July 30, 2026

ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ: ಅಸಮಾಧಾನ ಹೊರಹಾಕಿದ ಸಿಟಿ ರವಿ

ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಮಾಜಿ ಸಚಿವ ಸಿಟಿ ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಮಧ್ಯಪ್ರದೇಶದಿಂದ ಆಗಮಿಸಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬದಲಾಗದೇ ಇರೋದು ಕಾರ್ಯಕರ್ತ ಅನ್ನೋದು. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ, ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ, ಯಶಸ್ವಿಯಾಗಲಿ ಎಂದು ತಿಳಿಸಿದರು.  ನೂತನ ಅಧ್ಯಕ್ಷನ ಆಯ್ಕೆ […]

ಸಾಮಾನ್ಯ ಕಾರ್ಯಕರ್ತನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮರುದಿನವೇ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಹಿರಿಯ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿ ಸಂಭ್ರಮಾಚರಣೆ ಮಾಡಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ವಿಜಯೇಂದ್ರ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿದರು. ಅಲ್ಲದೇ ಕಾರ್ಯಕರ್ತರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಮೊದಲ ಆದ್ಯತೆ ಕಾರ್ಯಕರ್ತರು ಎಂಬ ಸಂದೇಶ ರವಾನೆ ಮಾಡಿದ್ದಾರೆ. ಶಶಿಧರ್‌ ಮನೆಗೆ ಭೇಟಿ ಕೊಟ್ಟ ವಿಜಯೇಂದ್ರ ಅವರು ಕಾರ್ಯಕರ್ತನಿಗೆ ಸಿಹಿ ತಿನ್ನಿಸಿದರು. ನಂತರ ಪಕ್ಷದ ಶಾಲು ಹಾಕಿ ಕಾರ್ಯಕರ್ತನನ್ನು […]

ಗ್ಯಾರಂಟಿ ಎಂಬ ಬಿಸ್ಕೆಟ್ ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿವೈ ರಾಘವೇಂದ್ರ

ಕಾರವಾರ: ಸಾರ್ವಜನಿಕರಿಗೆ ಗ್ಯಾರಂಟಿ ಎಂಬ ಬಿಸ್ಕೆಟ್ ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಜನರಿಗೆ ಅನ್ನಿಸಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ತಪ್ಪು ಮಾಡಿದ್ದೇವೆ. ಅನೇಕ ವರ್ಷಗಳ ನಂತರ ರಾಜ್ಯಕ್ಕೆ ಬಹಳ ಕೆಟ್ಟ ಪರಿಸ್ಥಿತಿ ಬಂದಿದೆ. ಮದ್ಯದ ಬೆಲೆ ಏರಿಸಿ ಆ ಹಣದಲ್ಲೇ ಗೃಹ ಲಕ್ಷ್ಮಿ ಮೂಲಕ ಮಹಿಳೆಯರಿಗೆ ಎರಡು ಸಾವಿರ ನೀಡುತ್ತಿದ್ದಾರೆ ಎಂದರು. ಸಮರ್ಥ ಅಧಿಕಾರ ನಡೆಸುವಲ್ಲಿ ರಾಜ್ಯ […]

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ – ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌, ಪಿಎಸ್‌ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ […]

ಮಾತ್ರೆ, ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ – ಐವರ ಬಂಧನ

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ (Gold) ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ (Airport) ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು (Bengaluru) ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ.  ಆರೋಪಿಗಳು ಮಾತ್ರೆಗಳಲ್ಲಿ, ಒಳ ಉಡುಪು ಹಾಗೂ ಮಹಿಳೆಯರ ಪರ್ಸ್‍ಗಳಲ್ಲಿ […]

ದಯವಿಟ್ಟು ರಾಜ್ಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಹೈಕಮಾಂಡ್‌ ನಡೆಗೆ ಸದಾನಂದಗೌಡ ಬೇಸರ

ಬೆಂಗಳೂರು: ರಾಜ್ಯ ನಾಯಕರ ವಿಚಾರವಾಗಿ ಬಿಜೆಪಿ ಹೈಕಮಾಂಡ್‌ ಅನುಸರಿಸುತ್ತಿರುವ ಧೋರಣೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕರ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಕೇಂದ್ರದ ನಾಯಕರಿಗೆ ಮನವಿ ಮಾಡ್ತೀನಿ. ಕರ್ನಾಟಕದ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ. ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡಿರಬಹುದು. ಆದರೆ ಲೋಕಸಭಾ ಚುನಾವಣೆಗೆ ಡಬಲ್ ಕೊಡ್ತೀವಿ. ದಯವಿಟ್ಟು ವಿಶ್ವಾಸ ತೆಗೆದುಕೊಳ್ಳಿ. ರಾಜ್ಯಕ್ಕೆ ಬರದೆ, ರಾಜ್ಯದ ವಿಪಕ್ಷ ನಾಯಕರ ಆಯ್ಕೆ ಮಾಡದೆ ಬಿಡೋದು ಸರಿಯಲ್ಲ ಎಂದು ಹೈಕಮಾಂಡ್‌ ವಿರುದ್ಧ […]

ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!

ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯದ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕಿರಾತಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವೀಡಿಯೋ ಮಾಡಿದ್ದಾರೆ. ವೀಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪುನೀತ್, ಮಂಜುನಾಥ್ ಹಾಗೂ ಸಿದ್ದರಾಜು ಬಂಧಿತ ಆರೋಪಿಗಳು. ಮೂವರು ಕೂಡಾ ಮದ್ದೂರು […]

ಆಸ್ಟ್ರೇಲಿಯಾ ಮುಡಿಗೆ 7 ವಿಶ್ವಕಪ್ ಏರಿಸಿದ್ದ ನಾಯಕಿ ಮೆಗ್ ಲ್ಯಾನಿಂಗ್ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ

ಕ್ಯಾನ್ಬೆರಾ: ಆಸ್ಟ್ರೇಲಿಯಾಕ್ಕೆ ಬರೋಬ್ಬರಿ 7 ವಿಶ್ವಕಪ್ ಟ್ರೋಫಿಗಳನ್ನು ಗೆದ್ದುಕೊಟ್ಟ ಮಹಿಳೆಯರ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಕ್ರಿಕೆಟ್ ಜೀವನದಲ್ಲಿ ದಾಖಲೆಯ 241 ಪಂದ್ಯಗಳನ್ನಾಡಿರುವ ಅವರು, ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ಒಟ್ಟು ಆರು ಟೆಸ್ಟ್ ಪಂದ್ಯಗಳು, 103 ಏಕದಿನ ಪಂದ್ಯಗಳು ಮತ್ತು 132 ಟಿ20 ಪಂದ್ಯಗಳನ್ನು ಆಡಿರುವ ಲ್ಯಾನಿಂಗ್, ಸದ್ಯ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದೇಶದ ಒಳಗೆ ಕ್ರಿಕೆಟ್ ಆಡುವುದನ್ನು ಮುಂದುವರಿಸಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಭಾರತದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್ ಟೂರ್ನಿಯಲ್ಲೂ […]

ನನ್ನ ಹೆಸರಲ್ಲಿ ಪೂಜೆ ಮಾಡಿಸ್ತಿರೋ ಹೆಣ್ಣುಮಕ್ಕಳಿಗೆ ಒಳ್ಳೆಯದಾಗಲಿ: ಸಿದ್ದರಾಮಯ್ಯ

ಬೆಂಗಳೂರು: ಶಕ್ತಿ ಯೋಜನೆ ಅಡಿ 88 ಕೋಟಿ ಹೆಣ್ಣುಮಕ್ಕಳು ಓಡಾಡಿದ್ದಾರೆ. ಶಕ್ತಿ ಯೋಜನೆ ಮಾಡಿದ ಮೇಲೆ ಧರ್ಮಸ್ಥಳಕ್ಕೆ ಬರೋರು ಜಾಸ್ತಿ ಆಗಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ನನ್ನ ಹೆಸರಲ್ಲಿ ಪೂಜೆ ಮಾಡಿಸ್ತಾರೆ ಅಂತ ಹೇಳಿದ್ದಾರೆ. ನನ್ನ ಹೆಸರಲ್ಲಿ ಪೂಜೆ ಮಾಡಿಸೋ ಹೆಣ್ಣು ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಸಿಎಂ ಸಿದ್ದರಾಮಯ್ಯ ನುಡಿದಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿ, ಕಟ್ಟಡ ಮತ್ತು ಇತರ […]

ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ಹೇಳಿತ್ತು: ಸದಾನಂದಗೌಡ ನಿವೃತ್ತಿ ಘೋಷಣೆಗೆ ಬಿಎಸ್‌ವೈ ಪ್ರತಿಕ್ರಿಯೆ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು ಎಂದು ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಮಾತನಾಡಿದ ಅವರು, ಡಿವಿಎಸ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇರ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ […]