July 30, 2026

68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್‌ ಶಾಕ್‌ ಕೊಟ್ಟ ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ವಿದ್ಯುತ್‌ ಪಡೆದಿದ್ದಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ. ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 71 ಯೂನಿಟ್‌ ವಿದ್ಯುತ್‌ಗೆ 3 ಪಟ್ಟು ದಂಡ ವಿಧಿಸಿದ್ದಾರೆ. ಒಟ್ಟು 2,526 ರೂಪಾಯಿ ದಂಡ ಹಾಕಬೇಕಿತ್ತು. ಆದರೆ ನನ್ನ ಮನೆಗೆ ತೆಗೆದುಕೊಂಡಿರುವ 33 kV ವಿದ್ಯುತ್‌ ಬಳಕೆ ಸೇರಿ 68,526 ರೂ. ದಂಡ ವಿಧಿಸಿದ್ದಾರೆ. ಒಬ್ಬ ಮಾಜಿ ಸಿಎಂಗೆ ಹೀಗೆ ಆದರೆ ಸಾಮಾನ್ಯ […]

ಮಹಿಳೆಯಿಂದ ಬ್ಲ್ಯಾಕ್‌ಮೇಲ್ – ಎಂಪಿ ದೇವೇಂದ್ರಪ್ಪ ಪುತ್ರನಿಂದ ದೂರು, ಎಫ್‌ಐಆರ್ ದಾಖಲು

ಮೈಸೂರು: ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗ ರಂಗನಾಥ್ ಮಹಿಳೆಯ ವಿರುದ್ಧ ಬ್ಲ್ಯಾಕ್‌ಮೇಲ್ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೈಸೂರಿನ (Mysuru) ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಜೊತೆಗಿದ್ದ ಫೋಟೋ ಹಾಗೂ ಮಾತನಾಡಿರುವ ಆಡಿಯೋ ಇಟ್ಟುಕೊಂಡು ಮಹಿಳೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ರಂಗನಾಥ್ ಪತ್ನಿಗೆ ಫೋಟೋ ಮತ್ತು ಆಡಿಯೋ ಕಳುಹಿಸುವ ಬೆದರಿಕೆ ಹಾಕಿದ್ದು, 15 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.  ಮಹಿಳೆ ಹಾಗೂ ಶ್ರೀನಿವಾಸ್ ಎಂಬವರ […]

ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡ್ತೀನಿ

ಬೆಂಗಳೂರು: ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸೋಮಣ್ಣ ಕಾಂಗ್ರೆಸ್‌ಗೆ ಬರುವುದಕ್ಕೆ ನಮ್ಮ ವಿರೋಧ ಏನು ಇಲ್ಲ. ಸೋಮಣ್ಣ ಬಂದರೆ ಸ್ವಾಗತ ಮಾಡುತ್ತೇನೆ. ಆದರೆ ಏನ್ ಬೆಳವಣಿಗೆ ಆಗುತ್ತಿದೆ ನಮಗೆ ಗೊತ್ತಿಲ್ಲ ಎಂದು ತಿಳಿಸಿದರು.  ಸೋಮಣ್ಣ ಈಗ ಬಿಜೆಪಿಯಲ್ಲಿ ಇದ್ದು, ಪ್ರಭಾವಿ ಮುಖಂಡರು ಆಗಿದ್ದಾರೆ. ನಾನು ಈಗ ಅದರ ಬಗ್ಗೆ ಪ್ರತಿಕ್ರಿಯೆ ಮಾಡುವುದು ಸರಿಯಲ್ಲ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದರು. ಎಲ್ಲಾ ನಾಯಕರಿಗೂ ರಾಜಕೀಯ ಕ್ಷೇತ್ರದಲ್ಲಿ ಅವರಿಗೇ ಅದಂತಹ […]

ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುತ್ತೇವೆ ಅಂತ ಅವತ್ತು ಕುಮಾರಸ್ವಾಮಿ ಅವರು ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು. ಆದರೆ ಕುಮಾರಸ್ವಾಮಿ ಅವರು ಫೋನ್‌ನಲ್ಲಿ ಮಾತನಾಡುವಾಗ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುವ ವಿಚಾರ ಪ್ರಸ್ತಾಪ ಮಾಡಲೇ ಇಲ್ಲ. ಹಾಗಾಗಿ ನಾವು ಬರಲಿಲ್ಲ ಎಂದು ಶಾಸಕ ಎಸ್‌ಟಿ ಸೋಮಶೇಖರ್  ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿ ಇದ್ದಾಗ ನಮಗೆ ಕರೆ ಬಂದಿದ್ದು ಹೌದು. ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಯಿಂದ ಕರೆ ಬಂತು. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ […]

ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಬೀರಿದೆ 

ಹುಬ್ಬಳ್ಳಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಆದ್ದರಿಂದಲೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿ ರಿಪೇರಿ ಮಾಡಲಾರದಷ್ಟೂ ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು, ವೀಕ್ಷಕರು ಸಹ ಬಂದಿರಲಿಲ್ಲ ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ. […]

ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ತೆರಿಗೆ ವಂಚನೆ ಹಿನ್ನೆಲೆ ಬೆಂಗಳೂರಿನ ಫುಡ್ ಇಂಡಸ್ಟ್ರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಹಾಗೂ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ಐಟಿ ಕಣ್ಣಿಟ್ಟಿದೆ. ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ […]

ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಮಗ ಯತೀಂದ್ರ ಸಿದ್ದರಾಮಯ್ಯ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆ ಜೊತೆ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಬರೆದಿರುವ ಹೆಚ್‌ಡಿ ಕುಮಾರಸ್ವಾಮಿ, ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ […]

ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

ಬೆಂಗಳೂರು: ಪುತ್ರ ಯತೀಂದ್ರ ತಂದೆ ಸಿದ್ದರಾಮಯ್ಯನವರ ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್‌ ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ. ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ. ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ.   […]

ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

ಮುಂಬೈ: ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) 50ನೇ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನ ನುಚ್ಚುನೂರು ಮಾಡಿದ್ದಾರೆ. 2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ವಿರುದ್ಧ […]

ಬಿಜೆಪಿಯಲ್ಲಿ ಗೆದ್ದಿದ್ದೇನೆ, ಹಾಗಂತ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ? 

ರಾಮನಗರ: ಹಿಂದೆ ಮೈಸೂರು ಉಸ್ತುವಾರಿ ಸಚಿವನಾಗಿದ್ದ ವೇಳೆ ಕೇವಲ ಮೂರು ಕ್ಷೇತ್ರದಲ್ಲಷ್ಟೇ ಬಿಜೆಪಿ ಇತ್ತು. ಹೀಗಿದ್ದರೂ, ಉಳಿದ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೆ. ಅದೇ ರೀತಿ ಈಗಲೂ ನಡೆಯುತ್ತಿದೆ. ಬಿಜೆಪಿಯಲ್ಲಿ ನಾನು ಗೆದ್ದಿದ್ದೇನೆ. ಹಾಗಂತ ಕಾಂಗ್ರೆಸ್  ಸರ್ಕಾರದ ಕಾರ್ಯಕ್ರಮ ಮಾಡಬಾರದಾ ಎಂದು ಶಾಸಕ ಎಸ್‌ಟಿ ಸೋಮಶೇಖರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು ವಿಚಾರವಾಗಿ ಕುಂಬಳಗೋಡು ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಪ್ಲ್ಯಾನ್ ಆಗಿತ್ತು. ಹೀಗಾಗಿ ವಿಜಯೇಂದ್ರ […]