July 30, 2026

ಹುಲಿ ಉಗುರು ಕೇಸ್‌ – ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ: ಆರಗ ಕಿಡಿ

ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.    ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ […]

ವಿದ್ಯಾರ್ಥಿನಿ ಮೇಲೆ ಆಸಿಡ್ – ಮುಖ್ಯಶಿಕ್ಷಕ ಅಮಾನತು

ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪದ ಮೇಲೆ ಶಾಲೆಯ ಮುಖ್ಯಶಿಕ್ಷಕನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಪ್ರಾಥಾಮಿಕ ಶಾಲೆಯಲ್ಲಿ ಅ.25 ರಂದು ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದರು. ಈ ವೇಳೆ 2ನೇ ತರಗತಿ ವಿದ್ಯಾರ್ಥಿನಿ ಒಬ್ಬಳ ಮೇಲೆ ಮುಖ್ಯಶಿಕ್ಷಕ ರಂಗಸ್ವಾಮಿ ಆಸಿಡ್ ಎರಚಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆಯಿಂದಾಗಿ ಬಾಲಕಿಯ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ.  ಈ ಸಂಬಂಧ ಪೋಷಕರು ಹಾಗೂ ಗ್ರಾಮಸ್ಥರು ಮುಖ್ಯ ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು. […]

ಹುಲಿ ಉಗುರು ಪ್ರಕರಣ – ಸ್ಯಾಂಡಲ್‌ವುಡ್ ನಟರ ಬಳಿಕ ರಾಜಕಾರಣಿಗಳಿಗೂ ಸಂಕಷ್ಟ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟರ ಬಳಿಕ ಈಗ ರಾಜಕಾರಣಿಗಳಿಗೂ ಸಂಕಷ್ಟ ಶುರುವಾಗಿದೆ. ಕೆಲ ರಾಜಕಾರಣಿಗಳ ಆಪ್ತರು, ಮಕ್ಕಳು ಹುಲಿ ಉಗುರಿನ ಸುಳಿಯಲ್ಲಿ ಸಿಲುಕಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಹುಬ್ಬಳ್ಳಿ ಕಾಂಗ್ರೆಸ್ ಯುವ ನಾಯಕ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ ರಜತ್ ಉಳ್ಳಾಗಡ್ಡಿಮಠ ಮದುವೆ ವೇಳೆ ವ್ಯಾಘ್ರನಖ ಮಾದರಿ ಪೆಂಡೆಂಟ್ ಧರಿಸಿದ್ದ ಫೋಟೋಗಳು ವೈರಲ್ ಆಗಿವೆ. ಈ ವಿಚಾರದಲ್ಲಿ ಅರಣ್ಯ ಅಧಿಕಾರಿಗಳ ನಡೆ ಕುತೂಹಲ ಕೆರಳಿಸಿದೆ. ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ […]

ನಕಲಿ ವೈದ್ಯರನ್ನ ದೂರವಿಟ್ಟಾಗ ಮಾತ್ರ ನಾಟಿ ವೈದ್ಯ ಪದ್ಧತಿ ಮುಖ್ಯವಾಹಿನಿಗೆ ಬರಲು ಸಾಧ್ಯ: ದಿನೇಶ್ ಗುಂಡೂರಾವ್

ಬೆಂಗಳೂರು: ಆಧುನಿಕ ವೈದ್ಯಕೀಯದ ಜೊತೆಗೆ ಪಾರಂಪರಿಕ ವೈದ್ಯ ಪದ್ದತಿಯನ್ನ ನಾವು ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಾಗಮಂಗಲ ಆದಿಚುಂಚನಗಿರಿ ಸಂಸ್ಥಾನದಲ್ಲಿ ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,‌ ಬೆಳೆಯುತ್ತಿರುವ ವಿಜ್ಞಾನ-ತಂತ್ರಜ್ಞಾನದ ಯುಗದಲ್ಲಿ ಬಹುತೇಕರು ನಾಟಿ ವೈದ್ಯ ಪದ್ದತಿಯನ್ನ ನಂಬಲ್ಲ. ಆದರೆ ಅಲೋಪತಿ ಬರುವ ಮುನ್ನ ನಮ್ಮ ರಾಜ ಮಹಾರಾಜರಿಗೆ ಚಿಕಿತ್ಸೆ ನೀಡಿ, ಕಾಯಿಲೆಗಳನ್ನ ವಾಸಿಮಾಡುತ್ತಿದ್ದುದು ನಮ್ಮ ಗಿಡಮೂಲಿಕೆಗಳ ಔಷಧಿಯ ನಾಟಿ ಪದ್ದತಿ ಎಂಬುದನ್ನ ಮರೆಯಬಾರದು ಎಂದರು.‌  ಗಿಡಮೂಲಿಕೆಗಳ ಚಿಕಿತ್ಸೆ, ಪಾರಂಪರಿಕ […]

27 ರನ್‌ ಅಂತರದಲ್ಲಿ 5 ವಿಕೆಟ್‌ ಉಡೀಸ್‌, ಇಂಗ್ಲೆಂಡ್‌ಗೆ ಹೀನಾಯ ಸೋಲು – ಲಂಕಾಗೆ 8 ವಿಕೆಟ್‌ಗಳ ಜಯ

ಬೆಂಗಳೂರು: ಸಂಘಟಿತ ಬೌಲಿಂಗ್‌ ಹಾಗೂ ಪಾಥುಮ್‌ ನಿಸ್ಸಾಂಕ ಭರ್ಜರಿ ಬ್ಯಾಟಿಂಗ್‌ನಿಂದ ಶ್ರೀಲಂಕಾ ತಂಡವು, ಇಂಗ್ಲೆಂಡ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದೆ. 5 ಪಂದ್ಯಗಳ ಪೈಕಿ 2ರಲ್ಲಿ ಗೆಲುವು ಸಾಧಿಸಿದ್ದ ಪಾಕಿಸ್ತಾನ ತಂಡವು 4 ಅಂಕ, -0.400 ರನ್‌ ರೇಟ್‌ನೊಂದಿಗೆ 5ನೇ ಸ್ಥಾನದಲ್ಲಿತ್ತು. ಆದ್ರೆ ಆಂಗ್ಲರ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಲಂಕಾ 4 ಅಂಕ, -0.205 ರನ್‌ರೇಟ್‌ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದು, ಪಾಕ್‌ […]

ಕೋರಮಂಗಲ ಕೆಫೆಯಲ್ಲಿ ಅಗ್ನಿ ಅವಘಡ – 54 ಪಬ್‌ಗಳಿಗೆ ಬಿಬಿಎಂಪಿಯಿಂದ ಬೀಗ

ಬೆಂಗಳೂರು: ಕೋರಮಂಗಲದ ಕೆಫೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಬೆನ್ನಲ್ಲೇ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಇಲ್ಲಿಯವರೆಗೆ ನಗರದ 54 ಪಬ್‌ಗಳಿಗೆ ಬೀಗ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ನಗರದ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 6 ದಿನಗಳಿಂದ ಒಟ್ಟು 1,058 ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸಿದ್ದಾರೆ. ಇದರಲ್ಲಿ 492 ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬುಧವಾರ ಒಂದೇ ದಿನ 234 ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸಿದ್ದು, ಅವುಗಳ […]

ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.  ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. […]

`ಕೈ ಕಮಲ’ ಕ್ರೆಡಿಟ್ ಗಲಾಟೆ – ಬಿಜೆಪಿ ಶಾಸಕ ಚಾಲನೆ ನೀಡಿದ್ದ ಕಾಮಗಾರಿಗೆ ಮತ್ತೆ ಭೂಮಿ ಪೂಜೆ

ಚಿಕ್ಕೋಡಿ: ಲಕ್ಷ್ಮಣ್ ಸವದಿ ಕ್ಷೇತ್ರ ಅಥಣಿಯಲ್ಲಿ ಕೈ ಕಮಲ ಮಧ್ಯೆ ಕ್ರೆಡಿಟ್ ಕಿತ್ತಾಟ ಶುರುವಾಗಿದೆ. ಯಕ್ಕಂಚಿ – ಮುಸಲ್ಯಾನಖೋಡಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ವಿಚಾರವಾಗಿ ಈಗಾಗಲೇ ಅಂದಿನ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ ನೀಡಿದ್ದ ಕಾಮಗಾರಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಮತ್ತೆ ಭೂಮಿ ಪೂಜೆ ನೆರವೇರಿಸಿದ್ದಾರೆ.PauseUnmute ಈ ವಿಚಾರಕ್ಕೆ ಮಹೇಶ್ ಕುಮಟಳ್ಳಿ ಗರಂ ಆಗಿದ್ದಾರೆ. ಈ ಬಗ್ಗೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮಹೇಶ್ ಕುಮಟಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಲಕ್ಷ್ಮಣ್ ಸವದಿ […]

‘ಗೃಹಜ್ಯೋತಿ’ ವಿಸ್ತರಣೆಗೆ ಮುಂದಾದ ‘ಗ್ಯಾರಂಟಿ’ ಸರ್ಕಾರ

ಬೆಂಗಳೂರು: ಗೃಹಜ್ಯೋತಿ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ರಾಜ್ಯದ ಕೋಟಿ ಕೋಟಿ ಮನೆಗಳಿಗೆ ಉಚಿತವಾಗಿ ಬೆಳಕು ನೀಡ್ತಿರೋ ಈ ಯೋಜನೆ. ದೇವರ ಅಂಗಳಕ್ಕೂ ಕಾಲಿಡಲಿದೆ. ಅಂದ್ರೆ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರೋ ದೇವಾಲಯಗಳಿಗೂ ಶೀಘ್ರದಲ್ಲೇ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​​ ಸಿಗಲಿದೆ. ಕೋಟಿ ಕುಟುಂಬಗಳ ಮನೆ ಮನಗಳಿಗೆ ಬೆಳಕು ನೀಡ್ತಿರೋ ಯೋಜನೆ ಗೃಹಜ್ಯೋತಿ ಆಗಿದೆ. ಈ ಯೋಜನೆಯನ್ನ ರಾಜ್ಯದ ಸಾಕಷ್ಟು ಮಂದಿ ಬಳಸುತ್ತಿದ್ದಾರೆ. 200 ಯೂನಿಟ್​​ನಷ್ಟು ಉಚಿತವಾಗಿ ವಿದ್ಯುತ್​ ಪಡೆಯುತ್ತಿದ್ರೂ ಕೆಲವರು ಯೋಜನೆಯ ವಿರುದ್ಧ ಕಿಡಿಕಾರ್ತಿದ್ದಾರೆ. ಇತ್ತೀಚಿಗೆ ಅಪಸ್ವರವೂ […]

ಹುಲಿ ಉಗುರು ಪೆಂಡೆಂಟ್ ಪ್ರಕರಣ: ಅರಣ್ಯಾಧಿಕಾರಿಗಳಿಂದ ಮತ್ತೊಂದು ದಾಳಿಗೆ ಪ್ಲಾನ್

ಬೆಂಗಳೂರು: ಹುಲಿ ಉಗುರು ಧರಿಸಿದ ಹಳ್ಳಿಕಾರ್ ಸಂತೋಷ್ ಬಿಗ್‌ಬಾಸ್ ಮನೆಯಲ್ಲಿ ಅರೆಸ್ಟ್ ಆದ ಬೆನ್ನಲ್ಲೆ, ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಸೆಲೆಬ್ರೆಟಿಗಳ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸೆಲೆಬ್ರಿಟಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಒತ್ತಡ ಹೆಚ್ಚಾಗುತ್ತಿದ್ದಂತೆ ಅರಣ್ಯಾಧಿಕಾರಿಗಳು ಹುಲಿ ಉಗುರು ಪೆಂಡೆಂಟ್ ಧರಿಸಿದ ಸೆಲೆಬ್ರೆಟಿಗಳಿಗೆ ನೋಟೀಸ್ ಜಾರಿ ಮಾಡಿ ನಿನ್ನೆ ತಲಾಶ್ ಮಾಡಿದ್ದಾರೆ. ಇದೇ ಬೆನ್ನಲ್ಲೆ ಈಗ ಮತ್ತೊಂದು ಬೆಳವಣಿಗೆ ನಡೆದಿದ್ದು ಅರಣ್ಯಾಧಿಕಾರಿಗಳು ಮತ್ತೊಂದು ದಾಳಿಗೆ ಪ್ಲಾನ್ ಮಾಡಿದ್ದಾರೆ. ಹೌದು ಸೆಲೆಬ್ರೆಟಿಗಳ ಮನೆಗಳ ಮೇಲೆ […]