July 30, 2026

ಮೋದಿಯೇ ನಮ್ಮ ದೇವರು: ಪ್ರತಾಪ್ ಸಿಂಹ

ಮೈಸೂರು: ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ ಆಗಿದ್ದು, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು ಹೇಳಲು, ನಾನು ಬಹಳ ಜ್ಯೂನಿಯರ್. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ ಎಂದರು. ನಾನು ಪಕ್ಷದ ನೇಮಕದ ವಿಚಾರದಲ್ಲಿ ಹೇಳಲು ಆಗುವುದಿಲ್ಲ. ಪಕ್ಷದ ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಶೋಭಾ […]

ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು – ಮೂವರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಮಟಾದ ಬಾಡದಲ್ಲಿ ನಡೆದಿದೆ. ಮತ್ತೊಂದು ಕಡೆ ಮುರ್ಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಮೂರು ಜನ ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೃತನನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ 11 ಜನರೊಂದಿಗೆ ಕುಮಟಾಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಹೋಗಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಕುಮಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇನ್ನೊಂದೆಡೆ ಮುರ್ಡೇಶ್ವರದಲ್ಲಿ ಬಾಗಲಕೋಟೆಯಿಂದ […]

ಸರ್ಕಾರಿ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೆಸರಲಿ ಐ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ . ಸಾವಿರಾರು ಜನರು ದೃಷ್ಠಿ ದೋಷದಿಂದ ಕಣ್ಣು ಕಳೆದುಕೊಂಡವರು ಪ್ರಪಂಚ ನೋಡಲು ಆಗದೆ ಕಣ್ಣು ಪಡೆಯಲು ಕ್ಯೂನಲ್ಲಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ದಿವಗಂತ ನಟ ಪುನೀತ್ ರಾಜ್​​ಕುಮಾರ್ ಹೆಸರಲ್ಲಿ ಐ ಬ್ಯಾಂಕ್ ಓಪನ್ ಮಾಡಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ. ಅನೇಕ ಕಾರಣಗಳಿಂದ ಕಣ್ಣು ಕಳೆದುಕೊಂಡವರು, ದೃಷ್ಠಿ ದೋಷದಿಂದ ಬಳಲುತ್ತಿರುವವರು ಜಗತ್ತು ನೋಡಲು ಕಣ್ಣುಪಡೆಯಲು ಕಾಯುತ್ತಿದ್ದಾರೆ. ಇಂತವರಿಗೆ […]

ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ ಸೌಂದರ್ಯ ಬಗ್ಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಮಾತನಾಡಿದ ವಿಚಾರಕ್ಕೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ (Apology)  ಕೇಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ. ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಕ್ಷಮೆ ಕೋರಿದ್ದಾರೆ. ಭಾನುವಾರ ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ. ಸಾವಿರಾರು ಜನರಿದ್ದ ಸಭೆಯಲ್ಲಿ ಮಾತನಾಡಿದ್ದೇನೆ. ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ. […]

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ ಎಂಬ ವಿಚಾರ ಪಕ್ಷದ ಒಳಗೆ ಗುಸು ಗುಸು ಚರ್ಚೆ ಶುರುವಾಗಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಮೂರು ಶಕ್ತಿ.. ಸ್ತ್ರೀಶಕ್ತಿ ಅಸ್ತ್ರ್ರ ಪ್ರಯೋಗಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.PlayUnmute ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನೂ ಎದುರಿಸಬೇಕು. ಸ್ವಪಕ್ಷೀಯ ಬಣಗಳ ಕಿತ್ತಾಟಕ್ಕೂ ಬ್ರೇಕ್ ಹಾಕಬೇಕು. ಮಂಗಳವಾರ ಅಥವಾ ಬುಧವಾರದ ಒಳಗೆ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಕೇಂದ್ರ ಸಚಿವೆ ಶೋಭಾ […]

ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

ಟೆಲ್ ಅವಿವ್: ಇಸ್ರೇಲ್ ಸೋಮವಾರ ಮುಂಜಾನೆ ಗಾಜಾದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್ ಅನ್ನು ರಾತ್ರಿಯಿಡೀ ಹೊಡೆದಿದೆ. ದಾಳಿಗಳು ಕೇಂದ್ರ ಮತ್ತು ಉತ್ತರದ ಮೇಲೆ ಕೇಂದ್ರೀಕೃತವಾಗಿವೆ ಎಂದು ವರದಿಗಳು ತಿಳಿಸಿವೆ. ಸೋಮವಾರ ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ (Hospital) ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್ ಆಸ್ಪತ್ರೆಗಳ […]

ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ನಗರದ ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಮಡಿವಾಳ ಮಾರ್ಕೆಟ್‍ಗಳಲ್ಲಿ ಜನಸ್ತೋಮವೇ ತುಂಬಿ ತುಳುಕುತ್ತಿದೆ. ಹೌದು, ಬೆಲೆ ಏರಿಕೆ ನಡುವೆಯೂ ಕೆ.ಆರ್ ಮಾರ್ಕೆಟ್‍ನಲ್ಲಿ ಹೂ, ಹಣ್ಣು, ತರಕಾರಿ ಖರೀದಿಗೆ ಜನಸಾಗರವೇ ಹರಿದುಬಂದಿದೆ. ಆಯುಧ ಪೂಜೆಗೆ ಬೂದುಕುಂಬಳಕಾಯಿ ಹಾಗೂ ಬಾಳೆ ಕಂಬಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಇರುವವರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. […]

ಡಿಕೆಶಿ ವಾರ್ನಿಂಗ್‍ಗೂ ಡೋಂಟ್‍ಕೇರ್- ಸಚಿವ ಆಕಾಂಕ್ಷಿಗಳಿಂದ ಬದಲಾವಣೆ ಚರ್ಚೆ

ಬೆಂಗಳೂರು: ಪಕ್ಷದ ಕುರಿತಾಗಿ ಯಾರು ಕೂಡ ಬಹಿರಂಗ ಹೇಳಿಕೆ ನೀಡಬಾರದು ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹುಕುಂ ರಾಜ್ಯ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಿದೆ. ಒಳಗೊಳಗೆ ಈ ಬಗ್ಗೆ ಅಸಮಾಧಾನ ವ್ಯಕ್ತವಾಗ್ತಿದ್ರೂ ಬಹಿರಂಗವಾಗಿ ಯಾರು ಕೂಡ ಇದರ ವಿರುದ್ಧ ಮಾತಾಡ್ತಿಲ್ಲ. ಬದಲಿಗೆ ಡಿಕೆ ಶಿವಕುಮಾರ್ ಸೂಚನೆ ಸರಿಯಾಗಿಯೇ ಇದೆ ಎಂದು ಹೇಳುತ್ತಲೇ, ಅವರ ಸೂಚನೆಯನ್ನು ಉಲ್ಲಂಘಿಸತೊಡಗಿದ್ದಾರೆ. ಪಕ್ಷದ ವಿಚಾರ ಬಹಿರಂಗವಾಗಿ ಮಾತಾಡಬೇಡಿ ಅಂದ್ರೂ ಕೇಳದ ಶಾಸಕರು, ಸಚಿವ ಸಂಪುಟ ಪುನಾರಚನೆಗೆ ಪಟ್ಟು ಹಿಡಿದಿರುವ ಲಕ್ಷಣಗಳು ಕಾಣ್ತಿವೆ. 135 […]

ಪರಶುರಾಮ ಹೆಸರಲ್ಲಿ ಕಾಂಗ್ರೆಸ್, ಬಿಜೆಪಿ ಸಂಘರ್ಷ- ಎರಡೂ ಪಕ್ಷಗಳ ವಿರುದ್ಧ FIR

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮತ್ತೊಂದು ರಾಜಕೀಯ ಫೈಟ್ ನಡೆಯುತ್ತಿದೆ. ಪರಶುರಾಮ ಮೂರ್ತಿಯ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಜಟಾಪಟಿ ನಡೆಸುತ್ತಿದೆ. ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್ ಒಟ್ಟು 14 ಕೋಟಿ ರೂಪಾಯಿಯ ಪ್ರಾಜೆಕ್ಟ್. ಸರ್ಕಾರದಿಂದ ಬಿಡುಗಡೆಯಾಗಿರುವುದು ಸುಮಾರು ಆರು ಕೋಟಿ ಚಿಲ್ಲರೆ. ಚುನಾವಣೆಯ ತರಾತುರಿಯಲ್ಲಿ ಬಿಜೆಪಿ ಕಂಚು ಮತ್ತು ಫೈಬರ್ ಮಿಶ್ರಿತ ಮೂರ್ತಿಸ್ಥಾಪನೆ ಮಾಡಿ ಯೋಜನೆಯನ್ನು ಉದ್ಘಾಟಿಸಿತು. ಬಾಕಿ ಉಳಿದ ಕಾಮಗಾರಿಗೆ ಚಾಲನೆ ಸಿಗುತ್ತಿದ್ದಂತೆ ಕಾಂಗ್ರೆಸ್ ಬಿಜೆಪಿ ನಡುವೆ ದೊಡ್ಡ ಜಟಾಪಟಿ ನಡೆಯುತ್ತಿದೆ. ಕಳೆದ ಎರಡು ತಿಂಗಳಿನಿಂದ ಈಚೆಗೆ […]

‘70 MLA ಬೆಂಬಲ ಇದೆ’; ಡಿಸಿಎಂ ಡಿಕೆಶಿ ಪರ ಶಿವಗಂಗಾ ಬ್ಯಾಟಿಂಗ್​!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇದು ಡಬಲ್ ಸ್ಟೇರಿಂಗ್ ಸರ್ಕಾರ ಅಂತ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಸದ್ಯ ಕಾಂಗ್ರೆಸ್ ನಲ್ಲಿ ಆಗ್ತಾ ಇರೋ ಬೆಳವಣಿಗೆ ಗಮನಿಸಿದರೆ ಮನೆಯೊಂದು ಮೂರು ಬಾಗಿಲು ಅನ್ನೋದು ಗೊತ್ತಾಗ್ತಾ ಇದೆ. ಪಕ್ಷ ಅಧಿಕಾರಕ್ಕೆ ಬಂದು 6 ತಿಂಗಳು ಕಳೆಯುವ ವೇಳೆಗೆ ನೂತನ ಸಿಎಂ ಪರ ವಿರೋಧ ಚರ್ಚೆ ಆರಂಭವಾಗಿದೆ. ಇದು ಸಿಎಂ ಹಾಗೂ ಡಿಸಿಎಂಗೆ ಇರುಸು ಮುರುಸು ಸೃಷ್ಟಿಸಿದೆ. ಕಾಂಗ್ರೆಸ್‌ನಲ್ಲಿ ಬುಸುಗುಟ್ಟಿದ ಬಣ ರಾಜಕೀಯ! ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಬಣ, […]