July 30, 2026

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ, ಈಗ 5 ತಿಂಗಳಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ: ಕಟೀಲ್

ವಿಜಯಪುರ: ಈ ಹಿಂದೆ ಸಿದ್ದರಾಮಯ್ಯ CM ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ 5 ತಿಂಗಳಲ್ಲೇ 250ಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಾಗಿಲ್ಲ. ಬ್ರೇಕ್ ಫಾಸ್ಟ್​, ಬೇರೆ ಫಾಸ್ಟ್​ ಎಲ್ಲಾ […]

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಗುಟ್ಟು ಬಿಟ್ಟುಕೊಟ್ಟ ಮಾಜಿ ಸಚಿವ

ಗದಗ: ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಹೀಗಾಗಿ ಯಾರಿಗೆ ನೀಡಬೇಕೆಂದು ಹೈಕಮಾಂಡ್ ಚಿಂತನೆ ನಡೆಸಿದೆ. ಇದರ ಮಧ್ಯೆ ಈ ಹುದ್ದೆಗೆ ಮಾಜಿ ಸಚಿವ ಶ್ರೀರಾಮುಲು ಸಹ ಆಕಾಂಕ್ಷಿಯಾಗಿದ್ದರು. ಅಲ್ಲದೇ ರಾಜ್ಯಾಧ್ಯಕ್ಷರಾಗಲು ತೀವ್ರ ಪೈಪೋಟಿ ನಡೆಸಿದ್ದರು. ಆದ್ರೆ, ಅದು ಸಿಗುವುದು ಸಾಧ್ಯವಿಲ್ಲ ಎನ್ನುವುದು ಅರಿತುಕೊಂಡು ರೇಸ್​ನಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಮಾಧ್ಯಮಗ ಹೇಳಿಕೊಂಡು ಹತಾಶೆ ವ್ಯಕ್ತಪಡಿಸಿದ್ದಾರೆ. ಗದಗನಲ್ಲಿಂದು ಸುದ್ದಿಗಾರದೊಂದಿಗೆ ಮಾತನಾಡಿದ ಶ್ರೀರಾಮುಲು, ನಾನೂ ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ […]

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ 

ಮೈಸೂರು: ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ, ಜೆಡಿಎಸ್ ಮೈತ್ರಿಗೆ ವಿಘ್ನ ಎದುರಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿಯಿಲ್ಲ ಎಂದು ಹೇಳಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ಅವರು ಆಕಾಂಕ್ಷಿಗಳ ಜೊತೆ ಸಭೆ ನಡೆಸಿದರು. ಚುನಾವಣೆ ಸಂಬಂಧ ಆಕಾಂಕ್ಷಿಗಳಿಂದ ಮಾಹಿತಿ ಸಂಗ್ರಹಿಸಿದರು. ಸಭೆಯಲ್ಲಿ ಸಂಸದ ಪ್ರತಾಪಸಿಂಹ, ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ ಸೇರಿ ಹಲವು ಬಿಜೆಪಿ ನಾಯಕರು […]

4 ತಿಂಗಳಿಂದ ಗ್ಯಾಸ್ ಬಿಲ್‌, ಮೊಟ್ಟೆ ಹಣವೂ ಇಲ್ಲ- ಅಂಗನವಾಡಿ ಕಾರ್ಯಕರ್ತೆಯರ ಗೋಳು ಕೇಳೋರಿಲ್ಲ

ಬೆಂಗಳೂರು: ಅಂಗನವಾಡಿಯಲ್ಲಿ ಮಕ್ಕಳಿಗೆ ಗರ್ಭಿಣಿಯರಿಗೆ ಕೊಡುವ ಮೊಟ್ಟೆಗೂ ಕುತ್ತು ಬಂದಿದೆ. ಈ ಹಿಂದೆ ಕಳಪೆ ಮೊಟ್ಟೆ ಸಪ್ಲೈ ಮಾಡಿ ಸುದ್ದಿಯಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗ ಬೆಂಗಳೂರಿನ ಅಂಗನವಾಡಿಗಳಿಗೆ ಮೊಟ್ಟೆ, ಗ್ಯಾಸ್ ಖರೀದಿ ದುಡ್ಡು ಕೊಡದೇ ಸತಾಯಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮಕ್ಕಳ ಗರ್ಭಿಣಿಯರ ಅಪೌಷ್ಠಿಕತೆ ನೀಗಿಸೋಕೆ ಅಂಗನವಾಡಿಗಳಲ್ಲಿ ಮೊಟ್ಟೆ ಕೊಡುತ್ತಾರೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ನೇರವಾಗಿ ಸರ್ಕಾರ ಮೊಟ್ಟೆ ಸಪ್ಲೈ ಮಾಡಲ್ಲ. ಬದಲಾಗಿ ಅಂಗನವಾಡಿ ಕಾರ್ಯಕರ್ತೆಯರು ಖರೀದಿ ಮಾಡುತ್ತಾರೆ. ಸರ್ಕಾರ ಇದರ ದುಡ್ಡನ್ನು ಅಕೌಂಟ್ ಗೆ […]

7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಕಾಮುಕ ಶಿಕ್ಷಕ ಅರೆಸ್ಟ್

ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ […]

ನಟ ಶಿವಣ್ಣಗೆ ಅನಾರೋಗ್ಯ: ಆತಂಕ ಪಡುವ ಅಗತ್ಯವಿಲ್ಲ ಎಂದ ವೈದ್ಯರು

ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಶಿವಣ್ಣ ಪಾಲ್ಗೊಂಡಿದ್ದರು. ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತಾಗಿದ್ದರು ಎನ್ನುವ ಮಾಹಿತಿ ಸಿಕ್ಕಿದೆ. ಶಿವಣ್ಣ ತೀವ್ರ ಸುಸ್ತಾಗುತ್ತಿದ್ದಂತೆಯೇ ಅವರನ್ನು ಕೂಡಲೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರಿಗೆ ನಿನ್ನೆಯೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ತಪಾಸಣೆ ನಂತರ ಆತಂಕ ಪಡುವಂಥದ್ದು ಏನೂ […]

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ

ಶಿವಮೊಗ್ಗ: ವಿಪಕ್ಷ ನಾಯಕನ ಆಯ್ಕೆ ಈಗಾಗಲೇ ವಿಳಂಬ ಆಗಿದೆ. ಎಲ್ಲರೂ ವಿಪಕ್ಷ ನಾಯಕನ ಆಯ್ಕೆ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಆದಷ್ಟು ಬೇಗ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಬಿಜೆಪಿ ವತಿಯಿಂದ ಇಂದಿನಿಂದ ಬರ ಅಧ್ಯಯನ ಪ್ರವಾಸ ಆರಂಭವಾಗಿದೆ ಎಂದು ಹೇಳಿದರು. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವ ಸಮಾರಂಭ ಇರುವ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಹೀಗಾಗಿ […]

ಪ್ರಿಯಾಂಕ್ ಖರ್ಗೆ ನಾಯಕನಲ್ಲ, ನಾನ್ ಸೆನ್ಸ್: ಮಣಿಕಂಠ ರಾಠೋಡ್

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ನಾಯಕನಲ್ಲ, ನಾನ್ ಸೆನ್ಸ್ ಎಂದು ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಚಿತ್ತಾಪೂರದ ಕೋಲಿ ಸಮಾಜದ ಯುವಕ ದೇವಾನಂದ ಆತ್ಮಹತ್ಯೆ ಪ್ರಕರಣದ ಆರೋಪಿ ಬಂಧನಕ್ಕೆ ಆಗ್ರಹಿಸಿ ತಿಂಗಳಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ಕೊಡುವುದು ಒತ್ತಟ್ಟಿಗಿರಲಿ. ಮನವಿ ಪಡೆಯುವ ಸೌಜನ್ಯವೂ ಸಚಿವರಿಗಿಲ್ಲ. ಆರೋಪಿ ಬಂಧನಕ್ಕೆ ರಸ್ತೆ ಮೇಲೆ ಉರುಳಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಕಡೆ ಗಮನ ಹರಿಸದೇ ಪ್ರಿಯಾಂಕ್ ಖರ್ಗೆ ಹೋಗ್ತಾರೆ. ಹೀಗಾಗಿ ಇವರು ನಾಯಕರಲ್ಲ […]

ನಮ್ಮಲ್ಲಿ ಅಸಮಾಧಾನ ಎಲ್ಲಿದೆ : ಡಿಕೆಶಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ನಮ್ಮಲ್ಲಿ ಅಸಮಾಧಾನ ಎಲ್ಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ (BJP) ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಆಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಟೀಕಿಸಿದರು. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ (Lok Sabha Election) ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ. ಈಗಾಗಲೇ […]

ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 324 ಕೋಟಿ ಅನುದಾನ ಬಿಡುಗಡೆ 

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ದ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ ಅಂತ ಆರೋಪ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದೆ. SDRF ಅಡಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ […]