July 30, 2026

ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಡೆಡ್‍ಲೈನ್

ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ. ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ […]

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು. ಕಿರಣ್ ನಡವಳಿಕೆಯಿಂದ […]

ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಕರೆದ ಸಿಎಂ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸತತ 4ನೇ ದಿನ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದೆ. CPCB ಮಾಹಿತಿ ಪ್ರಕಾರ ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ವಾಯು ಗುಣಮಟ್ಟ ಸೂಚ್ಯಂಕವು (AQI) 437 ರಷ್ಟು ದಾಖಲಾಗಿದೆ. ಆರೋಗ್ಯದ ದೃಷ್ಟಿಯಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 10ರ ವರೆಗೆ ಮುಚ್ಚುವಂತೆ ದೆಹಲಿ ಸರ್ಕಾರ ಆದೇಶಿಸಿದೆ. ಈ ನಡುವೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇಂದೇ ಉನ್ನತ ಮಟ್ಟದ ಸಭೆ ಕರೆದ್ದಾರೆ. ಸಭೆಯಲ್ಲಿ ದೆಹಲಿ ಪರಿಸರ ಸಚಿವ ಗೋಪಾಲ್ […]

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿರುವ ಪರೀಕ್ಷೆ ವ್ಯವಸ್ಥೆ ಮತ್ತು ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಜೆಡಿಎಸ್ ಇಂತಹ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದೆ. ಪೋಸ್ಟ್‌ನಲ್ಲೇನಿದೆ?ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ? ಕಲಬುರಗಿಯಲ್ಲಿ […]

ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರು

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧವಾದ, ಬಾಗಿಲು ಇಲ್ಲದ ದೇವಾಲಯವೆಂದೇ ಪ್ರಸಿದ್ಧಿ ಪಡೆದಿರುವ ತೋಪನಯ್ಯ ಸ್ವಾಮಿ ದೇವಾಲಯದಲ್ಲಿ ಭಾನುವಾರ ರಾತ್ರಿ ಕಳ್ಳತನ ನಡೆದಿದೆ. ಭಕ್ತರಹಳ್ಳಿ ಸಮೀಪದ ತೋಪನಯ್ಯ ಸ್ವಾಮಿ ದೇವಾಲಯ ಬಾಗಿಲು ಇಲ್ಲದ ದೇವಾಲಯವಾಗಿದ್ದು, ಪುರಾತನ ದೇವಾಲಯವಾಗಿದೆ. ಭಾನುವಾರ ರಾತ್ರಿ ಈ ದೇವಾಲಯಕ್ಕೆ ನುಗ್ಗಿರುವ ಕಳ್ಳರು, ಸುಮಾರು 30 ಸಾವಿರ ರೂ. ಹುಂಡಿಯಲ್ಲಿದ್ದ ಕಾಣಿಕೆ ಹಣವನ್ನು ದೋಚಿದ್ದಾರೆ. ಅಲ್ಲದೇ ದೇವಾಲಯಕ್ಕೆ ಅಳವಡಿಸಿದ್ದ 100ಕ್ಕೂ ಹೆಚ್ಚು ಘಂಟೆಗಳನ್ನು ಕದ್ದೊಯ್ದಿದ್ದಾರೆ.  ಇಷ್ಟೆಲ್ಲಾ ಕಳ್ಳತನ ಮಾಡಿದರೂ ಖದೀಮರು ಹುಂಡಿ […]

ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದು ಪೊಲೀಸರಿಗೆ ಶರಣಾದ ಮಗ

ರಾಯಚೂರು: ಗಾಂಜಾ, ಮದ್ಯ ಸೇವಿಸಿ ನಿತ್ಯ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ. ಬಂಡಿ ತಿಮ್ಮಣ್ಣ (55) ಕೊಲೆಯಾದ ವ್ಯಕ್ತಿಯಾದರೆ, ಶೀಲವಂತ ತಂದೆಯನ್ನು ಕೊಲೆ ಮಾಡಿದ ಆರೋಪಿ. ತಂದೆ ಪ್ರತಿ ನಿತ್ಯ ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ ಎಂದು ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.  […]

ಗಣಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌ನಲ್ಲಿ ಸುಳಿವು ಸಿಕ್ಕಿದೆ: ಪರಮೇಶ್ವರ್

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರತಿಮಾ ಕೊಲೆ ಪ್ರಕರಣದಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಅದರ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮಾಡಿದ ಬಳಿಕ ಕೊಲೆಗೆ ಕಾರಣ ಏನು?. ಹಿಂದೆ ಮುಂದೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು. ಈಗಲೇ ಏನು ಹೇಳೋಕೆ ಆಗೋದಿಲ್ಲ. ಘಟನೆ […]

50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

ವಿಜಯಪುರ: ಕಾಂಗ್ರೆಸ್‌ (Congress) ಹೇಳುವುದು ಒಂದು ಮಾಡುವುದು ಇನ್ನೊಂದು, ಈ ಸರ್ಕಾರ 5 ವರ್ಷ ಉಳಿಯಲ್ಲ. ಈಗಾಗಲೇ 50 ಕಾಂಗ್ರೆಸ್‌ ಶಾಸಕರು ಬಿಜೆಪಿ ಹೈಕಮಾಂಡ್‌ ಸಂಪರ್ಕದಲ್ಲಿದ್ದು, ಪತನ ಆಗೋದು ಗ್ಯಾರಂಟಿ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ ಹೊಸ ಬಾಂಬ್‌ ಸಿಡಿಸಿದ್ದಾರೆ. ವಿಜಯಪುರದ ಜುಮನಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು‌, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎರಡು ಬಣವಿದ್ದರೂ, ಒಳಗೆ ನಾಲ್ಕು ಬಣ ಸೃಷ್ಟಿಯಾಗಿದೆ. 4 ಡಿಸಿಎಂ ಹುದ್ದೆ ಕೇಳುತ್ತಿದ್ದಾರೆ. ಸಿಎಂ ವಿಚಾರದಲ್ಲೂ ಗೊಂದಲ […]

ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ನಾಯಕರಿಗೆ ಡಿಕೆ ಶಿವಕುಮಾರ್​ ಖಡಕ್​ ಎಚ್ಚರಿಕೆ

ಬೆಂಗಳೂರು ಸಚಿವರು, ಕಾಂಗ್ರೆಸ್ ಶಾಸಕರು ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳೋದು ಬೇಡ. ಹಾಗೆಯೇ ಪಕ್ಷದ ಭವಿಷ್ಯ ಹಾಳು ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಕಾವೇರಿ ನಿವಾಸದ ಬಳಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬಹಿರಂಗ ಹೇಳಿಕೆ ನೀಡದಂತೆ ಎಲ್ಲರಿಗೂ ವಾರ್ನ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಉಸ್ತುವಾರಿ ಸಚಿವರಿಗೆ ಅವರವರ ಜವಾಬ್ದಾರಿಯನ್ನು ನೀಡಿದ್ದೇವೆ. ಲೋಕಸಭೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಲು ಸೂಚಿಸಿದ್ದೇವೆ. […]

FDA ಪರೀಕ್ಷೆಯಲ್ಲಿ ಅಕ್ರಮ- 5 ದಿನವಾದ್ರೂ ಪ್ರಮುಖ ಆರೋಪಿಗಳ ಸುಳಿವಿಲ್ಲ

ಯಾದಗಿರಿ: ರಾಜ್ಯದಲ್ಲಿ FDA ಪರೀಕ್ಷೆಯ ಅಕ್ರಮ ನಡೆದು ಐದು ದಿನಗಳು ಕಳೆದಿದ್ರೂ, ಪ್ರಕರಣದ ಪ್ರಮುಖ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಹೀಗಾಗಿ ಅಲರ್ಟ್ ಆಗಿರೋ ಪೊಲೀಸರು ಬಂಧಿತ 16 ಆರೋಪಿಗಳನ್ನ ಕಸ್ಟಡಿಗೆ ಪಡೆದಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ಯಾರು? ಪ್ರಶ್ನೆ ಪತ್ರಿಕೆ ಹೇಗ್ ಸಿಕ್ತು ಅನ್ನೋ ವಿಚಾರಗಳನ್ನ ಆರೋಪಿಗಳಿಂದ ಬಾಯಿ ಬಿಡಿಸಲಿದ್ದಾರೆ. ಅಕ್ಟೋಬರ್ 28ರಂದು ರಾಜ್ಯದಲ್ಲಿ ನಡೆದ ಕೆಇಎ ನ ಎಫ್‍ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆಯಲು ಹೋಗಿ ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ 20ಕ್ಕೂ […]