ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ; ಹಮಾಸ್ ಕಮಾಂಡರ್ ಸೇರಿ 60ಕ್ಕೂ ಹೆಚ್ಚು ಮಂದಿ ಬಲಿ
ಟೆಲ್ ಅವೀವ್: ಗಾಜಾಪಟ್ಟಿಯ ಅತಿದೊಡ್ಡ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆಯು ಬುಧವಾರ ಭೀಕರ ದಾಳಿ ನಡೆಸಿದೆ. ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಹಮಾಸ್ ಉಗ್ರರ ಟಾಪ್ ಕಮಾಂಡರ್ ಇಬ್ರಾಹಿಂ ಬ್ಯಾರಿ ಹತ್ಯೆಗೀಡಾಗಿದೆ. ಇಸ್ರೇಲ್ ಮೇಲೆ ನಡೆದ ಅಕ್ಟೋಬರ್ 7ರ ಹಮಾಸ್ ದಾಳಿಯಲ್ಲಿ ಈತ ಪ್ರಮುಖ ಮಾರ್ಗದರ್ಶಕನೂ ಆಗಿದ್ದ ಎನ್ನಲಾಗಿದೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಬ್ಯಾರಿಯನ್ನು ತೊಡೆದುಹಾಕಲು ನಿರಾಶ್ರಿತರ ಶಿಬಿರವನ್ನು ಧ್ವಂಸ ಮಾಡಿರುವುದಾಗಿ ಇಸ್ರೇಲ್‌ನ ರಕ್ಷಣಾ ಪಡೆಗಳು […]












































































































































































































































































































































































































































































































































































































































































































































































































































































































































































































































































































































