July 30, 2026

ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ

ಬೆಳಗಾವಿ,: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್​ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡೋದು ಮಾಡ್ತಾನೆ ಹೌದು, ಡಿಕೆ ಶಿವಕುಮಾರ್​ ಬಹಳ ವೀಕ್ ಮನುಷ್ಯ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ […]

ಗುತ್ತಿಗದಾರರ ಸಂಘದ ಅಧ್ಯಕ್ಷನ ಮೇಲೆ ಸಚಿವ ಶಿವರಾಜ್​ ತಂಗಡಗಿ ಸಹೋದರನ ದರ್ಪ

ಕೊಪ್ಪಳ: ಸಚಿವ ಶಿವರಾಜ್​ ತಂಗಡಗಿ ಸಹೋದರ ನಾಗರಾಜ್ ತಂಗಡಗಿ ಎಂಬಾತ ಎಸ್​ಸಿ/ಎಸ್​ಟಿ ಗುತ್ತಿಗದಾರರ ಸಂಘದ ಅಧ್ಯಕ್ಷ ಗಣೇಶ್ ಹೊರತಟ್ನಾಳ್ ಮೇಲೆ ದರ್ಪ ತೋರಿದ ಆರೋಪ ಕೇಳೀಬಂದಿದೆ. ಹೌದು, ಸಂಬಂಧ ಇಲ್ಲದ ವಿಷಯಕ್ಕೆ ತಲೆ ಹಾಕಿದ ನಾಗರಾಜ್​ ತಂಗಡಗಿಗೆ ಕೊಪ್ಪಳ( ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಕಚೇರಿಯಲ್ಲಿ ಗಣೇಶ್ ಹೊರತಟ್ನಾಳ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ದೂರವಾಣಿಯಲ್ಲಿ ಸಮಾಧಾನ ಪಡಿಸಿದ ಶಿವರಾಜ್​ ತಂಗಡಗಿ ಇನ್ನು ಗಲಾಟೆ ಜೋರಾಗುತ್ತಿದ್ದಂತೆ ನಾಗರಾಜ್ ತಂಗಡಗಿ ಇಇ ಕಚೇರಿಯಿಂದ ಕಾಲ್ಕಿತ್ತಿದ್ದಾರೆ. ನಂತರ ಸಚಿವರ ಕಚೇರಿಯಲ್ಲಿ […]

ಮುಖ್ಯಮಂತ್ರಿ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದರಾಮಯ್ಯನೇ ಸಿಎಂ

ದಾವಣಗೆರೆ: ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದರಾಮಯ್ಯನೇ ಸಿಎಂ ಎಂದು ದಾವಣಗೆರೆಯಲ್ಲಿ ವಸತಿ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾರೇ ಏನು ಅಂದರೂ ಸಿದ್ದರಾಮಯ್ಯ ಪರ. ಸಿಎಂ ಸ್ಥಾನದ ಅವಧಿ ಬಗ್ಗೆ ನಿರ್ಧಾರ ಮಾಡೋದು ಹೈಕಮಾಂಡ್. ಹೈಕಮಾಂಡ್ ಹೇಳಿದ್ರೆ ಸಿದ್ದುನೇ 5 ವರ್ಷ ಸಿಎಂ ಆಗಿರುತ್ತಾರೆ ಎಂದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ ಆಪರೇಷನ್ ಕಮಲ ಅಸಾಧ್ಯ. ಮಾಜಿ […]

ಸಿದ್ದರಾಮಯ್ಯರನ್ನ ಅಲುಗಾಡಿಸಲು ಸಾಧ್ಯವಿಲ್ಲ

ಹಾಸನ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಬಂಡೆಯಂತಹ ಸರ್ಕಾರವಿದ್ದು, ಬಂಡೆ ರೂಪದಲ್ಲಿಯೇ ಅವರು ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಪ್ರಶ್ನೆ ಪ್ರಸ್ತುತ ಇಲ್ಲಾ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗೀಜಿಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿಎಂ ಇದ್ದಾರೆ. ನಮ್ಮದು ನೂರಾರು ವರ್ಷಗಳ ಇತಿಹಾಸವಿರುವ ಪಕ್ಷ, ಹೈಕಮಾಂಡ್ (Congress High Command) ಭದ್ರವಾಗಿದೆ. ಆದ್ದರಿಂದ ಯಾರು ಮುಖ್ಯಮಂತ್ರಿ ಆಗಬೇಕು, ಬಿಡಬೇಕು ಅನ್ನೋದು ಹೈಕಮಾಂಡ್‌ ತೀರ್ಮಾನ. ಸಿದ್ದರಾಮಯ್ಯ ಅವರೇ ಸಿಎಂ ಅಂತ ಮುಕ್ತವಾಗಿ […]

ಮಹಾರಾಷ್ಟ್ರದ ಬಸ್ ಕರ್ನಾಟಕಕ್ಕೂ ಬರುತ್ತೆ: ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ವಿಜಯಪುರ: ಕರ್ನಾಟಕದ ಬಸ್‌ಗೆ ಬೆಂಕಿ ಹಾಕೋದಕ್ಕೂ, ಮಹಾರಾಷ್ಟ್ರದ ಹೋರಾಟಕ್ಕೂ ಸಂಬಂಧ ಇಲ್ಲ. ನಮ್ಮ ಬಸ್‌ಗೆ ಬೆಂಕಿ ಹಾಕಿದ ಕೃತ್ಯ ಸರಿ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮರಾಠ ಪುಂಡರು ಬೆಂಕಿ ಹಚ್ಚಿದ ಪ್ರಕರಣಕ್ಕೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ಸರ್ಕಾರ ಇದನ್ನು ಖಂಡಿಸಬೇಕು. ಬೆಂಕಿ ಇಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದ ಬಸ್‌ಗಳು ನಮ್ಮ ಕರ್ನಾಟಕಕ್ಕೂ ಬರುತ್ತವೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದರು. ಮಹಾರಾಷ್ಟ್ರದ ಬಸ್‌ಗಳು ತಮಿಳುನಾಡು, […]

ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ- ಆಪ್ತ ಬಳಗಕ್ಕೆ ಡಿಕೆಶಿ ಸಂದೇಶ

ಬೆಂಗಳೂರು: ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಜಪ ಬೆನ್ನಲ್ಲೇ ಡಿಕೆಶಿ ಫಿಲಾಸಫಿ. ನನಗೆ ಅಧಿಕಾರ ಸಿಗುತ್ತೋ.. ಇಲ್ವೋ ಗೊತ್ತಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಆಪ್ತ ಬಳಗಕ್ಕೆ ಮತ್ತೊಮ್ಮೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂದೇಶ ರವಾನಿಸಿದ್ದಾರೆ. ಕೆಪಿಸಿಸಿ ಕಚೇಯಲ್ಲಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರು ಅವರ ಬಳಿ ಎಷ್ಟೆಲ್ಲಾ ಆಸ್ತಿ ಇತ್ತು. ಈಗ ಸೋನಿಯಾ ಗಾಂಧಿ, ಈಗ ರಾಹುಲ್ ಗಾಂಧಿ ಬಳಿ ಏನೂ ಇಲ್ಲ. ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಬಿಜೆಪಿ […]

ಮಹಿಳಾ ಎಸ್‍ಐ ಮುಂದೆಯೇ ಡ್ರ್ಯಾಗರ್ ಹಿಡಿದು ಅಟ್ಟಹಾಸ – ಪುಡಿ ರೌಡಿ ಅರೆಸ್ಟ್

ತುಮಕೂರು: ಮಹಿಳಾ ಎಸ್‍ಐ ಮುಂದೆಯೇ ಡ್ರ್ಯಾಗರ್ ಹಿಡಿದು ಆತಂಕ ಮೂಡಿಸಿದ್ದ ಪುಡಿ ರೌಡಿಯೊಬ್ಬನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿಯನ್ನು ಮಧು ಅಲಿಯಾಸ್ ಮೋಜ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಡ್ರ್ಯಾಗರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕಿ ಮೊಬೈಲ್ ಕಳ್ಳತನ ಮಾಡಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಮಹಿಳಾ ಎಸ್‍ಐ ಮಂಗಳಮ್ಮ ಅವರ ಮುಂದೆಯೂ ಆರೋಪಿ ಡ್ರ್ಯಾಗರ್ ಹಿಡಿದು ಪುಂಡಾಟ ಮಾಡಿದ್ದಾನೆ.  ಸುಮಾರು ಅರ್ಧ […]

ದೇಶದ ಬಡವರ ಆರಾಧ್ಯ ದೈವ ಆಗಿದ್ರು ಇಂದಿರಾಗಾಂಧಿ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್‍ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ (KPCC Office) ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಲಾಲ್ ಬಹಾದ್ದೂರ್ ಶಾಸ್ತ್ರಿ ಸಂಪುಟದಲ್ಲಿ ಮಂತ್ರಿ ಆಗಿದ್ರು. ಲಾಲ್ ಬಹಾದ್ದೂರ್ ಶಾಸ್ತ್ರಿ ನಂತರ ದೇಶದ ಪ್ರಧಾನಿ ಆದರು. ದೇಶದ ಬಡವರ ಆರಾಧ್ಯ ದೈವ ಆಗಿದ್ರು […]

ಮೆಡಿಕಲ್ ಸೀಟ್ ಕೊಡಿಸುವುದಾಗಿ 20 ಜನರಿಗೆ ಲಕ್ಷ ಲಕ್ಷ ವಂಚನೆ – ಆರೋಪಿ ಅಂದರ್

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ತೆಲಂಗಾಣ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದೆ. ನೀಟ್ ಪರೀಕ್ಷೆಯ ಫಲಿತಾಂಶದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಗಾಳ ಹಾಕುತ್ತಿದ್ದ. ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಒಳ್ಳೆಯ ಕಾಲೇಜ್‍ನಲ್ಲಿ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ […]

ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ IT ದಾಳಿ – ಆಭರಣ ವ್ಯಾಪಾರಿಗಳಿಗೆ ಬಿಗ್‌ ಶಾಕ್

ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ (ಜ್ಯುವೆಲರಿ ಶಾಪ್) ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ IT ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.  ಈ ಸಂದರ್ಭದಲ್ಲಿ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದಲ್ಲಿ ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ […]