ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯನ ಕೊಲೆ
ಕೋಲಾರ: ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, 40 ವರ್ಷದ ಅನಿಲ್ ಕೊಲೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯ. ಮಿಣಸಂದ್ರ ಗ್ರಾಮದವರಾದ ಹಾಲಿ ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಮೃತ ಅನಿಲ್ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರಾಗಿದ್ದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಸಾಧ್ಯತೆ ಇದ್ದು, […]












































































































































































































































































































































































































































































































































































































































































































































































































































































































































































































































































































































