಸ್ವಾಗತ ದೊರೆಯಿತು. ಇದಾದ ಬಳಿಕ ಅನಿವಾಸಿ ಭಾರತೀಯರು ನರೇಂದ್ರ ಮೋದಿ ಅವರನ್ನು ಸಾಂಸ್ಕೃತಿಕವಾಗಿ ಸ್ವಾಗತಿಸಿದರು. ಮಹಿಳೆಯರು ಸಾರೇ ಜಹಾಂಸೆ ಅಚ್ಚಾ ಹಿಂದೂಸ್ತಾನ್‌ ಹಮಾರಾ ಗೀತೆ ಹಾಡುವ ಜೊತೆಗೆ ಭಾರತ್‌ ಮಾತಾ ಕೀ ಜೈ, ವಂದೇ ಮಾತರಂ ಎಂಬ ಉದ್ಘೋಷಗಳನ್ನು ಮೊಳಗಿಸಿದರು.  ನರೇಂದ್ರ […]

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಂಬ್ ಬೆದರಿಕೆಗಳು ಮತ್ತೆ ಆರಂಭವಾಗಿದೆ. ಈ ಬಾರಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇತ್ತ ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿದ್ದಾರೆ.  ಕಳೆದ ವರ್ಷವೂ ಬೆಂಗಳೂರು ನಗರದ […]

ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು: 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿಯನ್ನು ಕರ್ನಾಟಕ ಲೋಕಾಯುಕ್ತ  ಸಾರ್ವಜನಿಕಗೊಳಿಸಿದೆ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ. ಈ ಬಾರಿಯ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಬೇಕಿತ್ತು. ಆಸ್ತಿ ವಿವರ ಸಲ್ಲಿಸದ ಎಲ್ಲಾ ಜನಪ್ರತಿನಿಧಿಗಳಿಗೆ ಸೆಪ್ಟೆಂಬರ್ 1ರಂದು […]

ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣ ಒದಗಿಸ್ತೇವೆ: ಸಿದ್ದರಾಮಯ್ಯ

ಬೆಂಗಳೂರು: ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಘೋಷಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ನೂತನ 262 ಅಂಬುಲೆನ್ಸ್‍ಗಳ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಯಾರೂ ಚಿಕಿತ್ಸೆ ಸಿಗದೇ ಸಾಯಬಾರದು. ಅಪಘಾತ ವೇಳೆ, ಹೆರಿಗೆ ವೇಳೆ ಚಿಕಿತ್ಸೆ, ಹೃದಯಾಘಾತ ಹೀಗೆ ಆದಾಗ ಚಿಕಿತ್ಸೆ ಸಿಗದೇ ಸಾಯಬಾರದು. ಅದಕ್ಕಾಗಿಯೇ 2008 ರಲ್ಲಿ ತುರ್ತು ಆರೋಗ್ಯಸೇವೆ ತರಲಾಯ್ತು. 236 ತಾಲೂಕುಗಳಿದ್ದು, ತಲಾ ನಾಲ್ಕರಂತೆ ಕನಿಷ್ಟ 840 ಅಂಬುಲೆನ್ಸ್ ಇರಬೇಕು. […]

108 ಅಂಬುಲೆನ್ಸ್‌ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ

ಬೆಂಗಳೂರು: 108 ಅಂಬುಲೆನ್ಸ್‌ ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತದೆ. 108 ಅಂಬುಲೆನ್ಸ್‌ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಬಳಿ ನಡೆದ ಕಾರ್ಯಕ್ರಮದಲ್ಲಿ ನೂತನ 262 ಅಂಬುಲೆನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.  ಈ ವೇಳೆ 108 ಅಂಬುಲೆನ್ಸ್‌ ಕೆಲ ಚಾಲಕರ ವಿರುದ್ಧ ಡಿಕೆಶಿ ಅಸಮಾಧಾನ ಹೊರಹಾಕಿದರು. ಕನಕಪುರದಲ್ಲಿ ಮೆಡಿಕಲ್ […]

ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ

ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರಂತೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎರಡು ಆಪರೇಷನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. […]