July 30, 2026

ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಒಗ್ಗಟ್ಟಿನಿಂದ ಕೆಲಸ ಮಾಡೋಣ: ವಿಜಯೇಂದ್ರ

ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಕರ್ನಾಟಕ ಬಿಜೆಪಿಯ 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್‌ ಕುಮಾರ್‌ ಕಟೀಲ್‌ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ […]

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಆದ್ರೆ, ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ. ಹೌದು.. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರ ಗೈರು ಎದ್ದು […]

ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ MBBS ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಎಂದು ಬೇಸರಗೊಂಡು ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮಂಗಳೂರಿನ ಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದಿಟ್ಟಿದ್ದಳು. ನಂತರ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಡೆತ್‌ನೋಟ್‌ನಲ್ಲೇನಿತ್ತು?ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಣ್ತಾ ಇಲ್ಲ. ಎಂಬಿಬಿಎಸ್ ಮುಗಿಸಬೇಕು ಅಂತಾ ತುಂಬಾ […]

ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ದೇವೇಗೌಡರು ತುಂಬಾ ಖುಷಿ ಪಟ್ಟರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಸೇರಿಕೊಂಡು ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಿಲು ಸೂಚನೆ ನೀಡಿದ್ದಾರೆ. ಜೆಡಿಎಸ್-ಬಿಜೆಪಿ ಎರಡೂ ಒಟ್ಟಿಗೆ ಕೆಲಸ ಮಾಡಬೇಕು. […]

ನಿನ್ನ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬೋಣ – ಬೊಮ್ಮಾಯಿ ಆಶೀರ್ವಾದ ಪಡೆದ ವಿಜಯೇಂದ್ರ

ಬೆಂಗಳೂರು: ಶಾಸಕ ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು […]

ಫೋಟೋ ಶೂಟ್ ವೇಳೆ ಕಿರಿಕ್ – ಯುವಕನ ಇರಿದು ಕೊಂದ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಫೋಟೋ ಶೂಟ್ ವೇಳೆ ಕಿಡಿಗೇಡಿಗಳು ಯುವಕನೊರ್ವನನ್ನ ಚಾಕು ಹಾಗೂ ಕೀ ಚೈನ್‍ನಿಂದ ಇರಿದು ಕೊಂದ ಘಟನೆ ದೊಡ್ಡಬಳ್ಳಾಪುರದ ರಾಮೇಶ್ವರ ಸಮೀಪದ ಡಾಬಾ ಒಂದರ ಬಳಿ ನಡೆದಿದೆ. ಕಚೇರಿಪಾಳ್ಯದ ನಿವಾಸಿ ಸೂರ್ಯ (22) ಹತ್ಯೆಗೀಡಾದ ದುರ್ದೈವಿ. ಹತ್ಯೆಗೀಡಾದ ಯುವಕ ಹಾಗೂ ಆತನ ಸ್ನೇಹಿತರು ಹಬ್ಬದ ಸಲುವಾಗಿ ಸಿಂಗರಿಸಿದ್ದ ಡಾಬಾದ ಮುಂದೆ ಫೋಟೋ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಬಂದ ಯುವಕರ ತಂಡ ತಮ್ಮ ಫೊಟೋ ತೆಗೆಯುವಂತೆ ಹೇಳಿದೆ. ಬಳಿಕ ಅವರಿಂದ ಕ್ಯಾಮೆರಾ ಕಿತ್ತುಕೊಂಡು ಗಲಾಟೆ ಮಾಡಿದ್ದಾರೆ. ಈ ವೇಳೆ ಚಾಕು […]

ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಗೃಹ ಇಲಾಖೆ ಸೂಚನೆ ಮೇರೆಗೆ ತನಿಖೆ ಸಿಐಡಿಗೆ ಹಸ್ತಾಂತರ‌‌

ಯಾದಗಿರಿ: ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣದ ತನಿಖೆಯನ್ನು ಶನಿವಾರ ಸಿಐಡಿ (CID) ಗೆ ಹಸ್ತಾಂತರ ಮಾಡಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ. ಕಿಂಗ್​ಪಿನ್​ ಆರ್​.ಡಿ ಪಾಟೀಲ್ ಬಂಧನ KEA ಪರೀಕ್ಷೆ ಅಕ್ರಮ ಆರೋಪಿ ಕಿಂಗ್​ಪಿನ್​ ಆರ್​.ಡಿ ಪಾಟೀಲ್​ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಲಾಡ್ಜ್ ನಲ್ಲಿದ್ದ ರುದ್ರಗೌಡನನ್ನು ಪತ್ತೆ […]

ದೀಪಾವಳಿ ಹೊತ್ತಲ್ಲಿ ಖಾಸಗಿ ಬಸ್ ಮಾಲೀಕರಿಗೆ ಶಾಕ್ – ಆರ್‌ಟಿಒ ಅಧಿಕಾರಿಗಳಿಂದ ದಾಳಿ

ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಇಂದಿನಿಂದ ಸಾಲು ಸಾಲು ರಜೆಗಳನ್ನು ನೀಡಲಾಗಿದೆ. ಜನ ಊರುಗಳಿಗೆ ತೆರಳಲು ಉತ್ಸುಕರಾಗಿದ್ದು, ಚೆನ್ನಾಗಿ ದುಡ್ಡು ಮಾಡಬಹುದು ಎಂದು ನಿರೀಕ್ಷೆಯಲ್ಲಿದ್ದ ಖಾಸಗಿ ಬಸ್ ಮಾಲೀಕರಿಗೆ ಚಿಕ್ಕಬಳ್ಳಾಪುರದಲ್ಲಿ ಶಾಕ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಕಡೆ ಆರ್‌ಟಿಒ ಅಧಿಕಾರಿಗಳ ವಿಶೇಷ ತಂಡ ಖಾಸಗಿ ಬಸ್‌ಗಳ ಮೇಲೆ ದಾಳಿ ಆರಂಭ ಮಾಡಿದ್ದು, ಆರ್‌ಟಿಒ ಅಧಿಕಾರಿಗಳ ದಾಳಿಗೆ ಹೆದರಿರುವ ಖಾಸಗಿ ಬಸ್‌ಗಳ ಮಾಲೀಕರು ಬಸ್‌ಗಳ ಸಂಚಾರವನ್ನು ನಿಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಖಾಸಗಿ ಬಸ್ ನಿಲ್ದಾಣದಲ್ಲೂ ಆರ್‌ಟಿಒ […]

ಬೂತ್ ಗೆದ್ದರೆ, ದೇಶ ಗೆಲ್ತೇವೆ: ಬಿವೈ ವಿಜಯೇಂದ್ರ

ಬೆಂಗಳೂರು: ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ […]

ಮೋದಿ, ಅಮಿತ್ ಶಾರಿಂದ ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ: ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ನಡ್ಡಾರವರು ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಳ್ಳುವುದನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಕೂತು ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಈ ಬಗ್ಗೆ ಬೇಕಾದರೆ ರಾಷ್ಟ್ರ ನಾಯಕರನ್ನು ವಿಚಾರಿಸಿಕೊಳ್ಳಬಹುದು ಎಂದಿದ್ದಾರೆ.  ರಾಜ್ಯಾದ್ಯಂತ […]